ಉಳಿದ ಶಾಲಾ ತರಗತಿ ಆರಂಭ ಕುರಿತು ಫೆ. 16ರಂದು ಸಭೆ : ಸಚಿವ ಸುರೇಶ್ ಕುಮಾರ್
Team Udayavani, Feb 12, 2021, 7:13 PM IST
ಬೆಂಗಳೂರು: ರಾಜ್ಯದ ಎಲ್ಲ ಭಾಗಗಳಿಂದಲೂ ಪ್ರಸ್ತುತ ಶೈಕ್ಷಣಿಕ ವರ್ಷದ ಉಳಿದ ತರಗತಿಗಳನ್ನು ಆರಂಭಿಸಬೇಕೆಂಬ ಪೋಷಕರು, ವಿದ್ಯಾರ್ಥಿ ಸಮುದಾಯ ಒತ್ತಾಯದ ಹಿನ್ನೆಲೆ ಶಾಲಾರಂಭ ಕುರಿತಂತೆ ಫೆ. 16ರಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಶುಕ್ರವಾರ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಇಲಾಖೆಯ ಹಲವಾರು ವಿಷಯಗಳ ಮತ್ತು ಈಗಾಗಲೇ ಆರಂಭವಾಗಿರುವ ತರಗತಿಗಳ ಹಾಜರಾತಿ ಪ್ರಗತಿ ಪರಿಶೀಲಿಸಿ ಮಾತನಾಡಿದ ಅವರು, ಉಳಿದ ತರಗತಿಗಳ ಆರಂಭ ಕುರಿತು ವ್ಯಾಪಕವಾದ ಒತ್ತಾಯ ಕೇಳಿಬರುತ್ತಿದೆ ಎಂದರು.
ತಾವು ಇತ್ತೀಚೆಗೆ ಭೇಟಿ ನೀಡಿದ 15ಕ್ಕೂ ಹೆಚ್ಚು ಜಿಲ್ಲೆಗಳ ಹಲವಾರು ಶಾಲೆಗಳಲ್ಲಿ ಕೋವಿಡ್ ನಿಯಮಗಳ ಪಾಲನೆ ಮಾಡುತ್ತಿರುವುದನ್ನು ತಾವು ಖುದ್ದಾಗಿ ಪರಿಶೀಲಿಸಿದ್ದು, ಶಾಲೆಗಳು ತಡವಾಗಿ ಆರಂಭವಾಗಿರುವುದರಿಂದ ಶಾಲೆಗಳಿಗೆ ಬಹು ಆಸ್ಥೆಯಿಂದ ಬರುತ್ತಿದ್ದಾರೆ. ಕಲಿಕೆಯಲ್ಲಿ ಹೆಚ್ಚಿನ ಆಸಕ್ತಿ ವಹಿಸಿ ಪಾಠ ಪ್ರವಚನ ಆಲಿಸುತ್ತಿರುವುದು ಕಂಡು ಬಂದಿದೆ ಎಂದರು.
ಶಾಲಾ ಸುರಕ್ಷತಾ ನಿಯಮಗಳ ಕುರಿತ ಸಭೆ:
ಕಳೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಪ್ರಸ್ತಾಪವಾದ ಖಾಸಗಿ ಶಾಲೆಗಳ ಸುರಕ್ಷತಾ ನಿಯಮಗಳ ಸರಳೀಕರಿಸಬೇಕೆಂಬ ಪ್ರಸ್ತಾವನೆಗಳ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪಿನ ವ್ಯಾಪ್ತಿಯಲ್ಲಿಯೇ ಮರು ಪರಿಶೀಲಿಸುವ ಕುರಿತು ಫೆ. 16ರಂದು ಅಗ್ನಿಶಾಮಕ ದಳ, ಲೋಕೋಪಯೋಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಗೃಹ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆಯಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಕಡತ ವಿಲೇವಾರಿ ಯಜ್ಞ:
ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಉಪನಿರ್ದೇಶಕರ ಕಚೇರಿಗಳಲ್ಲಿ ಕೆಲಸಗಳು ಸರಿಯಾಗಿ ಹಾಗೂ ಸಕಾಲದಲ್ಲಿ ಆಗುತ್ತಿಲ್ಲವೆಂದು ಪದೇ ಪದೇ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗಿರುವ ಹಿನ್ನೆಲೆ ಕಡತ ವಿಲೇವಾರಿ ಯಜ್ಞಕ್ಕೆ ಚಾಲನೆ ನೀಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ತಂತ್ರಜ್ಞಾನಾಧಾರಿತವಾದ ಆಡಳಿತಕ್ಕೆ ಪ್ರಾಶಸ್ತ್ಯ ನೀಡಬೇಕೆಂದು ಸೂಚನೆ ನೀಡಿದರು. ಮಾರ್ಚ್ 1 ರಂದು ಧಾರವಾಡ ಅಪರ ಆಯುಕ್ತಾಲಯ ವಿಭಾಗ ವ್ಯಾಪ್ತಿಯಲ್ಲಿ ಕಡತ ವಿಲೇವಾರಿ ಆದಾಲತ್‍ನ್ನು ತಮ್ಮ ನೇತೃತ್ವದಲ್ಲಿ ನಡೆಸಲಾಗುತ್ತಿದ್ದು, ಅದೇ ಮಾದರಿಯಲ್ಲಿ ಉಳಿದ ಆಯುಕ್ತಾಲಯಗಳೂ ಕ್ರಮ ವಹಿಸಲು ಮುಂದಾಗಬೇಕೆಂದೂ ಸಚಿವರು ಸೂಚಿಸಿದರು.
ಪ್ರಸ್ತುತ ವರ್ಷದ ತರಗತಿ ಆರಂಭವಾಗಿರುವ ಹಿನ್ನೆಲೆ 9 ರಿಂದ 12ನೇ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು 6 ರಿಂದ 9 ರವರೆಗಿನ ಪರಿಷ್ಕೃತ ವಿದ್ಯಾಗಮ ತರಗತಿಗಳಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ವಿವರವನ್ನು ಪರಿಶೀಲಿಸಿ ಶಾಲೆಗಳು ಕೋವಿಡ್ ನಿಯಮಗಳ ಪಾಲಿಸುವ ಕುರಿತು ವಿವರ ಪಡೆದುಕೊಂಡರು.
ಈಗಾಗಲೇ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತಿದ್ದು, ಭೌತಿಕ ತರಗತಿಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತಿದೆ. ತಾತ್ಕಾಲಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿರುವ ಹಿನ್ನೆಲೆ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಪರೀಕ್ಷಾಭಿಮುಖವಾಗಿ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಅಧಿಕೃತ ಪರೀಕ್ಷಾ ವೇಳಾಪಟ್ಟಿಯತ್ತ ಮುಖ ಮಾಡಿದ್ದಾರೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಹಾಗೆಯೇ ಪರೀಕ್ಷೆಗಳ ದಿನಾಂಕ, ಮೌಲ್ಯಮಾಪನ, ಫಲಿತಾಂಶ ಪ್ರಕಟಣೆ ಸೇರಿದಂತೆ ಮುಂದಿನ ಶೈಕ್ಷಣಿಕ ವರ್ಷದ ಆರಂಭ ಕುರಿತಂತೆ ಸುದೀರ್ಘವಾಗಿ ಚರ್ಚೆ ನಡೆಸಿದ ಸಚಿವರು, 10 ಮತ್ತು 12ನೇ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶಗಳನ್ನು ಜೂನ್ ಅಂತ್ಯದೊಳಗೆ ಮತ್ತು ಉಳಿದ ತರಗತಿಗಳ ಪರೀಕ್ಷೆ ಮತ್ತು ಫಲಿತಾಂಶ ಘೊಷಣೆಯನ್ನು ಜೂ. 10ರೊಳಗೆ ಪೂರ್ಣಗೊಳಿಸಿ ಈ ಎಲ್ಲ ಪ್ರಕ್ರಿಯೆ ಮುಗಿದ ತಕ್ಷಣವೇ ಮಂದಿನ ಶೈಕ್ಷಣಿಕ ವರ್ಷದ ತರಗತಿಗಳನ್ನು ಏಕ ಕಾಲಕ್ಕೆ ಆರಂಭಗೊಳಿಸಲಾಗುವುದು ಎಂದು ತಿಳಿಸಿದರು.
ಶಿಕ್ಷಕರ ವರ್ಗಾವಣೆ ಕುರಿತ ಕೆಎಟಿ ತಡೆಯಾಜ್ಞೆ ತೆರವು, ಪಿಯು ಉಪನ್ಯಾಸಕರ ವರ್ಗಾವಣೆ ನಿಯಮ ರೂಪಿಸುತ್ತಿರುವುದರ ಪ್ರಗತಿ, ದಾಖಲಾತಿ ಪ್ರಕ್ರಿಯೆ, ಹೊಸ ಶಾಲೆಗಳಿಗೆ, ತರಗತಿಗಳಿಗೆ ಅನುಮತಿ, ವಿವಿಧ ಸಂಗತಿಗಳ ಪ್ರಕ್ರಿಯೆಗಳಲ್ಲಿನ ನಿಯಮ ಸರಳೀಕರಣ, ಪರಿಶೀಲನಾ ಹಂತಗಳ ಕಡಿತ ಮಾಡುವುದು ಸೇರಿದಂತೆ ಹಲವಾರು ವಿಷಯಗಳ ಕುರಿತು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಆರ್. ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್, ಸಮಗ್ರ ಶಿಕ್ಷಣ-ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕಿ ದೀಪಾಚೋಳನ್ ಸೇರಿದಂತೆ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ಹೊಸ ಸೇರ್ಪಡೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.