ಕಾಶ್ಮೀರದಲ್ಲಿ ಮಾದಕ ಜಾಲ: 8,000 ಕೆ.ಜಿ. ಡ್ರಗ್ಸ್ ವಶ- 5ವರ್ಷದಲ್ಲಿ 6,500 ಪ್ರಕರಣ
ಸಬಲೀಕರಣ ಸಚಿವಾಲಯ ಈ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿದೆ.
Team Udayavani, Dec 16, 2024, 11:55 AM IST
ಶ್ರೀನಗರ: ದಶಕಗಳಿಂದ ಬಂದೂಕು, ಕಲ್ಲುತೂರಾಟದ ಹಾವಳಿಯಿಂದ ಬೇಸತ್ತಿದ್ದ ಜಮ್ಮು-ಕಾಶ್ಮೀರದಲ್ಲಿ ಈಗ ಮತ್ತೊಂದು ಸಮಸ್ಯೆ ಎದುರಾಗಿದೆ. ಇಲ್ಲೀಗ ಮಾದಕ ಪದಾರ್ಥಗಳ ದೊಡ್ಡ ಜಾಲವೇ ಹುಟ್ಟಿಕೊಂಡಿದ್ದು, ಕಳೆದ 5 ವರ್ಷಗಳಲ್ಲಿ 8 ಸಾವಿರ ಕೆ.ಜಿ. ಮಾದಕ ದ್ರವ್ಯಗಳನ್ನು ವಶಕ್ಕೆ ಪಡೆದು, 9,500 ಮಂದಿಯನ್ನು ಬಂಧಿಸಲಾಗಿದೆ.
2021ರಿಂದೀಚೆಗೆ ಮಾದಕ ದ್ರವ್ಯ ಸಾಗಣೆ ಪ್ರಕರಣ ಹೆಚ್ಚಾಗಿವೆ. ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸಸ್ ಕಾಯ್ದೆ (ಎನ್‌ಡಿಪಿಎಸ್‌ಎ) ಅಡಿ 6,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು, 8,000 ಕೆ.ಜಿ. ಡ್ರಗ್ಸ್ ವಶಕ್ಕೆ ಪಡೆದು ನಾಶಪಡಿಸಲಾಗಿದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಈ ಬಗ್ಗೆ ಲೋಕಸಭೆಗೆ ಮಾಹಿತಿ ನೀಡಿದೆ. 2021ರಲ್ಲಿ 1543 ಪ್ರಕರಣ ದಾಖಲಾ ಗಿದ್ದು, 2,217 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ.
2022ರಲ್ಲಿ 1,857 ಪ್ರಕರಣ, 2,755 ಮಂದಿ ಬಂಧನ, 2023ರಲ್ಲಿ 2,149 ಪ್ರಕರಣ, 3,072 ಬಂಧನ, 2024 ರಲ್ಲಿ 985 ಕೇಸ್ ದಾಖಲಾಗಿದ್ದು, 1,380 ಜನರ ಬಂಧಿಸಲಾಗಿದೆ ಎಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PMML: ನೆಹರು ಅವರ ಪತ್ರ ಸಂಗ್ರಹವನ್ನು ಮರಳಿಸಿ: ರಾಹುಲ್ ಗೆ ಕೇಂದ್ರದ ಪತ್ರ
Road Mishap: ಟ್ರಕ್ ಚಾಲಕನ ಅವಾಂತರಕ್ಕೆ 6 ಮಂದಿ ಸ್ಥಳದಲ್ಲೇ ಮೃತ್ಯು, 7 ಮಂದಿ ಗಂಭೀರ
Ayodhya’s Shri Ram Mandir: ಅಯೋಧ್ಯೆ ರಾಮಮಂದಿರ ಯೋಜನೆಗೆ ಸ್ವೋ ರ್ಡ್ ಆಫ್ ಆನರ್ ಕಿರೀಟ
Humpback whale: 13,046 ಕಿ.ಮೀ. ಕ್ರಮಿಸಿದ ತಿಮಿಂಗಿಲ: ದೀರ್ಘ ಯಾನ
Maharashtra: ಸಂಪುಟ ವಿಸ್ತರಣೆ ಬೆನ್ನಲ್ಲೇ ಪಕ್ಷದ ಸ್ಥಾನಕ್ಕೆ ಶಿವಸೇನೆ ಶಾಸಕ ರಾಜೀನಾಮೆ
MUST WATCH
ಹೊಸ ಸೇರ್ಪಡೆ
ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ
Stock Market: ಷೇರುಪೇಟೆ ಸೂಚ್ಯಂಕ 400ಕ್ಕೂ ಅಧಿಕ ಅಂಕ ಕುಸಿತ, ನಿಫ್ಟಿಯೂ ಇಳಿಕೆ
Shimoga; ನಮ್ಮ ನಾಯಕರು ಗಮನ ಹರಿಸಲಿ: ಕುಮಾರ್ ಬಂಗಾರಪ್ಪ ಹೇಳಿಕೆಗೆ ರಾಘವೇಂದ್ರ ತಿರುಗೇಟು
Child marriage: 3 ವರ್ಷದಲ್ಲಿ ರಾಜ್ಯಾದ್ಯಂತ 1,465 ಬಾಲ್ಯ ವಿವಾಹ ಪತ್ತೆ
Mangaluru: ಸಿಟಿ ಸೆಂಟರ್ ಬಳಿ ಹೊತ್ತಿ ಉರಿದ ಕಾರು… ಮಹಿಳೆ ಪಾರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.