Education: ವಿದ್ಯಾವಿಕಾಸ ಅಕ್ರಮ ತನಿಖೆ: ಸಂಪುಟ ಸಭೆ ತೀರ್ಮಾನ
Team Udayavani, Sep 8, 2023, 1:39 AM IST
ಬೆಂಗಳೂರು: ಹಿಂದಿನ 2 ಶೈಕ್ಷಣಿಕ ವರ್ಷ ಗಳಲ್ಲಿ ವಿದ್ಯಾ ವಿಕಾಸ ಯೋಜನೆಯಡಿ ವಿದ್ಯಾರ್ಥಿ ಗಳಿಗೆ ಕಳಪೆ ಸಮವಸ್ತ್ರ ಪೂರೈಕೆ ಮಾಡಿದ ಪ್ರಕರಣದ ಬಗ್ಗೆ ಇಲಾಖಾ ತನಿಖೆ ನಡೆಸಲು ರಾಜ್ಯ ಸರಕಾರವು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯಿಸಿದೆ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 13 ವಿಚಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳ ಮೀಸಲು ವಿವಾದ ಇತ್ಯರ್ಥಗೊಳಿಸುವ ಸಂಬಂಧ ನ್ಯಾ| ಭಕ್ತವತ್ಸಲಂ ಸಮಿತಿ ನೀಡಿದ ವರದಿ ಸ್ವೀಕರಿಸುವ ವಿಚಾರದಲ್ಲಿ ಮತ್ತೆ ಸಮಯ ತೆಗೆದುಕೊಂಡಿದೆ. ಆದರೆ ಕಳಪೆ ಸಮವಸ್ತ್ರ ಪೂರೈಕೆ ಹಗರಣ ಬಗ್ಗೆ ಕಟ್ಟುನಿಟ್ಟಾಗಿ ತನಿಖೆ ನಡೆಸಲು ತೀರ್ಮಾನಿಸಲಾಗಿದೆ.
ಈ ಹಗರಣಕ್ಕೆ ಸಂಬಂಧಪಟ್ಟಂತೆ ಅಂದಿನ ಕೆಎಚ್‌ಡಿಸಿ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿತ್ತು. ಆದರೆ ಇಷ್ಟರಲ್ಲಿ ಪ್ರಕರಣ ಅಂತ್ಯಗೊಳ್ಳುವುದಕ್ಕೆ ಬಿಡುವುದು ಸೂಕ್ತವಲ್ಲ ಎಂದು ಸರಕಾರ ನಿರ್ಧರಿಸಿದೆ. ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಇಲಾಖಾ ತನಿಖೆ ನಡೆಸುವುದು ಸೂಕ್ತ ಎಂದು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ್ ವಿವರಿಸಿದರು.
ಇದಲ್ಲದೆ ಸಾರಿಗೆ ಇಲಾಖೆಗೆ ಬಸ್ ಖರೀದಿಗಾಗಿ 500 ಕೋಟಿ ರೂ. ಮೀಸಲು ಇರಿಸಲಾಗಿದೆ. ಕೆಎಸ್ಸಾರ್ಟಿಸಿ ಮತ್ತು ಬಿಎಂಟಿಸಿಗೆ ತಲಾ 150 ಕೋಟಿ ರೂ. ನೀಡಲಾಗಿದ್ದು, ಅದರಲ್ಲಿ 320 ಎಲೆಕ್ಟ್ರಿಕ್ ಬಸ್ ಖರೀದಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.