Drought: ಬಿಜೆಪಿಯಿಂದ ಬರ ಅಧ್ಯಯನ ಪ್ರವಾಸ
ಹೊಲಗಳಲ್ಲಿ ಒಣಗಿ ನಿಂತ ಬೆಳೆಗಳ ವೀಕ್ಷಣೆ, ಮಳೆ ಕೊರತೆ, ಬೆಳೆ ಹಾನಿ, ನಷ್ಟದ ಕುರಿತು ರೈತರೊಂದಿಗೆ ಸಂವಾದ
Team Udayavani, Nov 6, 2023, 11:29 PM IST
ತುಮಕೂರು/ ಚಾಮರಾಜನಗರ /ದಾವಣಗೆರೆ: ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಅಧ್ಯಯನ ನಡೆಸಲು ಮುಂದಾಗಿರುವ ಬಿಜೆಪಿ, ಸೋಮವಾರ ತುಮಕೂರು, ಚಾಮ ರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ರೈತರೊಂದಿಗೆ ಸಂವಾದ ನಡೆಸಿ, ಬೆಳೆಹಾನಿ ಬಗ್ಗೆ ಮಾಹಿತಿ ಪಡೆದುಕೊಂಡಿತು.
ತುಮಕೂರು, ಗುಬ್ಬಿ ಹಾಗೂ ಶಿರಾ ತಾಲೂಕುಗಳಲ್ಲಿ ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಚಿವ ನಾಗೇಶ್ ನೇತೃತ್ವದ ತಂಡ ಪ್ರವಾಸ ಕೈಗೊಂಡು, ಬರ ಪರಿಶೀಲಿಸಿತು. ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು, ಬೆಳೆ ನಷ್ಟದ ಮಾಹಿತಿ ಪಡೆದುಕೊಂಡಿತು. ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ತಂಡ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿ, ಹೊನ್ನಾಳಿ ತಾಲೂಕಿನ ಮಾದನಬಾವಿ ಇತರೆಡೆ ಬರ ಪರಿಸ್ಥಿತಿ ಅಧ್ಯಯನ ನಡೆಸಿತು.
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಚೇಳೂರು ಗ್ರಾಮದ ಎಪಿಎಂಸಿ ಆವರಣದಲ್ಲಿ ಯಡಿಯೂರಪ್ಪ ಅವರು ರೈತರೊಂದಿಗೆ ಸಂವಾದ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಮಳೆ ಇಲ್ಲದೆ, ವಿದ್ಯುತ್‌ನ ಸಮಸ್ಯೆಯೂ ಹೆಚ್ಚಾಗಿದೆ. ರೈತರಿಗೆ ಸಮರ್ಪಕ ವಿದ್ಯುತ್ ಸೌಲಭ್ಯ ನೀಡಿದ್ದರೆ ಕೊಳವೆ ಬಾವಿಯಲ್ಲಿರುವ ಅಲ್ಪಸ್ವಲ್ಪ ನೀರು ಬಿಟ್ಟುಕೊಂಡು ಬೆಳೆಗಳನ್ನು ರಕ್ಷಿಸಿಕೊಳ್ಳಬಹುದಾಗಿತ್ತು. ಆದರೆ ರಾಜ್ಯ ಸರಕಾರ ಇಂತಹ ಯಾವುದೇ ಜನಪರ ಕಾರ್ಯಕ್ರಮಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಇದನ್ನು ಬಿಟ್ಟು ಪ್ರಧಾನಿ ಮೋದಿ ಅವರ ಮೇಲೆ ಟೀಕೆಗಳನ್ನು ಮಾಡುವುದರಲ್ಲೇ ಮಗ್ನವಾಗಿದೆ ಎಂದು ಆರೋಪಿಸಿದರು. ಅನಂತರ ಯಡಿಯೂರಪ್ಪ ನೇತೃತ್ವದ ತಂಡ ರೈತರ ಜಮೀನಿಗೆ ಭೇಟಿ ನೀಡಿ ರಾಗಿ ಬೆಳೆ ವೀಕ್ಷಿಸಿತು. ಮಂಗಳವಾರ ಕೊರಟಗೆರೆ, ಮಧುಗಿರಿಯಲ್ಲಿ ಯಡಿ ಯೂರಪ್ಪ ಹಾಗೂ ಇತರ ನಾಯಕರು ಬರ ಅಧ್ಯಯನ ನಡೆಸುವರು.
ಈ ನಡುವೆ ಯತ್ನಾಳ್ ನೇತೃತ್ವದ ತಂಡ ಗುಂಡ್ಲುಪೇಟೆ ಮತ್ತು ಚಾಮರಾಜನಗರ ವಿಧಾನ ಸಭಾ ಕ್ಷೇತ್ರಗಳಲ್ಲಿ ಬರ ಪರಿಸ್ಥಿತಿ ವೀಕ್ಷಿಸಿ ರೈತರಿಂದ ಮಾಹಿತಿ ಪಡೆದುಕೊಂಡಿತು. ಅಧ್ಯಯನ ತಂಡದಲ್ಲಿದ್ದ ಶಾಸಕ ಶ್ರೀವತ್ಸ, ಕೊಡಗು ಜಿಲ್ಲೆಯ ರೈತ ಮೋರ್ಚಾದ ಕಾರ್ಯದರ್ಶಿ ಡಾ| ನವೀನ್‌ಕುಮಾರ್, ಮಾಜಿ ಸಂಸದ ಸಿ.ಎಚ್.ವಿಜಯಶಂಕರ್ ಹಾಗೂ ಇತರರು ಕೀಳಲೀಪುರ, ಕುಲಗಾಣ, ಮೂಡ್ನಾಕೂಡು, ಶೀಗೇವಾಡಿ ಹಾಗೂ ಚಾಮರಾಜನಗರ ಕ್ಷೇತ್ರದ ಹೆಗ್ಗೊàಠಾರ ಗ್ರಾಮಗಳ ಜಮೀನುಗಳಿಗೆ ಭೇಟಿ ನೀಡಿ ಪರಿಶೀಲಿಸಿ ರೈತರಿಂದ ಮಾಹಿತಿ ಪಡೆದರು.
ಕಾಗೇರಿ ನೇತೃತ್ವದ ತಂಡ
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ಬಿಜೆಪಿ ಮುಖಂಡರ ತಂಡ ಸೋಮವಾರ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೊಡಿ, ಹೊನ್ನಾಳಿ ತಾಲೂಕಿನ ಮಾದನಬಾವಿ ಇತರೆಡೆ ಬರ ಪರಿಸ್ಥಿತಿ ಅಧ್ಯಯನ ನಡೆಸಿತು.
ತಂಡದ ಸದಸ್ಯರು ಹರಿಹರ ತಾಲೂಕಿನ ಬೆಳ್ಳೊಡಿ ಗ್ರಾಮದ ಹಲವಾರು ಹೊಲಗಳಲ್ಲಿ ಒಣಗಿ ಹೋಗಿರುವ ಮೆಕ್ಕೆಜೋಳ, ಜೋಳ ಇತರ ಬೆಳೆಗಳನ್ನು ವೀಕ್ಷಿಸಿದರು. ರೈತರೊಂದಿಗೆ ಮಳೆಯ ಕೊರತೆ, ಬೆಳೆ ಹಾನಿ, ನಷ್ಟ, ದೊರೆಯಬೇಕಾದ ಪರಿಹಾರ, ಸರಕಾರದಿಂದ ಪರಿಹಾರ ಪಡೆಯುವ ನಿಟ್ಟಿನಲ್ಲಿ ಇರುವ ಸಾಧಕ-ಬಾಧಕ ಬಗ್ಗೆ ಕೂಲಂಕಷವಾಗಿ ಚರ್ಚಿಸಿ, ಮಾಹಿತಿ ಪಡೆದರು.
ಬರ ಅಧ್ಯಯನ ಪ್ರವಾಸದ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ಅಂತಿಮ ವರದಿ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸ ಲಾಗುವುದು. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ರೈತರ ಪರ ಬಿಜೆಪಿ ಧ್ವನಿ ಎತ್ತಲಿದೆ ಎಂದರು.
ಹರಿಹರ ತಾಲೂಕಿನ ಬೆಳ್ಳೊಡಿ ನಂತರ ಹೊನ್ನಾಳಿ ತಾಲೂಕಿನ ಮಾದನಬಾವಿ ಸಹಿತ ಇತರ ಗ್ರಾಮಗಳಲ್ಲಿ ಅಧ್ಯಯನ ನಡೆಸಿತು. ಕುರಿಗಾಹಿಗಳೊಂದಿಗೆ ಸಂವಾದ ನಡೆಸಲಾಯಿತು. ರೈತರೊಂ ದಿಗೆ ಚರ್ಚಿಸಿ, ಹಲವಾರು ಮಾಹಿತಿ ಸಂಗ್ರಹಿಸಿದ ತಂಡ ಬರದಿಂದ ತತ್ತರಿಸಿರುವ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿತು. ಬಿರುಸಿನ ಮಳೆಯ ಕಾರಣ ಜಗಳೂರು ತಾಲೂಕಿನ ಪ್ರವಾಸ ರದ್ದುಗೊಳಿಸಲಾಯಿತು.
ರಾಜ್ಯದಲ್ಲಿ ಬರ ಅಧ್ಯಯನಕ್ಕೆ ಆಗಮಿಸಿದ್ದ ಕೇಂದ್ರ ತಂಡಕ್ಕೆ ನೈಜ ಸ್ಥಿತಿ ತೋರಿಸುವಲ್ಲಿ ರಾಜ್ಯ ಸರಕಾರ ವಿಫಲವಾಗಿದೆ. ಹಸಿರು ಜಾಗವನ್ನು ತೋರಿಸಿದರೆ ಪರಿಹಾರ ನಿರೀಕ್ಷಿಸಲು ಸಾಧ್ಯವೇ?ಈ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು 18 ತಂಡಗಳನ್ನು ರಾಜ್ಯವನ್ನು ಸುತ್ತುತ್ತಿದ್ದು, ರೈತರ ಸಮಸ್ಯೆ, ಕುಡಿಯುವ ನೀರು, ಜಾನುವಾರುಗಳ ಮೇವು ಸಹಿತ ಸಮಗ್ರ ಅಂಶಗಳನ್ನು ಒಳಗೊಂಡಿರುವ ವರದಿಯನ್ನು ಆದಷ್ಟು ಬೇಗ ಕೇಂದ್ರ ಸರಕಾರಕ್ಕೆ ಸಲ್ಲಿಸುತ್ತೇವೆ.
-ಗೋವಿಂದ ಕಾರಜೋಳ, ಮಾಜಿ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.