Karnataka: ಇಂದು ಬರ ಮುಹೂರ್ತ?: ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಸ್ಥಿತಿ ಪರಾಮರ್ಶೆ
ಡಿಸಿ, ಜಿ.ಪಂ. ಸಿಇಒಗಳ ಜತೆಗೆ ಮುಖ್ಯಮಂತ್ರಿ ಸಮಗ್ರ ಪರಿಶೀಲನೆ
Team Udayavani, Sep 13, 2023, 12:42 AM IST
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ಕಾಡುತ್ತಿದ್ದು, ಸದ್ಯವೇ ಬರ ಘೋಷಣೆ ಆಗುವ ಸಾಧ್ಯತೆಗಳು ಇವೆ. ಇದರ ಮಧ್ಯೆ ಬರ ಎದುರಿಸಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಗಿದ್ದು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ನಿರ್ವಹಣಾಧಿಕಾರಿಗಳಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಮಂಗಳವಾರ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿಗಳು ತಾಲೂಕುವಾರು ಬರ ಪರಿಸ್ಥಿತಿ ಬಗ್ಗೆ ವಿವರಣೆ ನೀಡಿದರು. ಬೆಳೆಹಾನಿ, ಕುಡಿಯುವ ನೀರಿನ ಸಮಸ್ಯೆ, ಮೇವಿನ ಕೊರತೆ ಸಹಿತ ಸಮಗ್ರ ಚರ್ಚೆ ನಡೆದಿದೆ. ಕೊನೆ ಕ್ಷಣದವರೆಗೂ ಕೇಂದ್ರದ ಮಾನದಂಡಗಳ ಸಡಿಲಿಕೆಗೆ ರಾಜ್ಯ ಸರಕಾರ ಪತ್ರ ವ್ಯವಹಾರ ಮುಂದುವರಿಸಲಿದೆ.
ಸದ್ಯದಲ್ಲೇ ಬರ ಘೋಷಣೆ
ಮಳೆ ಕೊರತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಈ ವಾರವೇ ಬರ ಘೋಷಣೆಯಾಗುವ ಸಾಧ್ಯತೆಗಳು ಇವೆ. ಬುಧವಾರ ನಡೆಯುವ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಸಿಎಂ ಪರಿಸ್ಥಿತಿ ಅವಲೋಕನ ನಡೆಸಿ ತೀರ್ಮಾನ ಕೈಗೊಳ್ಳಲಿದ್ದಾರೆ.
ಕೇಂದ್ರ ಸರಕಾರದ ಮಾನದಂಡಗಳ ಅನುಸಾರ ಆ. 19ರ ವರೆಗೆ 53 ಹಾಗೂ ಸೆ. 2ರ ವರೆಗಿನ ಪರಿಸ್ಥಿತಿ ಆಧರಿಸಿ 83 ತಾಲೂಕುಗಳಲ್ಲಿ ಸೆ. 11ರೊಳಗಾಗಿ ಬೆಳೆಹಾನಿ ಸಮೀಕ್ಷೆ ಪೂರ್ಣಗೊಳಿಸುವಂತೆ ಸೂಚಿಸಲಾಗಿತ್ತು. ಈ ಕೆಲಸದಲ್ಲಿ ತಪ್ಪಾಗಕೂಡದು. ಈ ತಿಂಗಳ ಬಳಿಕ ಮತ್ತೆ ಬೆಳೆ ಸಮೀಕ್ಷೆಗೆ ಅವಕಾಶ ಇಲ್ಲ ಎಂದು ಸಿಎಂ ಎಚ್ಚರಿಕೆ ನೀಡಿದ್ದಾರೆ.
ನಕಲಿ ಭೂ ಮಂಜೂರಾತಿ ನೀಡಿದರೆ ಕ್ರಮ
ನಕಲಿ ಭೂಮಂಜೂರಾತಿ ನೀಡಿದ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ತಾಲೂಕು ದಂಡಾಧಿಕಾರಿಗಳ ನ್ಯಾಯಾಲಯದಲ್ಲಿ 3 ತಿಂಗಳಿಗಿಂತ ಹೆಚ್ಚು ಅವಧಿಗೆ ಪ್ರಕರಣಗಳು ಬಾಕಿ ಇರಬಾರದು. ಜಿಲ್ಲಾಧಿಕಾರಿಗಳ ಬಳಿ ಸರಕಾರಿ ಜಮೀನು ಹಾಗೂ ಒತ್ತುವರಿ ಮಾಹಿತಿ ಲಭ್ಯವಿರಬೇಕು. ಒತ್ತುವರಿ ಗುರುತಿಸಲು ಆ್ಯಪ್ ಅಭಿವೃದ್ಧಿ ಪಡಿಸಲಾಗುತ್ತಿದೆ. ಒತ್ತುವರಿ ಗುರುತಿಸಿ, ತೆರವಿಗೆ ಕ್ರಮ ಕೈಗೊಳ್ಳಬೇಕು ಎಂದರು.
ಗ್ರಾಮ ಲೆಕ್ಕಿಗರು ಕೈಗೇ ಸಿಗುವುದಿಲ್ಲ: ಸಿಎಂ ಬೇಸರ
ಗ್ರಾಮ ಲೆಕ್ಕಿಗರು ಜನರ ಕೈಗೇ ಸಿಗುತ್ತಿಲ್ಲ ಎಂದು ಮುಖ್ಯಮಂತ್ರಿ ಬೇಸರಿಸಿದ್ದಾರೆ. ಗ್ರಾಮ ಲೆಕ್ಕಿಗರು ಗ್ರಾ.ಪಂ.ಗಳಲ್ಲಿಯೇ ಇರು ವಂತೆ ಮಾಡಿ ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. 16,850 ಗ್ರಾಮಗಳು ಪೋಡಿ ಮುಕ್ತವಾಗಿವೆ. ಉಳಿದೆಡೆಗಾಗಿ ಈ ಅಭಿಯಾನ ವನ್ನು ಮತ್ತೆ ಪ್ರಾರಂಭಿಸಲು ಸೂಚಿಸಿದರು.
ಪ್ರಗತಿ ಪರಿಶೀಲನೆಗೆ ಸೂಚನೆ
ಪ.ಜಾತಿ., ಪ. ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣಗಳ ಶಿಕ್ಷೆ ಪ್ರಮಾಣ ಕೇವಲ ಶೇ. 3.44ರಷ್ಟಿದೆ. ಈ ಕುರಿತು ಪ್ರತೀ ತಿಂಗಳು ಪ್ರಗತಿ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಗಣೇಶ ಹಬ್ಬದ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಪರಿಸರ ಹಾನಿಯಾಗದಂತೆ ಹಬ್ಬ ಆಚರಿಸಲು ಕ್ರಮ ಕೈಗೊಳ್ಳಿ. ಕೋಮುಶಕ್ತಿಗಳು ಕಾನೂನು ಸುವ್ಯವಸ್ಥೆ ಹಾಳು ಮಾಡದಂತೆ ಮುಂಜಾಗ್ರತೆ ವಹಿಸಿ. ಯಾವ ಧರ್ಮದವರಿಗೂ ತೊಂದರೆಯಾಗಬಾರದು.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು
Mysuru: ಕೆಆರ್‌ಎಸ್ ರಸ್ತೆಗೆ “ಸಿದ್ದರಾಮಯ್ಯ ಆರೋಗ್ಯ ಮಾರ್ಗ’ ನಿಶ್ಚಿತ: ಲಕ್ಷ್ಮಣ್
Hosanagara: ರಸ್ತೆ ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಆತ್ಮಹತ್ಯೆಗೆ ಶರಣಾದ ಪತ್ನಿ
Poster Campaign: ಸಚಿವ ಪ್ರಿಯಾಂಕ್ ವಿರುದ್ಧ ಬಿಜೆಪಿ ಪೋಸ್ಟರ್ ಆಂದೋಲನ;ಎಫ್‌ಐಆರ್ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.