ದಸರಾ: ಕಾರ್ಯಕ್ರಮಗಳ ಭಿತ್ತಿಚಿತ್ರ ಬಿಡುಗಡೆ
Team Udayavani, Sep 28, 2019, 3:05 AM IST
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ಶುಕ್ರವಾರ ವಿವಿಧ ಉಪ ಸಮಿತಿ ಕಾರ್ಯಕ್ರಮಗಳ ಭಿತ್ತಿಚಿತ್ರ ಬಿಡುಗಡೆ ಮಾಡಿದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಸೆ.29ರಂದು ಬೆಳಗ್ಗೆ 9.39 ರಿಂದ 10.25ರೊಳಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಸರಸ್ವತಿ ಸಮ್ಮಾನ್ ಪುರಸ್ಕೃತ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪ ಅವರು ದೇವಿಗೆ ಪೂಜೆ ಸಲ್ಲಿಸುವ ಮುಲಕ ನಾಡಹಬ್ಬ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಿದ್ದಾರೆ.
ಸಂಜೆ 6ಗಂಟೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. 29 ರಂದು ಸಂಜೆ 5 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ಪುಸ್ತಕ ಮೇಳ ಉದ್ಘಾಟಿಸಲಿದ್ದಾರೆ. ಅ.1ರಂದು ಮಹಾ ರಾಜ ಕಾಲೇಜು ಮೈದಾನದಲ್ಲಿ ಯುವ ದಸರಾ ಕಾರ್ಯಕ್ರಮವನ್ನು ಬ್ಯಾಡ್ಮಿಂಟನ್ ತಾರೆ, ವಿಶ್ವ ಚಾಂಪಿಯನ್ ಪಿ.ವಿ.ಸಿಂಧು ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದರು.
ಕ್ರೀಡಾಪಟುಗಳಿಗೆ ಉಚಿತ ವೀಕ್ಷಣೆ: ದಸರಾ ಕ್ರೀಡಾಕೂಟಕ್ಕೆ ಬರುವ ಕ್ರೀಡಾ ಪಟುಗಳಿಗೆ ಮೈಸೂರು ಅರಮನೆ ಹಾಗೂ ಮೃಗಾಲಯವನ್ನು ಉಚಿತವಾಗಿ ವೀಕ್ಷಿ ಸುವ ಅವಕಾಶ ಕಲ್ಪಿಸಲಾಗಿದೆ. ಅ.1 ರಿಂದ ಪ್ರಾರಂಭವಾಗುವ ದಸರಾ ಕ್ರೀಡಾಕೂಟ ದಲ್ಲಿ ರಾಜ್ಯದ ಮೂಲೆ-ಮೂಲೆಗಳಿಂದ ನಾಲ್ಕು ಸಾವಿರಕ್ಕೂ ಹೆಚ್ಚಿನ ಕ್ರೀಡಾ ಪಟುಗಳು ಬರುವ ನಿರೀಕ್ಷೆ ಇದೆ. ಇವರಿಗೆ ಉಚಿತ ವೀಕ್ಷಣೆಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಸಚಿವ ವಿ.ಸೋಮಣ್ಣ ಸೂಚನೆ ನೀಡಿದ್ದಾರೆ. ಜತೆಗೆ, ಸೆ.29 ರಿಂದ ಅ.9ರವರೆಗೆ ಹೊರ ರಾಜ್ಯಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿ ವಾಹನಗಳಿಗೆ ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಭೈರಪ್ಪ ಮನೆಗೆ ಸಿಎಂ ಇಂದು ಭೇಟಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಸಂಜೆ 6.30ಕ್ಕೆ ಮೈಸೂರಿಗೆ ಆಗಮಿಸಲಿದ್ದು, ದಸರಾ ಮಹೋತ್ಸವ ಉದ್ಘಾ ಟಕರಾದ ಡಾ.ಎಸ್.ಎಲ್. ಭೈರಪ್ಪ ಅವರ ಮನೆಗೆ ಭೇಟಿ ನೀಡಲಿ ದ್ದಾರೆ. ಬಳಿಕ, ಮೈಸೂರಿ ನಲ್ಲಿ ವಾಸ್ತವ್ಯ ಹೂಡಲಿದ್ದು, ಭಾನುವಾರ ಬೆಳಗ್ಗೆ 9.30ಕ್ಕೆ ಚಾಮುಂಡಿ ಬೆಟ್ಟದಲ್ಲಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸು ವರು. ಸಂಜೆ 4.30ಕ್ಕೆ ಲಲಿತ ಮಹಲ್ ಹೆಲಿಪ್ಯಾಡ್‌ಗೆ ಆಗಮಿಸಿ ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ತೆರಳುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.