ನನಸಾಗದ ಸ್ವಾತಂತ್ರ್ಯಪೂರ್ವದ ಕನಸು

ಗ್ರಾಮವಾಸಿಗಳ ಅರಣ್ಯ ರೋದನ

Team Udayavani, Aug 7, 2021, 6:02 AM IST

NO-Road

ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಕೆಲವೇ ಕಿ.ಮೀ. ದೂರದಲ್ಲಿರುವ ಸವಣಾಲು ಗ್ರಾಮದಲ್ಲಿ ಇಲ್ಲಗಳ ಪಟ್ಟಿಯೇ ದೊಡ್ಡದಿದೆ. ಮೂಲ ಸೌಕರ್ಯಗಳ ಕೊರತೆಯಿಂದ ಸ್ಥಳೀಯರು ಹೈರಾಣಾಗಿದ್ದಾರೆ. ಪೇಟೆಗೆ ಬರಬೇಕಾದರೆ 7-8 ಕಿ.ಮೀ. ಕಾಲ್ನಡಿಗೆಯಲ್ಲೇ ಸಾಗಬೇಕಾದ ಅನಿವಾರ್ಯತೆ ಸ್ಥಳೀಯರದ್ದು. ಇಲ್ಲಿನ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲುವ ಪ್ರಯತ್ನ ಇಂದಿನ “ಒಂದು ಊರು, ಹಲವು ದೂರು ಸರಣಿ’ಯಲ್ಲಿ.

ಬೆಳ್ತಂಗಡಿ: ದೇಶಕ್ಕೆ ಸ್ವಾತಂತ್ರ್ಯಲಭಿಸಿ 75 ವರ್ಷ ಸಂದರೂ ಸವಣಾಲು ಗ್ರಾಮದ ಅರಣ್ಯವಾಸಿಗಳ ಮೂಲಸೌಕರ್ಯದ ರೋಧನ ರಾಜ್ಯ ರಾಜಧಾನಿಗೆ ತಲುಪದ ಪರಿಣಾಮ ಗ್ರಾಮವಾಸಿಗಳ ಬದುಕಿಗೆ ಅಂಧಕಾರ ಕವಿದಿದೆ.

ಬೆಳ್ತಂಗಡಿ ತಾಲೂಕು ಕೇಂದ್ರದಿಂದ ಕೇವಲ 12-13 ಕಿ.ಮೀ. ದೂರದಲ್ಲಿರುವ ಸವಣಾಲು ಗ್ರಾಮ ಮೂಲ ಸೌಕರ್ಯದಿಂದ ಹಿಂದುಳಿದಿರುವ ಬಗೆಗಿನ ವ್ಯಥೆಯಿದು. ಹಿತ್ತಿಲಪೇಲ, ಪಿಲಿಕಲ, ಕಂಬುಜೆ ಮೊದಲಾದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಪ್ರದೇಶಗಳು ಅಭಿವೃದ್ಧಿಯಿಂದ ವಂಚಿತಗೊಂಡಿವೆ. ಈ ಪ್ರದೇಶಗಳಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಆದಿವಾಸಿ ಜನಾಂಗದ ಮಲೆಕುಡಿಯ ಸಮುದಾಯದ ಜನರು ಶತಮಾನಗಳಿಂದ ವಾಸಿಸುತ್ತಿದ್ದಾರೆ. ಆದರೆ ಇಂದಿಗೂ ರಸ್ತೆ, ವಿದ್ಯುತ್‌ ಸಂಪರ್ಕ ತಲುಪಿಲ್ಲ.

ಇದನ್ನೂ ಓದಿ:ಸದ್ಯಕ್ಕಿಲ್ಲ ‘ರಾಜವೀರ ಮದಕರಿ ನಾಯಕ’ ಶೂಟಿಂಗ್  

ಹಿತ್ತಿಲಪೇಲ ಪ್ರದೇಶದಲ್ಲಿ 13 ಮನೆಗಳಿದ್ದು, ಇಲ್ಲಿ ರಸ್ತೆ, ವಿದ್ಯುತ್‌ ಸಂಪರ್ಕವೇ ಇಲ್ಲ. ಈ ಪ್ರದೇಶದ ಜನರು ಅಗತ್ಯ ವಸ್ತುಗಳ ಖರೀದಿಗಾಗಿ, ಶಾಲಾ ಕಾಲೇಜುಗಳಿಗಾಗಿ, ಕೆಲಸ ಕಾರ್ಯಗಳಿಗಾಗಿ ದಿನನಿತ್ಯ 7-8 ಕಿ.ಮೀ. ಕಾಲ್ನಡಿಗೆಯಲ್ಲಿ ಕ್ರಮಿಸಬೇಕಾಗಿದೆ. ಪಿಲಿಕಲ, ಕಂಬುಜೆ ಪ್ರದೇಶದಲ್ಲಿಯೂ 10 ಕುಟುಂಬಗಳಿದ್ದು, ಇಲ್ಲಿನ ಜನರ ಜೀವನ ವ್ಯಥೆಯೂ ಇದೆ.

ವಿದ್ಯುತ್‌ ಸಂಪರ್ಕದ ಏಕೈಕ ಪ್ರದೇಶ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ 9 ಗ್ರಾಮಗಳಿವೆ. ಸುಮಾರು 15ಕ್ಕೂ ಹೆಚ್ಚು ಜನವಸತಿ ಪ್ರದೇಶಗಳಿವೆ. ಹಿತ್ತಿಲಪೇಲ, ಕಂಬುಜೆ ಹೊರತುಪಡಿಸಿ ಉಳಿದ ಯಾವುದೇ ಗ್ರಾಮಗಳಲ್ಲಿ ವಿದ್ಯುತ್‌ ಸಂಪರ್ಕ ಇಲ್ಲ ಎಂಬುದು ಗಮನಾರ್ಹ.

ರಸ್ತೆ, ವಿದ್ಯುತ್‌ ವಂಚಿತ ಗ್ರಾಮಗಳು
ಪಿಲಿಕಲ, ಕಂಬುಜೆ ಪ್ರದೇಶಕ್ಕೆ ಸೇರಿದ ಕೇವಲ 9 ಮನೆಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸಲಾಗಿದೆ. ಈ ಪ್ರದೇಶದ ಸವಣಾಲು-ಮಂಜದಬೆಟ್ಟು- ಪಿಕಲ ರಸ್ತೆ, ಕಾಳಿ ಕಾಂಬ ದೇವಸ್ಥಾನದಿಂದ-ಮೀಯ ರಸ್ತೆ, ಕಾಳಿ ಕಾಂಬ ದಣೆವಸ್ಥಾನದಿಂದ ದೇಂನ¤ಜೆ, ಜಾಲಡೆ ರಸ್ತೆ, ಮಂಜದಬೆಟ್ಟು-ಇತ್ತಿಲಪೇಲ ರಸ್ತೆ, ನರ್ತಿ ಕಲ್ಲಿನಿಂದ- ಮುಂಡೂರು ರಸ್ತೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ.

ಅರಣ್ಯ ಇಲಾಖೆಯ ಆಕ್ಷೇಪ
ಕುದುರೆಮುಖ ರಾ. ಉದ್ಯಾನವನ ವ್ಯಾಪ್ತಿ ಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಹಿಂದಿನಿಂದಲೂ ವನ್ಯಜೀವಿ ಅರಣ್ಯ ಇಲಾಖೆ ಅರಣ್ಯ ಸಂರಕ್ಷಣ ಕಾಯ್ದೆ 1980ರ ಅಡಿಯಲ್ಲಿ ಅಡ್ಡಿಪಡಿಸುತ್ತಿದೆ ಎಂಬುದು ಇಲ್ಲಿನ ನಾಗರಿಕರ ಆರೋಪ. ಇದರ ಬದಲಾಗಿ ಅರಣ್ಯ ಹಕ್ಕು ಕಾಯ್ದೆ 2006ನ್ನು ಜಾರಿ ಮಾಡಬೇಕು ಎಂಬುದು ಜನರ ಒತ್ತಾಯ. ಅರಣ್ಯ ಸಂರಕ್ಷಣ ಕಾಯಿದೆ ಪ್ರಕಾರ ಯೋಜನೆಯನ್ನು ಕಾರ್ಯ ಗತಗೊಳಿಸುವ ಇಲಾಖೆಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು ಎಂಬುದು ಅರಣ್ಯ ಇಲಾಖೆಯ ವಾದ. ಆದರೆ ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಯಾವುದೇ ಆನ್‌ಲೈನ್‌ ಅರ್ಜಿ ಅಗತ್ಯವಿಲ್ಲ. ಗ್ರಾಮ ಅರಣ್ಯ ಸಮಿತಿಯ ನಿರ್ಣಯದಂತೆ ಸಂಬಂಧಿಸಿದ ಇಲಾಖೆಗಳು ತಮ್ಮ ಅಭಿಪ್ರಾಯವನ್ನು ವಿಭಾಗ ಮಟ್ಟದ ಅರಣ್ಯ ಸಮಿತಿಗೆ ಸಲ್ಲಿಸಬೇಕು. ಬಳಿಕ ಜಿಲ್ಲಾ ಅರಣ್ಯ ಸಮಿತಿಯ ಸಭೆಯಲ್ಲಿ ಅಂಗೀಕಾರಗೊಂಡು ರಾಜ್ಯ ಮಟ್ಟದ ಸಮಿತಿ ಯಲ್ಲಿ ನಿರ್ಣಯ ಅಂಗೀಕಾರಗೊಂಡರೆ ಅನು ಮತಿ ಸಿಗುತ್ತದೆ. ಆದರೆ ಅರಣ್ಯ ಇಲಾಖೆ ಮಾತ್ರ ಅರಣ್ಯ ಸಂರಕ್ಷಣ ಕಾಯ್ದೆ 1980ರಡಿ ಆನ್‌ಲೈನ್‌ ಅರ್ಜಿಗಾಗಿ ಪಟ್ಟು ಹಿಡಿದಿದೆ.

ಅಧಿವೇಶನದಲ್ಲೂ ಚರ್ಚೆ
ಕಳೆದ ವರ್ಷ ವಿಧಾನಸಭೆ ಅಧಿವೇಶನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಕೇಳಿದ ಚುಕ್ಕೆ ಪ್ರಶ್ನೆಗೆ ಉತ್ತರಿಸಿದ ರಾಜ್ಯ ಸರಕಾರ, ಅರಣ್ಯ ಹಕ್ಕು ಕಾಯ್ದೆ 2006ರ ಪ್ರಕಾರ ಅಭಿವೃದ್ಧಿ ಕಾರ್ಯಗಳಿಗಾಗಿ ಆನ್‌ಲೈನ್‌ ಅರ್ಜಿಗಳನ್ನು ಸಲ್ಲಿಸ ಬೇಕಾಗಿಲ್ಲ ಎಂಬುದನ್ನು ಲಿಖೀತವಾಗಿ ತಿಳಿಸಿ ದರೂ ವನ್ಯಜೀವಿ ಅರಣ್ಯ ಇಲಾಖೆ ಮಾತ್ರ ತನ್ನ ಪಟ್ಟು ಸಡಿಲಿಸದಿರುವುದು ದುರಂತ. ದೇಶಕ್ಕೆ ಸ್ವಾತಂತ್ರ್ಯಲಭಿಸಿ 75 ವರ್ಷ ಗಳಾಗಿವೆ ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಈ ಸಂದರ್ಭದಲ್ಲಿ ಅವಕಾಶ ವಂಚಿತರಾದವರ ನೆರವಿಗೆ ಧಾವಿಸುವ ಅಗತ್ಯವಿದೆ.

ನೆಟ್‌ವರ್ಕ್‌ ಸಮಸ್ಯೆ
ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ 9 ಗ್ರಾಮಗಳಲ್ಲಿ ಸರಿಸುಮಾರು 1823 ಜನಸಂಖ್ಯೆ ಇದೆ. ಆನ್‌ಲೈನ್‌ ತರಗತಿಗಳು ನಡೆಯುತ್ತಿದ್ದರೂ, ನೆಟ್‌ವರ್ಕ್‌ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪಾಠದಿಂದ ವಂಚಿತರಾಗಿದ್ದಾರೆ.

ಸೇತುವೆ ನಿರ್ಮಾಣ ಮರೀಚಿಕೆ
ಕೋಡಿಮುಗೇರು ಸುಳೊÂàಡಿ ಸಂಪರ್ಕಿಸುವಲ್ಲಿ ಸೇತುವೆ ನಿರ್ಮಾಣವಾಗಬೆಕಿದೆ. ಇದು ಸ್ವಾತಂತ್ರ್ಯ ಪೂರ್ವದ ಬೇಡಿಕೆ. ಇಲ್ಲಿ 15 ಕುಟುಂಬವಿರುವ ಎಸ್‌.ಟಿ. ಕುಟುಂಬ ಅನಾಥವಾಗಿದೆ. ಈ ಹಿಂದೆ 15 ಕೋ.ರೂ. ಪ್ರಸ್ತಾವನೆ ಸಲ್ಲಿಸಿದ್ದರೂ ಪ್ರಯೋಜನ ಶೂನ್ಯ.

ಇತರ ಸಮಸ್ಯೆಗಳೇನು?
-ಸಾರ್ವಜನಿಕ ರಸ್ತೆಯಲ್ಲಿಲ್ಲ ದಾರಿದೀಪ
-ಡಾಮರು, ಕಾಂಕ್ರೀಟ್‌ ಕಾಣದ ಕಚ್ಚಾರಸ್ತೆ
-ಅನುಷ್ಠಾನವಾಗದ ಶಾಶ್ವತ ಕುಡಿಯುವ ನೀರಿನ ಯೋಜನೆ
-ಬಸ್‌ ಸೌಕರ್ಯದ ಕೊರತೆ

-ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

IPL Mega Auction: Here’s what all 10 teams look like after the first day of the auction

IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.