ಡಾ| ಸೋಮಶೇಖರ ಇಮ್ರಾಪೂರ ಅವರಿಗೆ 2022ನೇ ಸಾಲಿನ ಅಂಬಿಕಾತನಯದತ್ತ ಪ್ರಶಸ್ತಿ


Team Udayavani, Jan 19, 2022, 8:08 PM IST

1-fffdf

ಧಾರವಾಡ : ಡಾ| ದ.ರಾ. ಬೇಂದ್ರೆ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಕೊಡ ಮಾಡುವ 2022ನೇ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಕವಿ, ಸಂಶೋಧಕ, ಜಾನಪದ ತಜ್ಞ ಡಾ|ಸೋಮಶೇಖರ ಇಮ್ರಾಪುರ ಭಾಜನರಾಗಿದ್ದಾರೆ.

1 ಲಕ್ಷ ನಗದು, ಸ್ಮರಣಿಕೆ ಒಳಗೊಂಡ ಈ ಪ್ರಶಸ್ತಿ ಆಯ್ಕೆಗೆ ಡಾ| ಗುರುದೇವಿ ಹುಲೆಪ್ಪನವರಮಠ ಅಧ್ಯಕ್ಷತೆಯಲ್ಲಿ ಡಾ|ವೆಂಕಟಗಿರಿ ದಳವಾಯಿ ಹಾಗೂ ಡಾ|ಎಮ್.ಬಿ. ಹೂಗಾರ ಅವರನ್ನೊಳಗೊಂಡ ಸಮಿತಿಯು ಜ.7 ರಂದು ಸಭೆ ಸೇರಿ ನಿರ್ಣಯ ಕೈಗೊಂಡು ಮುಚ್ಚಿದ ಲಕೋಟೆಯಲ್ಲಿ ಪ್ರಶಸ್ತಿಗೆ ಅರ್ಹರನ್ನು ಶಿಫಾರಸ್ಸು ಮಾಡಿತ್ತು. ಈಗ ಬುಧವಾರ ಟ್ರಸ್ಟ್ ಸದಸ್ಯರು ಸಭೆ ಸೇರಿ ಅಂತಿಮ ನಿರ್ಧಾರ ಕೈಗೊಂಡು, ಡಾ|ಇಮ್ರಾಪೂರ ಹೆಸರನ್ನು ಪ್ರಕಟಿಸಿದ್ದಾರೆ.

ಪ್ರಶಸ್ತಿ ಆಯ್ಕೆ ಸಮಿತಿಯು ಕನ್ನಡದ 10-12 ಪ್ರಮುಖ ಕವಿಗಳ ಹೆಸರುಗಳನ್ನು ಪಟ್ಟಿ ಮಾಡಿಕೊಂಡಿತ್ತು. ಅಂತಿಮವಾಗಿ ಡಾ|ಸೋಮಶೇಖರ ಇಮ್ರಾಪುರ, ಡಾ|ಮಲ್ಲಿಕಾ ಘಂಟಿ ಹಾಗೂ ಜಿನದತ್ತ ದೇಸಾಯಿ ಅವರ ಹೆಸರುಗಳನ್ನು ಶಿಫಾರಸ್ಸು ಮಾಡಿತ್ತು. ಕೊನೆಗೆ ಸಾಧನಕೇರಿಯ ಬೇಂದ್ರೆ ಭವನದಲ್ಲಿ ಟ್ರಸ್ಟಿನ ಸಭೆ ಕೈಗೊಂಡು, ಡಾ|ಸೋಮಶೇಖರ ಇಮ್ರಾಪುರ ಅವರ ಹೆಸರನ್ನು ಅಂತಿಮಗೊಳಿಸಲಾಯಿತು. ಇದಲ್ಲದೇ ಮುಂಬರುವ ದಿನಗಳಲ್ಲಿ ಯುವ ಪುರಸ್ಕಾರ ಪ್ರಾರಂಭಿಸುವ ಕುರಿತು ಕೂಡಾ ಚರ್ಚಿಸಲಾಯಿತು.

ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಟ್ರಸ್ಟ ಅಧ್ಯಕ್ಷ ಡಾ|ಡಿ.ಎಂ.ಹಿರೇಮಠ, ಭಾಷೆ ಹಾಗೂ ಜನಪದ ಸೊಗಡಿನ ತತ್ವದ ದೃಷ್ಟಿಯಿಂದ ದ.ರಾ. ಬೇಂದ್ರೆ ಅವರ ನಂತರ ಆ ಮಾರ್ಗದಲ್ಲಿ ಅತ್ಯಂತ ಸಮರ್ಥವಾಗಿ ಕೆಲಸ ಮಾಡಿದವರಲ್ಲಿ ಡಾ|ಚಂದ್ರಶೇಖರ ಕಂಬಾರ ಹಾಗೂ ಡಾ| ಸೋಮಶೇಖರ ಇಮ್ರಾಪುರ ಮಹತ್ವದ ಕವಿಗಳಾಗಿದ್ದಾರೆ. ಇಮ್ರಾಪೂರ ಅವರಿಗೆ ಪ್ರಸಕ್ತ ಸಾಲಿನ ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಜ.೩೧ ರಂದು ಕೋವಿಡ್ ನಿಯಮಾವಳಿ ಪ್ರಕಾರ ಪ್ರಶಸ್ತಿ ಪುರಸ್ಕೃತರ ಸಾಹಿತ್ಯ ಸಾಧನೆಗಳ ಕುರಿತ ಗೋಷ್ಠಿ. ಸಂಜೆ ಪ್ರಶಸ್ತಿ ಪ್ರಧಾನ ಸಮಾರಂಭ ಜರುಗಲಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ ಸದಸ್ಯರಾದ ಡಾ|ನಿಜಲಿಂಗಪ್ಪ ಮಟ್ಟಿಹಾಳ, ಸದಸ್ಯ ಕಾರ್ಯದರ್ಶಿ ಮಂಜುಳಾ ಯಲಿಗಾರ ಇದ್ದರು.

ಇದನ್ನೂ ಓದಿ : ಜಾಗ ಮಂಜೂರಾತಿಗಾಗಿ ಲಂಚ ಸ್ವೀಕಾರ : ಎಸಿಬಿ ಬಲೆಗೆ ಬಿದ್ದ ಉಪ ತಹಶೀಲ್ದಾರ್

ಡಾ| ಸೋಮಶೇಖರ್ ಇಮ್ರಾಪುರ ಪರಿಚಯ:
ಗದಗ ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ 1940 ರಲ್ಲಿ ಜನಿಸಿದ್ದಾರೆ. ಸ್ವರ್ಣ ಪದಕದೊಂದಿಗೆ ಎಂ.ಎ. ಕನ್ನಡ ಪದವಿ ಪಡೆದು, ಜಾನಪದ ಒಗಟುಗಳು ಕುರಿತ ಮಹಾಪ್ರಬಂಧಕ್ಕೆ ಪಿಹೆಚ್ಡಿ ಪದವಿಯನ್ನು ಕವಿವಿಯಿಂದ ಪಡೆದಿದ್ದಾರೆ. ಪ್ರಾಧ್ಯಾಪಕರಾಗಿ, ವಿವಿಧ ಅಽಕಾರ ಸ್ಥಾನಗಳಲ್ಲಿ ಸುಧೀರ್ಘ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದಾರೆ. ಕವಿವಿ ಜಾನಪದ ಅಧ್ಯಯನ ವಿಭಾಗದ ಸಂಸ್ಥಾಪಕ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕ ಜಾನಪದ ವಸ್ತುವಿನ್ಯಾಸ, ಭಾಷಾ ಪ್ರಯೋಗ, ಶೈಲಿ, ತಂತ್ರ, ಅಚ್ಚಗನ್ನಡ, ಛಂದೋಲಯಗಳನ್ನು ಪರಿಣಾಮಕಾರಿಯಾಗಿ ಅಭಿವ್ಯಕ್ತಿಸಿದ್ದಾರೆ. ಗಂಡ-ಹೆಂಡಿರ ಜಗಳ ಗಂಧ ತೀಡಿದ್ಹಾಂಗ ಎಂಬ ಕವನ ಸಂಕಲನ ಮೂಲಕ ಅಪಾರ ಕೀರ್ತಿ ಗಳಿಸಿದ್ದಾರೆ. ಜನಪದ ಆಲೋಕನ ಗ್ರಂಥ ವಿದ್ವತ್ ವಲಯದಲ್ಲಿ ಮನ್ನಣೆ ಪಡೆದಿದೆ. ಬಿಸಿಲು ಹೂ, ಬೆಳದಿಂಗಳು, ಬೆಳಕಿನ ಬೀಜ, ಭೂತನಿ, ಬಿರುಗಾಳಿ, ಬೆಂಕಿ ಸೇರಿದಂತೆ ಹಲವಾರು ಕವನ ಸಂಕಲನಗಳು, ಸಂಪಾದನೆ, ವಿಮರ್ಶೆ ಕೃತಿಗಳನ್ನು ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.