ಬಹುತೇಕ ವಿಧಾನಸಭಾ ಕ್ಷೇತ್ರಗಳಲ್ಲಿ ಶಾಸಕರ ಬರ

Team Udayavani, Jul 21, 2019, 3:05 AM IST

Udayavani Kannada Newspaper

ಬೆಂಗಳೂರು: ಒಂದೆಡೆ ಮಳೆಗಾಲದಲ್ಲೂ ಬರದ ಛಾಯೆ ಆವರಿಸಿದ್ದರೆ, ಮತ್ತೂಂದೆಡೆ ಈ ಪರಿಸ್ಥಿತಿಯನ್ನು ನಿಭಾಯಿಸಬೇಕಾದ ಶಾಸಕರಿಲ್ಲದೆ ರಾಜ್ಯದ ಬಹುತೇಕ ಎಲ್ಲ ವಿಧಾನಸಭಾ ಕ್ಷೇತ್ರಗಳು ಭಣಗುಡುತ್ತಿವೆ!.

ಸಾಮಾನ್ಯವಾಗಿ ರಾಜ್ಯದಲ್ಲಿ ಒಟ್ಟಾರೆ ಮುಂಗಾರಿನ ಪೈಕಿ ಶೇ.30ರಷ್ಟು ಮಳೆ ಜುಲೈನಲ್ಲೇ ಬೀಳುತ್ತದೆ. ಜುಲೈ 15 ಮುಗಿದರೂ ಮಲೆನಾಡಿನಲ್ಲೇ ವಾಡಿಕೆಗಿಂತ ಶೇ.30ರಷ್ಟು ಕಡಿಮೆ ಮಳೆಯಾಗಿದೆ. ಒಟ್ಟಾರೆ ಸರಾಸರಿ ಶೇ.19ರಷ್ಟು ಮಳೆ ಖೋತಾ ಆಗಿದೆ. 1,323 ಗ್ರಾಮಗಳಿಗೆ ಈಗಲೂ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಆಗುತ್ತಿದ್ದು, 250 ಮೇವು ಬ್ಯಾಂಕ್‌ಗಳನ್ನು ತೆರೆಯಲಾಗಿದೆ. ಬಿತ್ತನೆಯಲ್ಲಿ ಇನ್ನೂ ಚೇತರಿಕೆ ಕಂಡು ಬಂದಿಲ್ಲ. ಜಲಾಶಯಗಳಿಗೆ ಇನ್ನೂ ಸಮರ್ಪಕ ನೀರು ಹರಿಯುತ್ತಿಲ್ಲ. ಆದರೆ, ಈ ಕ್ಷೇತ್ರಗಳನ್ನು ಪ್ರತಿನಿಧಿಸುವ ಶಾಸಕರ ಸುಳಿವು ಕೂಡ ಅಲ್ಲಿಲ್ಲ.

ಮಳೆ ಚುರುಕುಗೊಂಡ ಕಡೆಗಳಲ್ಲಿ ಬಿತ್ತನೆ ಬೀಜ, ಗೊಬ್ಬರಕ್ಕಾಗಿ ರೈತರು ಬೆಳಗಾದರೆ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ. ಇಲ್ಲಿ ಸರ್ಕಾರದ ಅಳಿವು-ಉಳಿವಿಗಾಗಿ ರಾಜಕೀಯ ನಾಯಕರು ಮುನಿಸಿಕೊಂಡು ಹೋದ ಶಾಸಕರ ಮನವೊಲಿಕೆಗಾಗಿ ಅವರ ಮನೆಗಳ ಬಾಗಿಲು ತಟ್ಟುತ್ತಿದ್ದಾರೆ. ಇನ್ನು ಕೆಲವೆಡೆ ಮಳೆ ಇಲ್ಲದೆ, ರೈತರು ಆಗಸದತ್ತ ನೋಡುತ್ತಿದ್ದರೆ, ಅವರನ್ನು ಪ್ರತಿನಿಧಿಸುವ ಶಾಸಕರು ವಿವಿಧ ಪಂಚತಾರಾ ಹೋಟೆಲ್‌ಗ‌ಳಲ್ಲಿ ಬೀಡು ಬಿಟ್ಟಿದ್ದಾರೆ.

ಐದಾರು ದಿನಗಳಿಂದ ಎಲ್ಲ ಶಾಸಕರೂ ರೆಸಾರ್ಟ್‌ ಸೇರಿದ್ದಾರೆ. ಈ ಪೈಕಿ ಹತ್ತು ಶಾಸಕರು ಸರ್ಕಾರ ಬೀಳಿಸಲು ಹತ್ತು ದಿನಗಳಿಂದ ಮುಂಬೈ ರೆಸಾರ್ಟ್‌ನಲ್ಲಿ ನೆಲೆಸಿದ್ದರೆ, ಸರ್ಕಾರ ಉಳಿಸಿಕೊಳ್ಳಲು ಮೈತ್ರಿ ಪಕ್ಷಗಳು ತಮ್ಮ ಎಲ್ಲ ಶಾಸಕರನ್ನು ನಗರದ ಎರಡು ಪ್ರತ್ಯೇಕ ರೆಸಾರ್ಟ್‌ಗಳಲ್ಲಿ ಬಚ್ಚಿಟ್ಟಿದ್ದಾರೆ. ಮತ್ತೂಂದೆಡೆ ಹೊಸ ಸರ್ಕಾರ ರಚನೆಯ ಹುಮ್ಮಸ್ಸಿನಲ್ಲಿ ಪ್ರತಿಪಕ್ಷ ತನ್ನ ಎಲ್ಲ ಶಾಸಕರನ್ನು ಮೊಗದೊಂದು ರೆಸಾರ್ಟ್‌ಗೆ ಸಾಗಿಸಿದೆ. ಅವರ ಮೇಲೆ ಕಣ್ಗಾವಲು ಕೂಡ ಇಡಲಾಗಿದೆ. ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷದ ನಾಯಕರಾದಿಯಾಗಿ ಎಲ್ಲರೂ ಇದೇ ಕಸರತ್ತಿನಲ್ಲಿ ನಿರತರಾಗಿದ್ದಾರೆ.

ಶಾಸಕರಿರುವ ಈ ರೆಸಾರ್ಟ್‌ಗಳ ಒಂದೊಂದು ಕೊಠಡಿಗಳಿಗೆ ಹತ್ತಾರು ಸಾವಿರ ರೂ.ಆಗುತ್ತದೆ. ಮೂಲಗಳ ಪ್ರಕಾರ ಮುಂಬೈಗೆ ಹಾರಿರುವ ಅತೃಪ್ತರ ಹೋಟೆಲ್‌ನ ಕೊಠಡಿ ಬಾಡಿಗೆ ದಿನಕ್ಕೆ 23 ಸಾವಿರ ರೂ.ಆಗಿದ್ದು, ಒಂದು ಊಟಕ್ಕೆ ಮೂರೂವರೆ ಸಾವಿರ ರೂ. ಇವರು ಬಂದು ಹೋಗುವ ವಿಶೇಷ ವಿಮಾನಗಳ ಬಾಡಿಗೆ ಒಂದು ತಾಸಿಗೆ 2.25 ಲಕ್ಷ ರೂ.(ಐದು ಆಸನಗಳದ್ದಾಗಿದ್ದರೆ). ಬೆಂಗಳೂರಿನಿಂದ ಮುಂಬೈಗೆ ಸುಮಾರು ಒಂದೂವರೆ ತಾಸಿನ ಪ್ರಯಾಣ.

ಈ ಶಾಸಕರು ರೆಸಾರ್ಟ್‌ ಸೇರಿ ನಾಲ್ಕೈದು ದಿನಗಳಾಗಿದ್ದರೂ ಕ್ಷೇತ್ರದತ್ತ ಮುಖ ಮಾಡಿ ಬಹುತೇಕ ದಿನಗಳೇ ಕಳೆದಿವೆ. ಸರಿಸುಮಾರು ಲೋಕಸಭಾ ಚುನಾವಣೆ ನಂತರದಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಆಗಿನಿಂದಲೇ ಕೆಲವರು ದೂರ ಉಳಿದಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಾರೆ. ಇನ್ನು ನಗರದ ಬೆರಳೆಣಿಕೆಯಷ್ಟು ಶಾಸಕರು ಮಾತ್ರ ಆಗೊಮ್ಮೆ-ಈಗೊಮ್ಮೆ ಕ್ಷೇತ್ರದ ಕಡೆಗೆ ಇಣುಕು ಹಾಕಿ ಬರುತ್ತಿದ್ದಾರೆ.

ಈ ಮಧ್ಯೆ ಮಲೆನಾಡಿನ ಕೊಡಗು (ಶೇ. 46), ಚಿಕ್ಕಮಗಳೂರು (ಶೇ. 31), ಕರಾವಳಿಯ ದಕ್ಷಿಣ ಕನ್ನಡ (ಶೇ. 46), ಉಡುಪಿ (ಶೇ. 32), ಹೈದರಾಬಾದ್‌ ಕರ್ನಾಟಕದ ಬೀದರ್‌ (ಶೇ. 42), ಕಲಬುರಗಿ (ಶೇ. 27), ರಾಯಚೂರು (ಶೇ. 28), ಯಾದಗಿರಿ (ಶೇ. 34)ಯಲ್ಲಿ ಜುಲೈ 1ರಿಂದ ಜುಲೈ 15ರವರೆಗೆ ವಾಡಿಕೆಗಿಂತ ಹೆಚ್ಚು ಮಳೆ ಕೊರತೆ ಇರುವುದು ಕಂಡು ಬಂದಿದೆ. ಮಲೆನಾಡಿನಲ್ಲಿ ಮಳೆ ಕೊರತೆ ಇರುವುದರಿಂದ ಈ ಬಾರಿ ಸಮಸ್ಯೆ ಎಂದಿಗಿಂತ ಗಂಭೀರವಾಗಲಿದೆ ಎಂದು ತಜ್ಞರು ವಿಶ್ಲೇಷಿಸುತ್ತಾರೆ.

ಸಮಿತಿಗಳ ಕತೆ ಏನು?: ವಿಧಾನಸಭೆಯಲ್ಲಿ ಒಟ್ಟಾರೆ 16 ಸಮಿತಿಗಳಿವೆ. ಇವುಗಳಲ್ಲದೆ, ಸ್ಥಳೀಯ ಮಟ್ಟದಲ್ಲೂ ಶಾಸಕರನ್ನು ಒಳಗೊಂಡ ಹತ್ತು ಹಲವು ಸಮಿತಿಗಳು ಇರುತ್ತವೆ. ಹೀಗೆ ಶಾಸಕರು ಬಿಟ್ಟು ಹೋದರೆ, ಆ ಸಮಿತಿಗಳ ಕತೆ ಏನು ಎಂಬ ಪ್ರಶ್ನೆಯೂ ಈಗ ಉದ್ಭವಿಸಿದೆ.

* ವಿಜಯಕುಮಾರ ಚಂದರಗಿ

ಟಾಪ್ ನ್ಯೂಸ್

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

ಕಲ್ಮಕಾರು: ಅಯ್ಯಪ್ಪ ವೃತಧಾರಿ ಮೇಲೆ ಕಾಡಾನೆ ದಾಳಿ… ಆಸ್ಪತ್ರೆಗೆ ದಾಖಲು

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

Bengaluru: ಟೆಕಿ ಅತುಲ್‌ನಂತೆ ಪತ್ನಿ ಕಿರುಕುಳ ತಾಳದೆ ಕಾರ್ಮಿಕ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Jogging: ಬೆಳಗಾವಿಯಲ್ಲಿ ಕಾರ್ಮಿಕ ಸಚಿವ ಸಂತೋಷ ಲಾಡ್ ನೈಟ್ ರನ್ನಿಂಗ್, ಜಾಗಿಂಗ್

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Pavithra Gowda: 6 ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾದ ನಟಿ ಪವಿತ್ರಾ ಗೌಡ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Tabla Maestro; ಉಸ್ತಾದ್‌ ಜಾಕೀರ್‌ ಹುಸೇನ್‌ ದೈವೀ ಪುರುಷ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

Karnataka: ಕೊಳವೆ ಬಾವಿ ಮುಚ್ಚದಿದ್ದರೆ 1 ವರ್ಷ ಜೈಲು ಶಿಕ್ಷೆ

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಮುಂದೆ ಆಗಿದ್ದೇ ಬೇರೆ

Delhi: ಪ್ರಿಯಕರನ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತ್ನಿ… ಬಳಿಕ ನಡೆದದ್ದು ಘೋರ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

ಭಾರತದಲ್ಲಿ ಶ್ರೀರಾಮನ ಸಂಪ್ರದಾಯ ಮುಂದುವರಿಯಲಿದೆ ವಿನಃ ಬಾಬರನದ್ದಲ್ಲ: ಸಿಎಂ ಯೋಗಿ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Charmady: ನದಿಯಲ್ಲಿ ಗೋವುಗಳ ತಲೆ ಸೇರಿದಂತೆ ಅವಶೇಷ ಪತ್ತೆ

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

Chhattisgarh: ಜೀವಂತ ಕೋಳಿ ಮರಿ ನುಂಗಿ ವ್ಯಕ್ತಿ ಸಾ*ವು…ಆದರೆ ಕೋಳಿ ಮರಿ ಬಚಾವ್!

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

ಗರ್ಭಿಣಿ ಪತ್ನಿ ಜತೆ ಇರಲು ರಜೆ ಕೊಡದ ಅಧಿಕಾರಿಗಳು: ಆತ್ಮ*ಹತ್ಯೆ ಮಾಡಿಕೊಂಡ ಪೊಲೀಸ್ ಕಮಾಂಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.