ಭಾರತದ ಆರ್ಥಿಕತೆ ಶೇ. 9.5ಕ್ಕೆ ಏರಿಕೆ ನಿರೀಕ್ಷೆ
Team Udayavani, Jun 11, 2020, 6:15 AM IST
ಹೊಸದಿಲ್ಲಿ: ಕೋವಿಡ್-19 ಲಾಕ್ಡೌನ್ ನಿಂದಾಗಿ ಇಳಿಮುಖವಾಗಿರುವ ಭಾರತದ ಆರ್ಥಿಕತೆ, ಮುಂದಿನ ಹಣಕಾಸು ವರ್ಷದಲ್ಲಿ (2021-22) ತ್ವರಿತ ಬೆಳವಣಿಗೆ ಕಾಣುವ ಮೂಲಕ ಶೇ. 9.5ಕ್ಕೇರಲಿದೆ ಎಂದು ವಿಶ್ವದ ಪ್ರಮುಖ ಕ್ರೆಡಿಟ್ ರೇಟಿಂಗ್ ಸಂಸ್ಥೆಗಳಲ್ಲೊಂದಾದ ಫಿಚ್ ರೇಟಿಂಗ್ಸ್ ಕಂಪೆನಿ ಹೇಳಿದೆ.
ತಾನು ಪ್ರಕಟಿಸಿರುವ ಅಪಾಕ್ ಸಾವೆರಿನ್ ಕ್ರೆಡಿಟ್ ಓವರ್ವ್ಯೂ ಎಂಬ ವರದಿಯಲ್ಲಿ ಈ ವಿಚಾರ ಉಲ್ಲೇಖೀ ಸಿರುವ ಕಂಪೆನಿ, ಪ್ರಸಕ್ತ ಹಣ ಕಾಸು ವರ್ಷದಲ್ಲಿ ಈ ಹಿಂದೆ ನಿರೀಕ್ಷಿಸಲಾಗಿದ್ದ ಒಟ್ಟು ರಾಷ್ಟ್ರೀಯ ಉತ್ಪನ್ನ (ಜಿಡಿಪಿ) ದಲ್ಲಿ ಶೇ. 5ರಷ್ಟು ಇಳಿಮುಖವಾಗಲಿದೆ ಎಂದಿದೆ.
ಮಾ. 25ರಿಂದ ದೇಶಾದ್ಯಂತ ಲಾಕ್ಡೌನ್ ಜಾರಿ ಗೊಳಿಸಿದ್ದರಿಂದ ದೇಶದ ಎಲ್ಲ ಆರ್ಥಿಕ ಚಟುವಟಿಕೆಗಳೂ ಸ್ಥಗಿತಗೊಂಡಿದ್ದವು. ಇದು ದೇಶದ ಒಟ್ಟಾರೆ ಆರ್ಥಿಕತೆಯ ಮೇಲೆ ದುಷ್ಪರಿಣಾಮ ಬೀರಿತ್ತು. ಮೇ 4ರಿಂದ ಲಾಕ್ಡೌನ್ನ ನಿರ್ಬಂಧ ಸಡಿಲಿಸುತ್ತಿದ್ದು, ಆರ್ಥಿಕ ಚಟುವಟಿಕೆಗಳೂ ಹಂತ ಹಂತವಾಗಿ ಆರಂಭ ಗೊಂಡಿವೆ. ಆರ್ಥಿಕತೆಯ ಮೇಲೆ ಸಂಭವಿಸ ಬಹುದಾಗಿದ್ದ ದುಷ್ಪರಿಣಾಮ ಇದರಿಂದಾಗಿ ದೂರ ವಾಗಲಿದ್ದು, 2021-22ರಲ್ಲಿ ಹಣಕಾಸು ಪರಿಸ್ಥಿತಿ ಶೇ. 9.5ಕ್ಕೆ ಏರಲಿದೆ ಎಂದು ಕಂಪೆನಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Dr. Manmohan Singh; ನಾಳೆ ನಿಗಮಬೋಧ್ ಘಾಟ್ ಚಿತಾಗಾರದಲ್ಲಿ ಮಾಜಿ ಪ್ರಧಾನಿ ಅಂತ್ಯಕ್ರಿಯೆ
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ
New Delhi: ಸಂಸತ್ತಿನ ಬಳಿ ಬೆಂಕಿ ಹಚ್ಚಿಕೊಂಡಿದ್ದ ಯುವಕ ಸಾ*ವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi; ಹೆರಿಗೆ ಬಳಿಕ ಮತ್ತೋರ್ವ ಬಾಣಂತಿ ಸಾವು
Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ
Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು
Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ
Kasaragod Crime News: ಅವಳಿ ಪಾಸ್ಪೋರ್ಟ್; ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.