ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ: ತುರ್ತು ಒಪಿಡಿ ಸೇವೆ ಬಳಸಿಕೊಳ್ಳಿ


Team Udayavani, Apr 16, 2020, 6:06 AM IST

ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ: ತುರ್ತು ಒಪಿಡಿ ಸೇವೆ ಬಳಸಿಕೊಳ್ಳಿ

ಸಾಂದರ್ಭಿಕ ಚಿತ್ರ.

ಉಡುಪಿ: ಕೋವಿಡ್ 19 ಭೀತಿಯಿಂದ ಜನರು ಹೊರಗಡೆ ಬರಲು ಭಯಪಡುತ್ತಿದ್ದು, ಇದರಿಂದಾಗಿ ಅನಾರೋಗ್ಯ ಪೀಡಿತರು ಆಸ್ಪತ್ರೆ ತೆರಳದೆ ಅಪಾಯವನ್ನು ಆಹ್ವಾನಿಸುತ್ತಿದ್ದಾರೆ.

ಹೆದರುವ ಅಗತ್ಯವಿಲ್ಲ
ಕೋವಿಡ್ 19 ಭೀತಿಯಿಂದ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಯಲ್ಲಿ ತುರ್ತು ಸೇವೆ ಹೊರತು ಪಡಿಸಿ ಇತರೆ ಸೇವೆಯನ್ನು ರದ್ದುಪಡಿಸಲಾಗಿದೆ. ಇದರಿಂದ ಭಯಗೊಂಡ ರೋಗಿಗಳು ತುರ್ತು ಸೇವೆಗೂ ಆಸ್ಪತ್ರೆಗಳಿಗೆ ತೆರಳದೆ ಮನೆಯಲ್ಲೇ ಇರುವುದರಿಂದ ಅಪಾಯ ಆಹ್ವಾನಿಸುತ್ತಿರುವ ಘಟನೆಗಳು ವರದಿಯಾಗುತ್ತಿವೆ.

ತುರ್ತು ಒಪಿಡಿ ಸೇವೆಗೆ ಅವಕಾಶ
ಜಿಲ್ಲೆಯಲ್ಲಿ ಮಣಿಪಾಲ ಕಸ್ತೂರ್ಬಾ, ಆದರ್ಶ ಆಸ್ಪತ್ರೆ, ಗಾಂಧಿ ಆಸ್ಪತ್ರೆ, ನ್ಯೂಸಿಟಿ, ಹೈಟೆಕ್‌ ಆಸ್ಪತ್ರೆಯಲ್ಲಿ ಪ್ರಸ್ತುತ ತುರ್ತು ಪರಿಸ್ಥಿತಿಯಲ್ಲಿ ಒಪಿಡಿ ಮತ್ತು ವೈದ್ಯಕೀಯ ಸೇವೆಗೆಳು ಕಾರ್ಯನಿರ್ವಹಿಸುತ್ತಿವೆ.

ತುರ್ತು ಸರ್ಜರಿ
ಲಾಕ್‌ಡೌನ್‌ ಪರಿಣಾಮ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ವಿವಿಧ ಕಡೆಯಿಂದ ಆಗಮಿಸುತ್ತಿದ್ದ ರೋಗಿಗಳು ಸಂಖ್ಯೆ ಕಡಿಮೆಯಾಗಿದೆ. ತುರ್ತು ವೈದ್ಯಕೀಯ ಅಗತ್ಯಗಳಿಗೆ ಮಾತ್ರ ಜಿಲ್ಲೆ ಗಡಿಗಳಲ್ಲಿ ಆಸ್ಪತ್ರೆಗೆ ರೋಗಿಗಳನ್ನು ಬಿಟ್ಟುಕೊಳ್ಳಲಾಗುತ್ತಿದೆ. ಎಮರ್ಜೆನ್ಸಿ ಸರ್ಜರಿ ರೋಗಿಗಳಿಗೆ ಸೂಚನೆ ನೀಡಿ ಆಸ್ಪತ್ರೆಗೆ ಕರೆಸಲಾಗುತ್ತಿದೆ. ಉಳಿದ ಸರ್ಜರಿಗಳನ್ನು ಮುಂದೂಡಲಾಗಿದೆ.

ಹೊರರೋಗಿಗಳ ಸೇವೆ ಕುಸಿತ
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ, ಆದರ್ಶ ಆಸ್ಪತ್ರೆ, ಗಾಂಧಿ, ಹೈಟೆಕ್‌, ನ್ಯೂಸಿಟಿ, ಮಿತ್ರ, ಲಲಿತ್‌, ಡಾ| ಎ.ವಿ.ಬಾಳಿಗಾ ದೊಡ್ಡಣಗುಡ್ಡೆ ಆಸ್ಪತ್ರೆಗಳಲ್ಲಿಯೂ ರೋಗಿಗಳ ಸಂಖ್ಯೆ ಇಳಿಮುಖವಾಗಿದ್ದು, ಸರ್ಜರಿ, ಮೊದಲಾದ ವೈದ್ಯಕೀಯ ಚಟುವಟಿಕೆ ಶೇ.70ಕ್ಕೆ ತಗ್ಗಿದೆ. ಆಸ್ಪತ್ರೆಗಳು ಟೆಲಿ ಮೆಡಿಸನ್‌ ವ್ಯವಸ್ಥೆ ಮೂಲಕ ವೈದ್ಯರೊಂದಿಗೆ ಸಮಾಲೋಚಿಸುವ ವ್ಯವಸ್ಥೆಯನ್ನು ಮಾಡುತ್ತಿವೆ.

ಆಸ್ಪತ್ರೆಯಲ್ಲಿ ತುರ್ತು ಒಪಿಡಿ ಸೇವೆಗಳಿಗೆ ಅವಕಾಶ ನೀಡಲಾಗಿದೆ. ಆಸ್ಪತ್ರೆಗೆ ಬರುವ ರೋಗಿಗಳನ್ನು ಮೊದಲಿಗೆ ಸ್ಕ್ರೀನಿಂಗ್‌ ಒಳಪಡಿಸಲಾಗುತ್ತಿದೆ. ಕೊರೊನಾ ಲಕ್ಷಣ ಕಂಡು ಬಂದವರನ್ನು ಜಿಲ್ಲಾಸ್ಪತ್ರೆಗೆ ಕಳುಹಿಸಲಾಗುತ್ತದೆ. ಉಳಿದವರಿಗೆ ಅಗತ್ಯವಿರುವ ಚಿಕಿತ್ಸೆ ನೀಡಲಾಗುತ್ತಿದೆ. ತುರ್ತು ಒಪಿಡಿ ಸೇವೆ ಬಯಸುವವರು ಬರಬಹುದು. ಆರೋಗ್ಯದ ಬಗ್ಗೆ ನಿರ್ಲಕ್ಷé ಬೇಡ.
– ಡಾ| ಜಿ.ಎಸ್‌. ಚಂದ್ರಶೇಖರ್‌,
ವೈದ್ಯಕೀಯ ನಿರ್ದೇಶಕ, ಆದರ್ಶ ಆಸ್ಪತ್ರೆ.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಕೆಲವೊಂದು ಹೊರರೋಗಿ ವಿಭಾಗಗಳು ಬೆಳಗ್ಗೆ 8.30ರಿಂದ ಅಪರಾಹ್ನ 1 ಗಂಟೆವರೆಗೆ ಸೇವೆಗೆ ಲಭ್ಯವಾಗಲಿವೆ. ರೋಗಿ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ಅನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಲಾಗುವುದು. ಪ್ರತಿಯೊಬ್ಬರೂ ಕಡ್ಡಾಯವಾಗಿ ಮುಖಗವಸು (ಮಾಸ್ಕ್) ಧರಿಸಬೇಕು.
-ಡಾ| ಅವಿನಾಶ ಶೆಟ್ಟಿ ,
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

accident

Udupi: ಬೈಕ್‌ ಢಿಕ್ಕಿ; ವ್ಯಕ್ತಿಗೆ ಗಾಯ; ಪ್ರಕರಣ ದಾಖಲು

2

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ

complaint

Udupi: ಕಾರ್ಮಿಕನ ಬೈಕ್‌ ಕಳ್ಳತನ; ಪ್ರಕರಣ ದಾಖಲು

sand

Karkala: ಪರವಾನಿಗೆ ಇಲ್ಲದೆ ಮರಳು ಲೂಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.