ಸಿಎಂಗೆ ಡಾ.ವೀರೇಂದ್ರ ಹೆಗ್ಗಡೆ ಪತ್ರ ಬರೆದು ಕೃತಜ್ಞತೆ
Team Udayavani, May 30, 2019, 6:00 AM IST
ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಹಿನ್ನೆಲೆಯಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸ್ಪಂದಿಸಿದ ಸಿಎಂ ಎಚ್.ಡಿ.ಕುಮಾರಸ್ವಾಮಿಯವರಿಗೆ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಅವರು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೀರಿನ ಅಭಾವ ಕಂಡು ಬಂದ ತಕ್ಷಣ ನಿಮ್ಮ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಆರ್ ಸೆಲ್ವಮಣಿ, ರಾಜ್ಯ ಜಲವಾಹಿನಿ ಮಂಡಳಿ ಮತ್ತು ಸಣ್ಣ ನೀರಾವರಿ ಯೋಜನೆಯ ಅಧಿಕಾರಿಗಳು ಧರ್ಮಸ್ಥಳಕ್ಕೆ ಬಂದು ಪರಿಸ್ಥಿತಿಯನ್ನು ಗಮನಿಸಿ, ನನ್ನೊಂದಿಗೆ ಮಾತನಾಡಿ, ಸರ್ಕಾರಕ್ಕೆ ವರದಿ ನೀಡಿರುತ್ತಾರೆ. ನಮ್ಮ ಕೋರಿಕೆಯನ್ನು ಮನ್ನಿಸಿ ಕುಡಿಯುವ ನೀರಿನ ಕೊರತೆಯ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ನೀವು ನೇತ್ರಾವತಿ ನದಿ ಮತ್ತು ನೆರಿಯ ನದಿಗೆ ಎರಡು ಕಿಂಡಿ ಅಣೆಕಟ್ಟು ನಿರ್ಮಿಸಲು 7 ಕೋಟಿ ರೂ.ಮಂಜೂರು ಮಾಡಿ ಅಧಿಕಾರಿಗಳಿಗೆ ಆದೇಶ ನೀಡಿರುವುದು ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದ ಜನತೆ ಕೂಡ ಬೆಂಬಲ ವ್ಯಕ್ತಪ ಡಿಸಿದ್ದಾರೆ. ಬೆಂಗಳೂರಿನಿಂದ ಅನೇಕ ಮಂದಿ ಧರ್ಮಸ್ಥಳಕ್ಕೆ ನೀರನ್ನು ತಂದು ಕೊಟ್ಟಿದ್ದಾರೆ. ಇದನ್ನು ಅನ್ನಪೂರ್ಣ ಛತ್ರದಲ್ಲಿ ಅಡುಗೆಗೆ ಹಾಗೂ ಭಕ್ತಾದಿಗಳಿಗೆ ಕುಡಿಯಲು ಬಳಸಲಾಗಿದೆ. ನಿಮ್ಮ ಕಾಳಜಿಗೆ ನಮ್ಮ ಕ್ಷೇತ್ರದ ವತಿಯಿಂದ ಹಾಗೂ ಎಲ್ಲ ಭಕ್ತಾದಿಗಳ ಪರವಾಗಿ ಕೃತಜ್ಞತೆಗಳು. ಶ್ರೀ ಮಂಜುನಾಥ ಸಾಮಿ ನಿಮಗೆ ದೀರ್ಘಾಯುಷ್ಯ, ಆರೋಗ್ಯವನ್ನಿತ್ತು, ಸಕಲ ಸನ್ಮಂಗಲವನ್ನುಂಟು ಮಾಡಲಿ ಹಾಗೂ ನಿಮ್ಮ ದಕ್ಷ ನೇತೃತ್ವದಲ್ಲಿ ಸರ್ಕಾರ ಯಶಸ್ವಿಯಾಗಿ ಆಡಳಿತ ನಡೆಸುವಂತೆ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪಡುಬಿದ್ರಿ,ಮಲ್ಪೆ,ಕುಂದಾಪುರ,ಹಂಗಾರಕಟ್ಟೆ ಸಹಿತ ರಾಜ್ಯದ 12 ಬಂದರುಗಳಿಗೆ ಹೈಟೆಕ್ ಸ್ಪರ್ಶ?
“ಕರಾಳ’ ಎಂಇಎಸ್‌ಗೆ ಹೈಕೋರ್ಟ್ ನೋಟಿಸ್; ನಿಲುವು ಸ್ಪಷ್ಟಪಡಿಸಲು ಎಂಇಎಸ್‌ಗೆ ಸೂಚನೆ
BJP: ವಿಜಯೇಂದ್ರ ವಿರುದ್ಧ ಈಗ ತಟಸ್ಥ ಬಣವೂ ಬಂಡಾಯ
ಸಿದ್ದು ಮುಂದೆ ಯಾರನ್ನೋ “ಸಿಎಂ’ ಅನ್ನೋದು ಅಪಮಾನ: ಸಿ.ಟಿ. ರವಿ
ವಿಟಿಯುನಲ್ಲಿ ಇಂಟರ್ನ್ ಶಿಪ್ ಬದಲು ಕೌಶಲಾಭಿವೃದ್ಧಿ ಕೋರ್ಸ್!
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್