ಮನಗೂಳಿ ಗ್ರಾಮದಲ್ಲಿ ಮತ್ತೆ ಭೂಕಂಪನದ ಅನುಭವ ? ಮನೆಯಿಂದ ಹೊರಬಂದ ಜನರಿಂದ ಜಾಗರಣೆ
Team Udayavani, Feb 24, 2021, 11:58 PM IST
ವಿಜಯಪುರ : ಜಿಲ್ಲೆಯ ಮನಗೂಳಿ ಗ್ರಾಮದಲ್ಲಿ ಬುಧವಾರ ರಾತ್ರಿ ಮತ್ತೆ ಭೂಮಿ ಅಲುಗಾಡಿದೆ. ಭೂಕಂಪನದ ಅನುಭವ ಆಗುತ್ತಲೇ ಗ್ರಾಮದಲ್ಲಿ ಮಲಗಿದ್ದ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.
ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಬುಧವಾರ ರಾತ್ರಿ 10-30 ರ ಸುಮಾರಿಗೆ ಭೂಮಿ ಕಂಪಿಸಿದ ಅನುಭವಾಗಿದೆ. ಮನೆಯಲ್ಲಿ ಪಾತ್ರೆ, ಇತರೆ ವಸ್ತುಗಳು ಕೆಳಗೆ ಬಿದ್ದಿವೆ. ಮಲಗಿದವರನ್ನು ಅಲುಗಾಡಿಸಿ ಎಬ್ಬಿಸಿದ ಅನುಭವ ಅಗಿದ್ದು, ಕೂಡಲೇ ಮನೆಯಿಂದ ಹೊರಗೆ ಓಡಿ ಬಂದಿರುವ ಜನರು ಕಣ್ಣಿನ ರೆಪ್ಪೆ ಬಡಿಯದೇ ಜಾಗರಣೆ ಮಾಡುತ್ತಿದ್ದಾರೆ.
ಭೂಮಿಯಿಂದ ಭಾರೀ ಶಬ್ದ ಕೇಳಿಸಿದ್ದು, ಭೂಮಿಯೂ ಕಂಪಿಸಿದೆ. ಮನಗೂಳಿ ಗ್ರಾಮದಲ್ಲಿ ಕಳೆದ ಒಂದು ವಾರದಲ್ಲಿ 4 ಬಾರಿ ಭೂಮಿ ಕಂಪಿಸಿದ ಅನುಭವಾಗಿದೆ. ಪದೇ ಪದೇ ಭೂಕಂಪದ ಅನುಭವವಾದರೂ ಅಧಿಕಾರಿಗಳು ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದನ್ನೂ ಓದಿ:ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್ ಆರೋಪ
ತಡರಾತ್ರಿಯೂ ಮನೆ ಒಳಗೆ ಹೋಗದೇ ಮಕ್ಕಳು, ವೃದ್ಧರು, ಮಹಿಳೆಯರೊಂದಿಗೆ ಅಂಗಳದಲ್ಲಿ ಕುಳಿತಿರುವ ಮನಗೂಳಿ ಜನರು ಆತಂಕದಲ್ಲಿ ರಾತ್ರಿ ಕಳೆಯುತ್ತಿದ್ದಾರೆ.
ಗ್ರಾಮದಲ್ಲಿ ಗಂಭೀರ ದುರಂತ ಸಂಭವಿಸುವ ಮೊದಲೇ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ವಿಜ್ಞಾನಿಗಳು ತಕ್ಷಣ ಗ್ರಾಮಕ್ಕೆ ಆಗಮಿಸಿ ಅಧ್ಯಯನ ನಡೆಸಬೇಕು. ಈ ಕುರಿತು ಸಬೂಬು ಹೇಳದೆ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ
Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್. ಸಂತೋಷ್ ಹೆಗ್ಡೆ
Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್
Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ
Kota: ಸಾಸ್ತಾನ ಟೋಲ್: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.