ಚೆಕ್‌ಗೆ ನಕಲಿ ಸಹಿ ಬಳಸಿ 2.50 ಕೋಟಿ ರೂ. ವಂಚಿಸಲೆತ್ನಿಸಿದ ಇಬ್ಬರ ಬಂಧನ
Team Udayavani, Aug 20, 2021, 1:36 PM IST
ಧಾರವಾಡ: ಕಂಪನಿಯೊಂದರ ಚೆಕ್‌ಗೆ ನಕಲಿ ಸಹಿ ಬಳಸಿ ಬ್ಯಾಂಕ್‌ನಿಂದ ಹಣ ಪಡೆಯಲು ಯತ್ನಿಸಿದ ಇಬ್ಬರು ಪೊಲೀಸರ ಅತಿಥಿಯಾಗಿದ್ದಾರೆ. ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಖಾನಭಾಗ ನಿವಾಸಿ ಯುವರಾಜ್ ಬಿರಾದಾರ ಸೇರಿದಂತೆ ಇಬ್ಬರು ಸಿಕ್ಕಿಬಿದ್ದವರು.
ನಗರದ ಎನ್‌ಟಿಟಿಎಫ್ ಬಳಿಯ ಎಚ್‌ಡಿಎಫ್‌ಸಿ ಬ್ಯಾಂಕ್ ಶಾಖೆಯಲ್ಲಿ ಕಂಪನಿಯೊಂದರ ಚೆಕ್‌ಗೆ ನಕಲಿ ಸಹಿ ಬಳಸಿ 2.50 ಕೋಟಿ ಹಣ ಪಡೆಯಲು ಯತ್ನಿಸಿದ್ದಾರೆ. ಈ ಸಂದರ್ಭದಲ್ಲಿ ಸಹಿ ಬಗ್ಗೆ ಸಂಶಯಗೊಂಡ ಬ್ಯಾಂಕ್ ವ್ಯವಸ್ಥಾಪಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿಚಾರಣೆ ಕೈಗೊಂಡಾಗ ನಕಲಿ ಸಹಿ ಮಾಡಿ ಹಣ ದೋಚುವ ಸಂಚು ಬಯಲಾಗಿದೆ.
ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಬೈಕ್‌ನಿಂದ ಬಿದ್ದು ಸಾವು: ಬೈಕ್ ನಿಯಂತ್ರಣ ತಪ್ಪಿ ಫುಟ್‌ಪಾತ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರದ ಮಾಡರ್ನ್ ಹಾಲ್ ಬಳಿ ನಡೆದಿದೆ. ವಿಜಯಪುರದ ಮಹೇಶ ಭಜಂತ್ರಿ ಮೃತಪಟ್ಟವ. ಐಎಎಸ್ ಪರೀಕ್ಷೆಗೆ ತರಬೇತಿ ಪಡೆಯಲು ನಗರದಲ್ಲಿ ನೆಲೆಸಿದ್ದ ಈತ, ಬೈಕ್‌ನಲ್ಲಿ ರೂಮ್‌ನತ್ತ ಹೊರಟಾಗ ಅಪಘಾತ ಸಂಭವಿಸಿದೆ. ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.