Ration: ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ: ಮುನಿಯಪ್ಪ
Team Udayavani, Nov 6, 2023, 8:35 PM IST
ಮೈಸೂರು: ಅನ್ನ ಸುವಿಧಾ ಕಾರ್ಯಕ್ರಮದ ಮೂಲಕ 90 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ತಲುಪಿಸಲಾಗುತ್ತದೆ. ನ್ಯಾಯಬೆಲೆ ಅಂಗಡಿಗೆ ಬರಲಾಗದವರಿಗೆ ಪಡಿತರ ತಲುಪಿಸುವ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವತಿಯಿಂದ ಸೋಮವಾರ ಆಯೋಜಿಸಿದ್ದ ಒಂದು ರಾಷ್ಟ್ರ ಒಂದು ಪಡಿತರ ಚೀಟಿ ಜಾಗೃತಿ ಕಾರ್ಯಕ್ರಮದ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ 2.95 ಲಕ್ಷ ಕೋಟಿ ಬಿಪಿಎಲ್ ಕಾರ್ಡ್‌ದಾರರಿದ್ದಾರೆ. ಈ ಪೈಕಿ 90 ವರ್ಷ ಮೇಲ್ಪಟ್ಟ ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ವಿಶೇಷಚೇತನರು, ಅಸಹಾಯಕರಿಗೂ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸುವ ಸಂಬಂಧ ಚಿಂತನೆ ನಡೆಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹಣ ಬದಲು 10 ಕೆ.ಜಿ. ಅಕ್ಕಿ ಕೊಡುವ ಸಂಬಂಧ ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸುತ್ತೇನೆ. ನ್ಯಾಯಬೆಲೆ ಅಂಗಡಿ ಮಾಲೀಕರ ಸಮಸ್ಯೆಗಳನ್ನು ವಾರದೊಳಗೆ ಸಭೆ ಮಾಡಿ ಇತ್ಯರ್ಥ ಪಡಿಸುವುದಾಗಿ ಹೇಳಿದರು.
18 ಲಕ್ಷ ಜನರಿಗಿಲ್ಲ ಹಣ: 1.28 ಲಕ್ಷ ಬಿಪಿಎಲ್ ಕಾರ್ಡ್‌ದಾರರಿದ್ದಾರೆ. 1.10 ಕೋಟಿ ಕಾರ್ಡ್‌ಗಳಿಗೆ 5 ಕೆ.ಜಿ. ಹಣವನ್ನು ಜಮೆ ಮಾಡಲಾಗುತ್ತಿದೆ. 5 ಲಕ್ಷ ಕಾರ್ಡ್‌ದಾರರು ಕಾಲವಾಗಿದ್ದಾರೆ. 5 ಲಕ್ಷ ಕಾರ್ಡ್‌ಗಳಿಗೆ ಯಜಮಾನರಿಲ್ಲ. ಉಳಿದ 8 ಲಕ್ಷಕ್ಕೆ ಮುಖ್ಯಸ್ಥರು, ಬ್ಯಾಂಕ್ ಖಾತೆ ಮಾಹಿತಿ ತಪ್ಪಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸಿ ಕಾರ್ಡ್‌ದಾರರಿಗೆ ಹಣ ಜಮೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ನುಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Pro Kabaddi League: ಗುಜರಾತ್ ಜೈಂಟ್ಸ್ ವಿರುದ್ಧದಬಾಂಗ್ ಡೆಲ್ಲಿಗೆ ಗೆಲುವು
PAK Vs SA: ಸರಣಿ ಕ್ಲೀನ್ ಸ್ವೀಪ್ ಗೈದ ಪಾಕಿಸ್ಥಾನ
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
BCCI: ಇನ್ನೆರಡು ಟೆಸ್ಟ್ ನಿಂದ ಮೊಹಮ್ಮದ್ ಶಮಿ ಹೊರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.