ಶಾಸಕರ ಅಮಾನತಿಗೆ ಹಿರಿಯರ ಅಸಮಾಧಾನ
"ಶಾಸಕರ ಅಮಾನತು: ಒಂದು ದಿನದ ಚರ್ಚೆ"ಯಲ್ಲಿ ಮಾಜಿ ಸ್ಪೀಕರ್, ಮಾಜಿ ಸಭಾಪತಿಗಳ ಅಭಿಪ್ರಾಯ
Team Udayavani, Aug 3, 2023, 11:06 PM IST
ಬೆಂಗಳೂರು: ಇತ್ತೀಚೆಗೆ ವಿಧಾನಸಭೆಯ 10 ಶಾಸಕರನ್ನು ಅಮಾನತುಪಡಿಸಿದ ಕ್ರಮಕ್ಕೆ ಮಾಜಿ ಸ್ಪೀಕರ್, ಮಾಜಿ ಸಭಾಪತಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಸ್ಪೀಕರ್ ಯು.ಟಿ. ಖಾದರ್ ಅವರ ನಿರ್ಣಯದ ಹಿಂದೆ ಸಿಎಂ ಸಹಿತ ಹಲವರ ಕೈವಾಡವಿತ್ತು. ಇದು ಸದನದ ರಾಜಕೀಯ ದುರ್ಬಳಕೆಯಷ್ಟೇ ಅಲ್ಲದೆ, ಪ್ರಜಾಪ್ರಭುತ್ವ ವಿರೋಧಿ ನಿಲುವು ಎಂದಿದ್ದಾರೆ.
ಸಿಟಿಜನ್ಸ್ ಫಾರ್ ಡೆಮಾಕ್ರಸಿ ವತಿಯಿಂದ ಗುರುವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿದ್ದ “ಶಾಸಕರ ಅಮಾನತು: ಒಂದು ದಿನದ ಚರ್ಚೆ’ ಕಾರ್ಯಕ್ರಮದಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ ಅನೇಕರು, ಚಿಕ್ಕ ವಿಷಯಕ್ಕೆ ಸ್ಪೀಕರ್ ಕೊಟ್ಟ ಶಿಕ್ಷೆ ಸರಿಯಲ್ಲ. ಇದು ಅಕ್ಷಮ್ಯ ಎಂದು ವಿಶ್ಲೇಷಿಸಿದರು.
ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಚಿಕ್ಕ ವಿಷಯವನ್ನೇ ದೊಡ್ಡದು ಮಾಡಿ ಸ್ಪೀಕರ್ ಮತ್ತು ಸರಕಾರ ಶಾಸಕರನ್ನು ಅಮಾನತು ಮಾಡಿದ್ದು ಅಕ್ಷಮ್ಯ. ಇದರಲ್ಲಿ ಮುಖ್ಯಮಂತ್ರಿ, ಸಂಸದೀಯ ವ್ಯವಹಾರ ಸಚಿವರ ಪ್ರಮುಖ ಪಾತ್ರವೂ ಇದೆ. ಸದನದ ರಾಜಕೀಯ ದುರ್ಬಳಕೆಗೆ ಇದು ಸ್ಪಷ್ಟ ಉದಾಹರಣೆ ಎಂದು ತಿಳಿಸಿದರು.
ಪೇಪರ್ ವೆಯ್ಟ್ ಎಸೆದಾಗಲೇ ಅಮಾನತು ಮಾಡಿರಲಿಲ್ಲ
ಯೋಗೀಶ್ ಭಟ್ ಡೆಪ್ಯುಟಿ ಸ್ಪೀಕರ್ ಆಗಿದ್ದಾಗ ಪೇಪರ್ ವೆಯ್ಟ್ ಅನ್ನೇ ಅವರತ್ತ ಎಸೆದಿದ್ದರು. ಫೈಲುಗಳನ್ನೇ ಕಿತ್ತೆಸೆದಿದ್ದರು. ಆಗಲೂ ಅವರು ಅಮಾನತು ಮಾಡಿರಲಿಲ್ಲ ಎಂದರು.
ಹಿರಿಯ ಸಚಿವರು ವಿಪಕ್ಷದವರಿಗೂ ಮಾತನಾಡಲು ಅವಕಾಶ ಕೊಡಲು ತಿಳಿಸಬೇಕಿತ್ತು. ಉಗುರು ತುದಿಯಲ್ಲಿ ಹೋಗುವುದನ್ನು ಖಡ್ಗ ತೆಗೆದುಕೊಂಡು ಕತ್ತರಿಸುವುದು ಶೋಭೆ ತರುವಂಥದ್ದಲ್ಲ. ಪಶ್ಚಿಮ ಬಂಗಾಲ, ಕೇರಳದಲ್ಲಿ ರಾಜ್ಯಪಾಲರನ್ನು ಸಹಿಸದ, ಅವರನ್ನು ಮಾತನಾಡಲು ಬಿಡದ ಸ್ಥಿತಿ ಇದೆ ಎಂದರು.
ಜೇಬುಕಳ್ಳತನಕ್ಕೆ ಗಲ್ಲು ಶಿಕ್ಷೆಯಂತೆ
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಭಾಪತಿ ಡಿ.ಎಚ್. ಶಂಕರಮೂರ್ತಿ ಮಾತನಾಡಿ, 10 ಶಾಸಕರ ಅಮಾನತು ಮಾಡಿದ್ದು ಹಾಗೂ ಸಭೆಯಿಂದ ಹೊರಕ್ಕೆ ಹಾಕಿದ್ದನ್ನು ನೋಡಿದರೆ, ಜೇಬುಕಳ್ಳನಿಗೆ ಮರಣ ದಂಡನೆ ಕೊಟ್ಟಂತೆ ಎಂದು ವಿಶ್ಲೇಷಿಸಿದರು.
ಈಗಿನ ಮುಖ್ಯಮಂತ್ರಿಗಳ ಬಗ್ಗೆ ಮಾತನಾಡದಿರುವುದೇ ಒಳ್ಳೆಯದು. ವಿಧಾನಸಭೆಯಲ್ಲಿ ಪೈಲ್ವಾನರಂತೆ ತೊಡೆ ತಟ್ಟಿದವರು ಅವರು. ಸಂಸದೀಯ ವ್ಯವಹಾರಗಳ ಸಚಿವರ ನಡೆ ಬೇಸರ ತಂದಿದೆ. ಮುಂದಿನ ಬಾರಿ ವಜಾ ಕೂಡ ಮಾಡಬಹುದೇನೋ ಎಂದರು.
ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ಅಧ್ಯಕ್ಷ ಚಂದ್ರಶೇಖರ್ ಸ್ವಾಗತಿಸಿದರು. ಅಜಯ್ ಹೆಬ್ಟಾರ್ ವಂದಿಸಿದರು.
ಬೇಲಿಯೇ ಎದ್ದು ಹೊಲ ಮೇಯ್ದರೆ?
ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ, ತಪ್ಪನ್ನು ತಪ್ಪೆಂದು ಹೇಳದಿದ್ದರೆ ಈಗಾಗಲೇ ಕೆಟ್ಟು ಹೋದ ವ್ಯವಸ್ಥೆಯಲ್ಲಿ ಸುಧಾರಣೆ ತರುವುದು ಹೇಗೆ? ಕೆಟ್ಟ ವ್ಯವಸ್ಥೆಯ ಸುಧಾರಣೆಯಲ್ಲಿ ನಮ್ಮೆಲ್ಲರ ಜವಾಬ್ದಾರಿ ಪ್ರಮುಖವಾಗಿದೆ. ಸಾಂವಿಧಾನಿಕ ಸಂಸ್ಥೆ, ಅಂಗಗಳಲ್ಲಿ, ಲೋಕಾಯುಕ್ತದಂಥ ಸ್ವಾಯತ್ತ ಸಂಸ್ಥೆಗಳಲ್ಲಿ ಕ್ರಮೇಣ ಕುಸಿತ ಉಂಟಾಗಿದೆ. ಇವತ್ತಿನ ಆಡಳಿತ ವ್ಯವಸ್ಥೆಗೆ ಲಂಗುಲಗಾಮು ಇಲ್ಲವಾಗಿದೆ ಎಂದ ಅವರು, ಚುನಾವಣೆಗಳಲ್ಲಿ ಬೀದಿಬೀದಿಗಳಲ್ಲಿ ಹಣ ಚೆಲ್ಲಿದರೂ ಯಾರಿಗೂ ಶಿಕ್ಷೆ ಆಗುತ್ತಿಲ್ಲ ಎಂದು ವಿಷಾದದಿಂದ ನುಡಿದರು.
ತಪ್ಪುಗಳಾಗುತ್ತವೆ, ಅದನ್ನು ಸರಿಪಡಿಸಲು ನೂರೆಂಟು ವಿಧಾನಗಳಿವೆ. ಅದರ ಕುರಿತು ಯೋಚಿಸಬೇಕೇ ಹೊರತು ಕಾಲಿಗೆ ಮುಳ್ಳು ಚುಚ್ಚಿದೆ ಎಂದು ಕಾಲನ್ನೇ ತುಂಡರಿಸುವ ಪ್ರವೃತ್ತಿ ಸಮರ್ಪಕವಲ್ಲ.
ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸ್ಪೀಕರ್
ಕೊಲೆಯಂತಹ ಘೋರ ಅಪರಾಧ ಮಾಡಿದವನನ್ನೂ ವಿಚಾರಣೆ ಮಾಡಲಾಗುತ್ತದೆ. ಆತನ ಹೇಳಿಕೆಯನ್ನೂ ಪಡೆಯುವ ಅವಕಾಶ ಸಂವಿಧಾನದಲ್ಲಿದೆ. ವಿಧಾನಸಭೆಯಲ್ಲಿ ಅಂಗಿ ಹರಿದುಕೊಂಡಿದ್ದು, ತೊಡೆ ತಟ್ಟಿದ್ದು, ಬಾಗಿಲು ಒದ್ದದ್ದೆಲ್ಲವೂ ಕಾಂಗ್ರೆಸಿಗರಿಗೆ ಮರೆತು ಹೋಗಿದೆ.
ಡಿ.ಎಚ್. ಶಂಕರಮೂರ್ತಿ, ಮಾಜಿ ಸಭಾಪತಿ
ಕ್ಷುಲ್ಲಕ ಕಾರಣಕ್ಕಾಗಿ ಅಮಾನತಿನ ಶಿಕ್ಷೆ ಕೊಡಲಾಗಿದೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ. ಅದು ಸದನ, ಪೀಠಕ್ಕೆ ಗೌರವ ಕೊಡುವುದಿಲ್ಲ. ಬೇಲಿಯೇ ಎದ್ದು ಹೊಲ ಮೇಯ್ದರೆ, ಕಾಪಾಡುವ ದೊರೆಯೇ ಕೊಲೆಗಾರನಾದರೆ ರಕ್ಷಿಸುವವರು ಯಾರು?
ಎ.ಟಿ. ರಾಮಸ್ವಾಮಿ, ಮಾಜಿ ಶಾಸಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.