ವಿಜಯಪುರ ಮೂಲದ ಡಾ.ಎಸ್.ಕೆ.ಕುಲಕರ್ಣಿ ಅವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ
Team Udayavani, Nov 13, 2020, 5:18 PM IST
ವಿಜಯಪುರ : ಔಷಧಿ ಶಾಸ್ತ್ರ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರ ಮೂಲದ ಡಾ.ಶ್ರೀನಿವಾಸ ಕುಲಕರ್ಣಿಯವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ ದೊರೆತಿದೆ.
ಅಮೇರಿಕದ ಸ್ಟ್ಯಾನ್‍ಪೊರ್ಡ್ ವಿಶ್ವವಿದ್ಯಾಲಯವು ಪ್ರತಿ ವರ್ಷವೂ ಮಾದರಿ ಹಾಗೂ ಸೈಟೇಶನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ, ಗೌರವಿಸುತ್ತದೆ. ಡಾ.ಶ್ರೀನಿವಾಸ ಕುಲಕರ್ಣಿ ಅವರು ಔಷಧೀಯ ಶಾಸ್ತ್ರದ ಕ್ಷೇತ್ರದಲ್ಲಿ ಕೈಗೊಂಡ ಸಂಶೋಧನೆಗಳನ್ನು ಮನ್ನಿಸಿ, ಈ ಗೌರವ ನೀಡಲಾಗಿದೆ.
ಡಾ. ಕುಲಕರ್ಣಿ ಅವರು : 505 ಸಂಶೋಧನಾ ಪ್ರಕಟಣೆಗಳು, 13 ಸಾವಿರಕ್ಕೂ ಹೆಚ್ಚು ಉಲ್ಲೇಖಗಳು ಮತ್ತು 61ಕ್ಕೂ ಹೆಚ್ಚು ಫಾರ್ಮುಲಾಗಳನ್ನು ಔಷಧೀಯ ಶಾಸ್ತ್ರದಲ್ಲಿ ರಚಿಸಿದ್ದಾರೆ. ಜಗತ್ತಿನ ಶ್ರೇಷ್ಠ ಒಂದು ಲಕ್ಷ ವಿಜ್ಞಾನಿಗಳಲ್ಲಿ 132ನೇ ಕ್ರಮಾಂಕಗಳಿಸಿದ್ದು, ಹಾಗೂ ಭಾರತದ ಪ್ರಥಮರಾಗಿದ್ದಾರೆ.
ಇದನ್ನೂ ಓದಿ:ಜಾತಿ ಓಲೈಕೆಯ ಪಕ್ಷಗಳಿಗೆ ಫಲಿತಾಂಶದಿಂದ ತಕ್ಕ ಉತ್ತರ ಸಿಕ್ಕಿದೆ : ಬಿ.ವೈ ವಿಜಯೇಂದ್ರ
ಫಾರ್ಮಕಾಲಜಿ ಸಂಶೋಧನೆಯಲ್ಲಿ ಇವರು ಜಾಗತಿಕ ಮಾನ್ಯತೆಯುಳ್ಳ ವಿಜ್ಞಾನಿಗಳಾಗಿದ್ದು, ಇವರ ಮಾರ್ಗದರ್ಶನದಲ್ಲಿ 30 ಹೆಚ್ಚು ಸಂಶೋಧಕರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರ ಐದು ಸಂಶೋಧನೆಗಳಿಗೆ ಪೇಟೆಂಟ್ ಪಡೆಯಲಾಗಿದೆ.
ಈ ಹಿಂದೆ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿಯಾಗಿ ಕೂಡ ಇವರು ಕಾರ್ಯನಿರ್ವಹಿಸಿದ್ದಾರೆ. ಡಾ.ಕುಲಕರ್ಣಿಯವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದವರು. ಸದ್ಯ ಬೆಳಗಾವಿಯಲ್ಲಿ ನೆಲೆಸಿರುವ ಇವರು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವ ವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಹಾಗೂ ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿದ್ದಾರೆ.
ಡಾ.ಶ್ರೀನಿವಾಸ ಕುಲಕರ್ಣಿ ಅವರಿಗೆ ಮಾಜಿ ಸಚಿವ, ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ್, ಆಡಳಿತಾಧಿಕಾರಿ ಡಾ.ರಾಘವೇಂದ್ರ ಕುಲಕರ್ಣಿ ಅಭಿನಂದನೆ ಸಲ್ಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.