ಎಲೆರಾಂಪುರ ಗ್ರಾಮ ಸೌಧಕ್ಕೆ ರಾಷ್ಟ್ರ ಜಲ ಪ್ರಶಸ್ತಿ ಕಿರೀಟ


Team Udayavani, Mar 30, 2022, 4:39 PM IST

1-deq

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿ ವ್ಯಾಪ್ತಿಯ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ಕೇಂದ್ರ ಸರ್ಕಾರದ ಉತ್ತಮ ಪಂಚಾಯಿತಿ ಪುರಸ್ಕಾರ ಲಭಿಸಿದೆ.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಲ್ಲೂಕಿನ ಗಡಿ ಭಾಗದ ಡಿ.ನಾಗೇನಹಳ್ಳಿ ಗ್ರಾಮವನ್ನು 2010ರಲ್ಲಿ ಹಿರೇಹಳ್ಳಿ ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಕೇಂದ್ರ ಸರ್ಕಾರದ ನಿಕ್ರಾ ಯೋಜನೆಯಡಿ ಅಂತರ್ಜಲ ವೃದ್ಧಿಗೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿತ್ತು. ಇದರ ಫಲವಾಗಿ ಈ ಭಾಗದಲ್ಲಿ ಅಂತರ್ಜಲ ಮಟ್ಟ ವೃದ್ಧಿಗೊಂಡ ಕಾರಣದಿಂದಾಗಿ ಗ್ರಾಮಕ್ಕೆ ‘ರಾಷ್ಟ್ರೀಯ ನೀರು ಅಭಿವೃದ್ಧಿ ಪ್ರಶಸ್ತಿ ಲಭಿಸಿದೆ.

ಗ್ರಾಮದ ಸುಮಾರು 400 ಹೆಕ್ಟೇರ್ ಭೂ ಪ್ರದೇಶದಲ್ಲಿ 85 ಕೃಷಿ ಹೊಂಡ, 5 ಚೆಕ್ ಡ್ಯಾಂ, 8 ಹಳೇ ಚೆಕ್ ಡ್ಯಾಂ ಅಭಿವೃದ್ಧಿ ಸೇರಿದಂತೆ ಕೆರೆ ಅಭಿವೃದ್ಧಿ ಹಾಗೂ ತಿರುವುಗಾಲುವೆ ಮೂಲಕ ನೀರು ಸಂಗ್ರಹಣೆ ಮಾಡಲಾಗಿದೆ. ಬರ ನಿರೋಧಕ ಒಣಬೇಸಾಯ, ತೋಟಗಾರಿಕೆಗೆ ಒತ್ತು ನೀಡಲಾಗಿದೆ.

ರಾಗಿ, ಒಣ ಭತ್ತ, ತೊಗರಿ ಹೀಗೆ ಕಡಿಮೆ ನೀರು ಬಳಸಿ ಬೆಳೆಯುವ ಬೆಳೆಗಳಿಗೆ ಉತ್ತೇಜನ ನೀಡಲಾಗಿದೆ. ಬೆಟ್ಟದ ನೆಲ್ಲಿ, ಗೋಡಂಬಿ, ಹುಣಸೆ, ಮಾವು, ಹೆಬ್ಬೇವು ಸೇರಿದಂತೆ ಅರಣ್ಯ ಮರಗಳನ್ನು ಬೆಳೆಸಲಾಗಿದೆ. ನೀರಿನ ಮೂಲ ಹೆಚ್ಚಿರುವ ಕಾರಣ ಪ್ರಾಣಿ, ಪಕ್ಷಿ, ಜನುವಾರುಗಳಿಗೆ ಆಶ್ರಯ ಕಲ್ಪಿಸಲಾಗಿದೆ. ಮಣ್ಣಿನ ಸವಕಳಿ ಹಾಗೂ ಮಳೆ ನೀರು ಇಂಗಿಸುವ ಸಲುವಾಗಿ ಗ್ರಾಮದ ಸುತ್ತಲಿನ ಜಮೀನುಗಳಲ್ಲಿ ಬದುಗಳನ್ನು ಹಾಕಲಾಗಿದೆ. 10 ವರ್ಷಗಳಿಂದ ನಿಕ್ರಾ ಯೋಜನೆಯಡಿ ಕೈಗೊಂಡಿರುವ ವಿವಿಧ ಕಾಮಗಾರಿಗಳಿಂದಾಗಿ ಅಂತರ್ಜಲ ವೃದ್ಧಿಯಾಗಿ ಈ ಭಾಗದಲ್ಲಿದ್ದ ನೀರಿನ ಬವಣೆ ನೀಗಿದೆ. ಸಂಪೂರ್ಣ ನಿಷ್ಕ್ರಿಯಗೊಂಡಿದ್ದ ಸುಮಾರು 25 ಕೊಳವೆಬಾವಿಗಳು ಮರು ಪೂರಣಗೊಂಡಿವೆ.

ಒಣಗಿದ್ದ ಬಾವಿಗಳಲ್ಲಿ ನೀರು ನಿಂತಿದೆ. ಸಂಪೂರ್ಣ ಬೆಟ್ಟ ಹಾಗೂ ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಈ ಮೊದಲು ಮಳೆ ನೀರು ವ್ಯರ್ಥವಾಗುತಿತ್ತು. ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ.ನಾಗೇನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿತ್ತು.

ನಿಕ್ರಾ ಯೋಜನೆಯಡಿ ಆಯ್ಕೆ
ದೇಶದಲ್ಲಿ ಇದೇ ರೀತಿ ನಿಕ್ರಾ ಯೋಜನೆಯಡಿ 100 ಹಳ್ಳಿಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಅದರಂತೆ ರಾಜ್ಯದಲ್ಲಿ 4 ಹಳ್ಳಿಗಳನ್ನು ಆಯ್ಕೆ ಮಾಡಲಾಗಿದೆ. ಕಳೆದ 11 ವರ್ಷಗಳಿಂದ ಗ್ರಾಮದಲ್ಲಿ ಯೋಜನೆ ಅನುಷ್ಠಾನಗೊಂಡು ಈಗ ಅದು ಸಫಲವಾದ್ದರಿಂದ ಮಾದರಿ ಗ್ರಾಮವಾಗಿ
ಹೊರಹೊಮ್ಮಿದೆ.

ರಾಷ್ಟ್ರಪತಿ ಪ್ರಶಸ್ತಿ ಪ್ರದಾನ
ತಾಲೂಕಿನ ಎಲೆರಾಂಪುರ ಗ್ರಾಮ ಪಂಚಾಯಿತಿಗೆ ರಾಷ್ಟ್ರಮಟ್ಟದ ನೀರು ಸದ್ಬಳಕೆ ಮತ್ತು ಉಳಿತಾಯದ ಪ್ರಶಸ್ತಿಗೆ ಗರಿ ಮುಡಿಗೇರಿಸಿಕೊಂಡ ಹೆಗ್ಗಳಿಕೆಗೆ ಪಾತ್ರವಾಗಿದೆ ಮೂರನೇ ರಾಷ್ಟ್ರೀಯ ಜಲ ಪ್ರಶಸ್ತಿಯನ್ನು ರಾಷ್ಟ್ರಪತಿಗಳು ಪ್ರಧಾನ ಮಾಡಿದರು ಅಧ್ಯಕ್ಷರು ಉಪಾಧ್ಯಕ್ಷರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರದ ಅಧಿಕಾರಿಗಳೊಂದಿಗೆ ಪ್ರಶಸ್ತಿ ಸ್ವೀಕರಿಸಿದರು.

ಕೊಳವೆ ಬಾವಿ ಮರುಪೂರ್ಣ ಸಂಪೂರ್ಣ ನಿಷ್ಕ್ರಿಯಗೊಂಡಿದೆ ಸುಮಾರು 25 ಕೊಳವೆಬಾವಿಗಳು ಪೂರ್ಣಗೊಂಡಿವೆ ಒಣಗಿದ ಬಾವಿಗಳ ನೀರು ನಿಂತಿದೆ ಸಂಪೂರ್ಣವಾದ ಬೆಟ್ಟ-ಗುಡ್ಡ ಪ್ರದೇಶವಾದ ಈ ಭಾಗದಲ್ಲಿ ಮೊದಲು ಮಳೆನೀರು ವ್ಯರ್ಥವಾಗುತ್ತಿತ್ತು ಇದನ್ನು ಮನಗಂಡ ಕೃಷಿ ವಿಜ್ಞಾನ ಕೇಂದ್ರ ಡಿ ನಾಗೇನಹಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿತು.

ನಿಕ್ರಾ ಯೋಜನೆಯಡಿ ಗಡಿಗ್ರಾಮ ಡಿ ನಾಗೇನಹಳ್ಳಿ ಸೇರಿದಂತೆ ಮೂರು ಗ್ರಾಮಗಳನ್ನು ಆಯ್ಕೆ ಮಾಡಲಾಗಿತ್ತು ನಾಲಾಬದು ಕೃಷಿಹೊಂಡ ಸೇರಿದಂತೆ ಮಳೆ ನೀರು ಸಂಗ್ರಹಕ್ಕೆ ಅನುಕೂಲವಾಗುವ ಕಾಮಗಾರಿಗಳನ್ನು ಸತತ 11 ವರ್ಷಗಳ ಕಾಲ ಅವಿರತ ಪರಿಶ್ರಮದಿಂದ ಅನುಷ್ಠಾನಗೊಳಿಸಿದ ಪರಿಣಾಮ ಇಂದು ರಾಷ್ಟ್ರಪ್ರಶಸ್ತಿ ಸಿಗಲು ಕಾರಣವಾಗಿದೆ ಅತ್ಯಂತ ಸಂತೋಷವಾಗಿದೆ. 

-ದೊಡ್ಡ ಸಿದ್ದಯ್ಯ ತಾ ಪಂ. ಕಾರ್ಯನಿರ್ವಹಣಾಧಿಕಾರಿ.

ಸಿದ್ದರಾಜು.ಕೆ

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

Arrested: ಹೊಸ ವರ್ಷಾಚರಣೆಗೆ ಮಾದಕ ವಸ್ತು ಮಾರುತ್ತಿದ್ದ 11 ಮಂದಿ ಸೆರೆ

robin

EPF ನಿಧಿ ವಂಚನೆ: ರಾಬಿನ್‌ ಉತಪ್ಪ ವಿರುದ್ದದ ವಾರಂಟ್‌ಗೆ ಹೈಕೋರ್ಟ್‌ ತಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.