Guarantee Schemes: ಪರಿಣಾಮಕಾರಿ ಅನುಷ್ಠಾನ: ಉಸ್ತುವಾರಿ ಕಾರ್ಯದರ್ಶಿ ಅತೀಕ್ ಸೂಚನೆ
Team Udayavani, Oct 17, 2023, 1:11 AM IST
ಮಂಗಳೂರು: ರಾಜ್ಯ ಸರಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪುವಂತೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಲ್.ಕೆ. ಅತೀಕ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗೃಹಲಕ್ಷ್ಮಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಆಗಸ್ಟ್ ವರೆಗೆ 3,15,726 ಹಾಗೂ ಸೆಪ್ಟಂಬರ್ ವರೆಗೆ 3.20 ಲಕ್ಷ ಫಲಾನುಭವಿಗಳಿದ್ದಾರೆ. ಅಕ್ಟೋಬರ್ 15ರ ತನಕ 3.44 ಲಕ್ಷ ಫಲಾನುಭವಿಗಳು ದಾಖಲಾಗಿದ್ದಾರೆ. ಬ್ಯಾಂಕ್ ಖಾತೆಯ ಸಮಸ್ಯೆಗಳಿಂದ 33,419 ಮಂದಿಗೆ ಮೊತ್ತ ಜಮೆ ಆಗಿಲ್ಲ. ಎಲ್ಲ ಸಮಸ್ಯೆಗಳನ್ನು ಬಗೆಹರಿಸಿ, ಫಲಾನುಭವಿಗಳಿಗೆ 2000 ರೂ. ಮೊತ್ತ ಜಮೆ ಆಗಬೇಕು ಎಂದರು.
ಗೃಹಜ್ಯೋತಿ ಯೋಜನೆಯಲ್ಲಿ ಜಿಲ್ಲೆಯಲ್ಲಿ ಶೇ. 94ರಷ್ಟು ಗೃಹ ವಿದ್ಯುತ್ ಬಳಕೆದಾರರು ನೋಂದಾಯಿಸಿದ್ದಾರೆ.ಅರ್ಹ ಬಳಕೆದಾರರಿಗೆ ಶೂನ್ಯ ಬಿಲ್ ಕಳುಹಿಸಲಾಗಿದೆ. ಇದಕ್ಕಾಗಿ ರಾಜ್ಯ ಸರಕಾರದಿಂದ 224 ಕೋಟಿ ರೂ. ಮೊತ್ತ ಮೆಸ್ಕಾಂಗೆ ಬಂದಿದೆ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದರು.
ಆರೋಗ್ಯ ಇಲಾಖೆ ಅಧಿಕಾರಿಗಳು ಗರ್ಭಿಣಿಯರನ್ನು ಗುರುತಿಸಿ, ಸೂಕ್ತ ಆರೋಗ್ಯ ನೆರವು ನೀಡಬೇಕು. ಗರ್ಭಿಣಿಯರಲ್ಲಿ ರಕ್ತದ ಕೊರತೆ ಸಮಸ್ಯೆ ಪ್ರಮುಖವಾಗಿದ್ದು, ಕಬ್ಬಿಣಾಂಶಗಳ ಮಾತ್ರೆ ಸಕಾಲದಲ್ಲಿ ಒದಗಿಸಲು ಆದ್ಯತೆ ನೀಡುವಂತೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ದ.ಕ. ಜಿಲ್ಲೆಯ ಸರಕಾರಿ ಅಸ್ಪತ್ರೆಗಳಲ್ಲಿ 60 ಡಯಾಲಿಸಿಸ್ ಯಂತ್ರಗಳಿವೆ. ಮೂಲ್ಕಿ, ಮೂಡುಬಿದ್ರೆ, ಕಡಬ ಆಸ್ಪತ್ರೆಗಳಲ್ಲಿ ತಲಾ 3 ಡಯಾಲಿಸಿಸ್ ಯಂತ್ರಗಳಿದ್ದರೂ, ಸೂಕ್ತ ಸಿಬಂದಿಗಳಿಲ್ಲದೆ ಕಾರ್ಯಾಚರಿಸುತ್ತಿಲ್ಲ. ಈ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಹಿತಿಯಿತ್ತರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಪ್ರಗತಿ ಮಾಹಿತಿ ನೀಡಿದರು. ಜಿ.ಪಂ. ಸಿಇಒ ಅಧಿಕಾರಿ ಡಾ| ಆನಂದ್ ಕೆ., ಜಿಲ್ಲಾ ಎಸ್‌ಪಿ ರಿಷ್ಯಂತ್, ಮಹಾನಗರಪಾಲಿಕೆ ಆಯುಕ್ತ ಆನಂದ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
RSS: ಮೋಹನ್ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್ ಪತ್ರಿಕೆ ಆಕ್ಷೇಪ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.