8 ರಾಜ್ಯದಲ್ಲಿ ಶೇ.85 ಸೋಂಕಿತರು: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಮಾಹಿತಿ

Team Udayavani, Jun 28, 2020, 11:22 AM IST

8 ರಾಜ್ಯದಲ್ಲಿ ಶೇ.85 ಸೋಂಕಿತರು: ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಮಾಹಿತಿ

ಹೊಸದಿಲ್ಲಿ: ಎಂಟು ರಾಜ್ಯಗಳು, ಶೇ.85 ಪ್ರಕರಣಗಳು, ಶೇ.87 ಸಾವು… ಭಾರತವು ಪ್ರತಿ ದಿನ ಸೋಂಕಿತರ ಸಂಖ್ಯೆಯಲ್ಲಿ ತನ್ನದೇ ದಾಖಲೆಯನ್ನು ಸರಿಗಟ್ಟುತ್ತಾ ಸಾಗುತ್ತಿರುವ ನಡುವೆಯೇ, ದೇಶದ ಒಟ್ಟು ಪ್ರಕರಣಗಳ ಪೈಕಿ ಶೇ.85ರಷ್ಟು ಸೋಂಕಿತರು ಕೇವಲ 8 ರಾಜ್ಯಗಳಿಗೆ ಸೀಮಿತವಾಗಿದ್ದಾರೆ ಎಂಬ ಮಾಹಿತಿ ಯೊಂದು ಹೊರಬಿದ್ದಿದೆ.

ಈ ವಿಚಾರ ತಿಳಿಸಿದ್ದು ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌. ಶನಿವಾರ ನಡೆದ ಸಚಿವರ ಸಮಿತಿಯ 17ನೇ ಸಭೆಯಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ, ದಿಲ್ಲಿ, ತಮಿಳುನಾಡು, ಗುಜರಾತ್‌, ತೆಲಂಗಾಣ, ಉತ್ತರಪ್ರದೇಶ, ಆಂಧ್ರಪ್ರದೇಶ ಮತ್ತು ಪಶ್ಚಿಮ ಬಂಗಾಲದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದೆ. ದೇಶದ ಒಟ್ಟು ಪ್ರಕರಣಗಳ ಪೈಕಿ ಶೇ.85.5ರಷ್ಟು ಪ್ರಕರಣಗಳು ಈ ರಾಜ್ಯಗಳಲ್ಲಿ ಪತ್ತೆಯಾಗಿದ್ದು, ಮೃತರ ಪೈಕಿ ಶೇ.87ರಷ್ಟು ಮಂದಿಯೂ ಈ 8 ರಾಜ್ಯಗಳಿಗೆ ಸೇರಿದವರು ಎಂದು ಹೇಳಿದ್ದಾರೆ.

ಸೋಂಕು ಬಾಧಿತ ರಾಜ್ಯಗಳ ಪೈಕಿ ಮಹಾರಾಷ್ಟ್ರ (1.53 ಲಕ್ಷ ಪ್ರಕರಣ, 7 ಸಾವಿರಕ್ಕೂ ಹೆಚ್ಚು ಸಾವು) ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನಗಳಲ್ಲಿ ದೆಹಲಿ (77,240 ಪ್ರಕರಣ, 2,492 ಸಾವು) ಮತ್ತು ತಮಿಳುನಾಡು (74,622 ಸೋಂಕಿತರು, 957 ಸಾವು) ಇವೆ ಎಂದೂ ಅವರು ತಿಳಿಸಿದ್ದಾರೆ. ಜತೆಗೆ, ಆರೋಗ್ಯ ತಜ್ಞರು, ಸಾಂಕ್ರಾಮಿಕ ರೋಗಶಾಸ್ತ್ರಜ್ಞರನ್ನು ಒಳಗೊಂಡ 15 ತಂಡಗಳನ್ನು ಕೇಂದ್ರ ಸರಕಾರ ರಚಿಸಿದ್ದು, ಸೋಂಕಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರಕಾರಗಳಿಗೆ ಈ ತಂಡ ಬೆಂಬಲ ನೀಡಲಿದೆ ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಗುಣಮುಖ ಪ್ರಮಾಣ ಹೆಚ್ಚಳ: ಸೋಂಕಿತರ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚಳವಾಗುತ್ತಿದ್ದರೂ, ಸಮಾಧಾನದ ಸಂಗತಿಯೆಂಬಂತೆ ಗುಣಮುಖ ಪ್ರಮಾಣ ಶೇ.58 ದಾಟಿದೆ. ಈವರೆಗೆ 3 ಲಕ್ಷಕ್ಕೂ ಹೆಚ್ಚು ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸಾcರ್ಜ್‌ ಆಗಿದ್ದಾರೆ. ಅಲ್ಲದೆ, ಸೋಂಕಿತರ ಮರಣ ಪ್ರಮಾಣವು ದೇಶದಲ್ಲಿ ಶೇ.3.08ರಷ್ಟಿದ್ದು, ಇದು ಬೇರೆ ದೇಶಗಳಿಗೆ ಹೋಲಿಸಿದರೆ ತುಂಬಾ ಕಡಿಮೆ. ಸೋಂಕು ದ್ವಿಗುಣಗೊಳ್ಳುವ ಅವಧಿ ಈಗ 19 ದಿನಗಳಾಗಿವೆ. ಲಾಕ್‌ಡೌನ್‌ ಘೋಷಣೆಗೂ ಮುನ್ನ ಇದು 3 ದಿನಗಳಾಗಿದ್ದವು ಎಂದೂ ಹರ್ಷವರ್ಧನ್‌ ತಿಳಿಸಿದ್ದಾರೆ. ಜತೆಗೆ, ಒಂದೇ ದಿನ 2.2 ಲಕ್ಷ ಸ್ಯಾಂಪಲ್‌ಗ‌ಳನ್ನು ಪರೀಕ್ಷಿಸಲಾಗಿದ್ದು, ಒಟ್ಟಾರೆ 80 ಲಕ್ಷ ಸ್ಯಾಂಪಲ್‌ಗ‌ಳ ಪರೀಕ್ಷೆ ನಡೆದಿದೆ ಎಂದಿದ್ದಾರೆ.

24 ಗಂಟೆಗಳಲ್ಲಿ 18,552 ಪ್ರಕರಣ
ಶುಕ್ರವಾರ ಬೆಳಗ್ಗೆ 8ರಿಂದ ಶನಿವಾರ ಬೆಳಗ್ಗೆ 8ರ ವರೆಗಿನ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 18,552 ಪ್ರಕರಣಗಳು ಪತ್ತೆಯಾಗುವ ಮೂಲಕ ಹೊಸ ದಾಖಲೆ ಸೃಷ್ಟಿಯಾಗಿದೆ. ಒಂದೇ ದಿನ 384 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜೂ.1ರಿಂದ 27ರ ವರೆಗೆ ದೇಶದಲ್ಲಿ 3.18 ಲಕ್ಷ ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಇದೇ ವೇಳೆ, ಇತರ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸೋಂಕಿತರ ಸಂಖ್ಯೆಯು ಹೇಳಿಕೊಳ್ಳುವಷ್ಟು ವೇಗವಾಗಿಯೇನೂ ಬೆಳೆಯುತ್ತಿಲ್ಲ ಎಂದು ಏಮ್ಸ್‌ ತಿಳಿಸಿದೆ. ಅಮೆರಿಕದಲ್ಲಿ ಪ್ರತಿ ದಿನ ಸುಮಾರು 40 ಸಾವಿರ ಮಂದಿಗೆ ಸೋಂಕು ದೃಢಪಡುತ್ತಿದೆ. ಹಾಗೆ ನೋಡಿದರೆ ಭಾರತದ ಸಂಖ್ಯೆ ಕಡಿಮೆಯಿದೆ. ಜತೆಗೆ, ಭಾರತದಲ್ಲಿ ಪ್ರತಿ ಲಕ್ಷ ಜನಸಂಖ್ಯೆಗೆ ಹೋಲಿಸಿದರೆ ಸೋಂಕಿತರ ಸಂಖ್ಯೆಯಾಗಲಿ, ಮರಣ ಪ್ರಮಾಣವಾಗಲಿ ಕನಿಷ್ಠ ಪ್ರಮಾಣದಲ್ಲೇ ಇದೆ ಎಂದಿದ್ದಾರೆ.

ಟಾಪ್ ನ್ಯೂಸ್

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Parameahwar

Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್‌

UP-Killed

Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್‌: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ

CM-siddu

Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

Coffe-Grower

Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್‌ ಗೋಯಲ್‌

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.