ಡಾ| ಟಿಎಂಎ ಪೈ ಅವರ ಜನ್ಮದಿನಾಚರಣೆ
Team Udayavani, May 1, 2020, 6:00 AM IST
ಮಣಿಪಾಲದಲ್ಲಿ ಟಿ. ವಸಂತಿ ಪೈ ಅವರು ಡಾ| ಟಿಎಂಎ ಪೈ ಅವರ ಮೂರ್ತಿಗೆ ಗೌರವ ಸಲ್ಲಿಸಿದರು.
ಉಡುಪಿ/ಮಂಗಳೂರು:ಮಣಿಪಾಲ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಡಾ| ಟಿಎಂಎ ಪೈ ಅವರ ಜನ್ಮದಿನವನ್ನು ಮಣಿಪಾಲ ಮತ್ತು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಯಲ್ಲಿ ಗುರುವಾರ ಸರಳವಾಗಿ ಆಚರಿಸಲಾಯಿತು.
ಕೋವಿಡ್-19 ರಣ ಲಾಕ್‌ಡೌನ್ ಇರುವ ಕಾರಣ ವಿಶೇಷ ಸಮಾರಂಭ ಇರಲಿಲ್ಲ.ಮಣಿಪಾಲದ ಮಾಧವ ವಿಹಾರದಲ್ಲಿ, ಬಳಿಕ ಅವರಿದ್ದ ಮನೆ ಸ್ಮತಿ ಭವನ ಮತ್ತು ಮಣಿಪಾಲ ವಿ.ವಿ. ಆಡಳಿತಸೌಧದ ಮುಂಭಾಗ ದಲ್ಲಿರುವ ಡಾ| ಟಿಎಂಎ ಪೈಯವರ ಪುತ್ಥಳಿಗೆ ಮಾಹೆ ವಿ.ವಿ. ಟ್ರಸ್ಟ್‌ನ ಟ್ರಸ್ಟಿ ಟಿ. ವಸಂತಿ ಪೈ, ವಿ.ವಿ ಸಹಕುಲಾಧಿಪತಿ ಡಾ|ಎಚ್.ಎಸ್.ಬಲ್ಲಾಳ್, ಕುಲಪತಿ ಡಾ| ಎಚ್. ವಿನೋದ ಭಟ್, ಕುಲಸಚಿವ ಡಾ| ನಾರಾಯಣ ಸಭಾಹಿತ್, ಸಹಕುಲಪತಿ ಡಾ| ಪಿಎಲ್‌ಎನ್‌ಜಿ ರಾವ್ ಮೊದಲಾದವರು ಪುಷ್ಪನಮನ ಸಲ್ಲಿಸಿದರು.
ಕಸ್ತೂರ್ಬಾ ಆಸ್ಪತ್ರೆ ಒಪಿಡಿ ವಿಭಾಗದಲ್ಲಿಯೂ ಸಿಬಂದಿ ಡಾ| ಪೈಯವರ ಭಾವಚಿತ್ರಕ್ಕೆ ಪುಷ್ಪವನ್ನು ಸಮರ್ಪಿಸಿ ಗೌರವ ಸಲ್ಲಿಸಿದರು.
ಮಾಧವ ವಿಹಾರ ಮತ್ತು ಸ್ಮತಿ ಭವನಕ್ಕೆ ಡಾ| ಟಿಎಂಎ ಪೈ ಫೌಂಡೇಶನ್ ಕಾರ್ಯದರ್ಶಿ ಟಿ. ಅಶೋಕ್ ಪೈ, ಪತ್ನಿ ಗಾಯತ್ರಿ ಪೈ, ಪುತ್ರ ಸಚಿನ್ ಪೈ ಅವರು ಗೌರವಾರ್ಪಣೆ ಸಲ್ಲಿಸಿದರು.
ಮಂಗಳೂರಿನಲ್ಲಿ
ಅತ್ತಾವರದ ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಜಾನ್ ರಾಮಪುರಮ್ ಅವರು ಡಾ| ಟಿಎಂಎ ಪೈ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು. ಅನಾ ರೋಗ್ಯ, ಅನಕ್ಷರತೆ ಹಾಗೂ ಬಡತನ ನಿರ್ಮೂಲನೆ ಮಾಡಲು ಡಾ| ಟಿ.ಎಂ.ಎ. ಪೈ ಅವರು ಮಣಿಪಾಲ ಅಕಾಡೆಮಿ ಆಫ್ ಹೈಯರ್‌ಎಜುಕೇಶನ್ ಎಂಬ ಸಂಸ್ಥೆಯನ್ನು ಕಟ್ಟಿ ಬೆಳೆಸಿದ್ದು ಈ ಮೂಲಕ ತಮ್ಮ ಕನಸನ್ನು ನನಸಾಗಿಸಲು ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದರು ಎಂದರು.
ಆಸ್ಪತ್ರೆಯಲ್ಲಿರುವ ಎಲ್ಲ ರೋಗಿ ಗಳಿಗೆ ಹಣ್ಣು ವಿತರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪ ವೈದ್ಯಕೀಯ ಅಧೀಕ್ಷಕ ಡಾ| ದೀಪಕ್ ಮಡಿ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Borewell Tragedy: 4ನೇ ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯಾಚರಣೆ… ಬಾಲಕಿಯ ಸ್ಥಿತಿ ಹೇಗಿದೆ
Maulana Masood: 26/11 ದಾಳಿಯ ಮಾಸ್ಟರ್ ಮೈಂಡ್: ಭಯೋ*ತ್ಪಾದಕ ಮಸೂದ್ ಗೆ ಹೃದಯಾಘಾತ
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.