ಚುನಾವಣೆ ಹಿನ್ನೆಲೆ: 47 ಸಾವಿರ ರೌಡಿಗಳ ಮೇಲೆ ಪೊಲೀಸರ ಕಣ್ಣು !

ಪದೇಪದೇ ಅಪರಾಧಗಳಲ್ಲಿ ಭಾಗಿಯಾದ ರೌಡಿಗಳ ಬಂಧನ

Team Udayavani, Feb 19, 2023, 7:50 AM IST

ಚುನಾವಣೆ ಹಿನ್ನೆಲೆ: 47 ಸಾವಿರ ರೌಡಿಗಳ ಮೇಲೆ ಪೊಲೀಸರ ಕಣ್ಣು !

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿರುವ 47,001 ರೌಡಿಶೀಟರ್‌ಗಳ ಮೇಲೂ ಖಾಕಿ ಹದ್ದಿನ ಕಣ್ಣಿಟ್ಟಿದೆ. ಹಳೇ ಚಾಳಿ ಮುಂದುವರಿಸುತ್ತಿರುವ ರೌಡಿಗಳ ಹೆಡೆಮುರಿ ಕಟ್ಟಲು ಕಾರ್ಯಾಚರಣೆ ಶುರು ಹಚ್ಚಿಕೊಂಡಿದೆ.

ವಿಧಾನಸಭೆ ಚುನಾವಣೆ ರಂಗೇರಲು ಕೆಲ ತಿಂಗಳುಗಳಷ್ಟೇ ಬಾಕಿಯಿದ್ದು, ಅಲ್ಲಲ್ಲಿ ಸದ್ದಿಲ್ಲದೇ ರೌಡಿ ಚಟುವಟಿಕೆಗಳು ನಡೆಯುವ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಸರ್ಕಾರವು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಪೊಲೀಸ್‌ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದೆ.

ಈ ನಿಟ್ಟಿನಲ್ಲಿ ಫ‌ುಲ್‌ ಅಲರ್ಟ್‌ ಆಗಿರುವ ರಾಜ್ಯ ಖಾಕಿ ಪಡೆ ಕರ್ನಾಟಕದಲ್ಲಿರುವ 47,001 ರೌಡಿಗಳ ಮೇಲೂ ನಿಗಾ ಇಟ್ಟಿದೆ. ಪದೇಪದೆ ಹಳೇ ಚಾಳಿ ಮುಂದುವರಿಸುತ್ತಿರುವ ರೌಡಿಗಳ ಪಟ್ಟಿ ಸಿದ್ಧಪಡಿಸಲಾಗಿದ್ದು ಶೀಘ್ರದಲ್ಲಿ ಒಬ್ಬೊಬ್ಬರನ್ನೇ ಬಂಧಿಸುವ ಕಾರ್ಯ ನಡೆಯಲಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ರೌಡಿಗಳ ಮೇಲೆ ನಿಗಾ ಏಕೆ ?
ಇದು ಚುನಾವಣೆ ವರ್ಷವಾಗಿದ್ದು, ರೌಡಿಗಳಿಂದ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕೆಲವು ಗಣ್ಯರ ಜೀವಕ್ಕೆ ಸಂಚಕಾರ ಬರುವ ಸಾಧ್ಯತೆಗಳಿವೆ. ರಾಜ್ಯದಲ್ಲಿ ಅಹಿತಕರ ಘಟನೆ ನಡೆದರೆ ಸರ್ಕಾರಕ್ಕೆ ಕೆಟ್ಟ ಹೆಸರು ಬರುತ್ತದೆ. ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲೂ ಶಾಂತಿ, ಸುವ್ಯವಸ್ಥೆಗೆ ಧಕ್ಕೆ ಬರುತ್ತದೆ. ರೌಡಿಗಳು ಬಾಲ ಬಿಚ್ಚಿದರೆ ರಾಜ್ಯದ ಘನತೆಗೆ ಕುಂದುಂಟಾಗಲಿದೆ.

ಹೀಗಾಗಿ ರೌಡಿಗಳ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ. ರಾಜ್ಯದ ಬಹುತೇಕ ಪೊಲೀಸ್‌ ಠಾಣೆಗಳಲ್ಲಿ ಪದೇಪದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವವರು ಹಾಗೂ ಹಿಂದಿನ ಚುನಾವಣೆ ವೇಳೆ ಅಪರಾಧಗಳಲ್ಲಿ ಭಾಗಿಯಾದ ರೌಡಿಗಳನ್ನು ಜೈಲಿಗಟ್ಟಲಾಗಿದೆ. ಇತ್ತೀಚೆಗೆ ಬಾಂಡ್‌ ಉಲ್ಲಂ ಸಿ ಮತ್ತೆ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ 35 ರೌಡಿಶೀಟರ್‌ಗಳನ್ನು ಬೆಂಗಳೂರಿನ ಪೂರ್ವ ವಿಭಾಗದ ಪೊಲೀಸರು ಜೈಲಿಗಟ್ಟಿರುವುದು ಮೇಲಿನ ಅಂಶಗಳಿಗೆ ಪುಷ್ಠಿ ನೀಡುತ್ತದೆ.

ಯಾವೆಲ್ಲಾ ಕ್ರಮ ಕೈಗೊಳ್ಳಲಾಗುತ್ತದೆ ?
ಚುನಾವಣೆ ವೇಳೆ ಬಂಧನಕ್ಕೊಳಗಾದ ರೌಡಿಗಳನ್ನು ನಿರ್ದಿಷ್ಟ ಸಮಯದವರೆಗೆ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿಡಬಹುದು. ರಾಜ್ಯದಿಂದಲೇ ಗಡಿಪಾರು ಮಾಡುವುದು, ಗೂಂಡಾ ಕಾಯ್ದೆ ಅನ್ವಯ ಕ್ರಮ ಜರುಗಿಸಬಹುದು. ಕೆಲವೊಮ್ಮೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲಾಗುತ್ತದೆ.

ರೌಡಿಗಳ ದೈನಂದಿನ ಚಟುವಟಿಕೆಗಳ ಬಗ್ಗೆ ಪೊಲೀಸರು ಗಮನ ಹರಿಸುತ್ತಿದ್ದಾರೆ. ಇವರ ಸಂಪರ್ಕದಲ್ಲಿರುವವರ ಮೇಲೆ ಕಣ್ಣಿಡಲಾಗುತ್ತದೆ. ಮೊಬೈಲ್‌ ಟ್ರ್ಯಾಕ್ ಮಾಡುವ ಮೂಲಕ ಸಂಚು ರೂಪಿಸುವುದನ್ನು ಪತ್ತೆಹಚ್ಚಲಾಗುತ್ತದೆ. ಬೀಟ್‌ ಪೊಲೀಸರು ಆಗಾಗ ರೌಡಿಗಳ ಮನೆ ಹಾಗೂ ಮನೆ ಸಮೀಪದ ಸಿಸಿ ಕ್ಯಾಮರಾ ದೃಶ್ಯಗಳನ್ನು ಪರಿಶೀಲಿಸುತ್ತಾರೆ.

2023ರಲ್ಲೇ ಅತೀ ಹೆಚ್ಚು ರೌಡಿಗಳು ಪಟ್ಟಿಯಿಂದ ಹೊರಕ್ಕೆ:
2023ರ ಜನವರಿ ತಿಂಗಳಲ್ಲಿ ಅತೀ ಹೆಚ್ಚು 7,361 ರೌಡಿಶೀಟರ್‌ಗಳನ್ನು ರೌಡಿಪಟ್ಟಿಯಿಂದ ಕೈಬಿಡಲಾಗಿದೆ. ಮಂಗಳೂರಿನಲ್ಲಿ 781, ಉಡುಪಿ 292, ಮಂಡ್ಯ 610 , ಬೆಂಗಳೂರಿನಲ್ಲಿ 371 ರೌಡಿಗಳು ಪಟ್ಟಿಯಿಂದ ಹೊರ ಬಿದ್ದಿದ್ದಾರೆ. ಆದರೆ, ಇದೇ ಅವಧಿಯಲ್ಲಿ 186 ರೌಡಿಗಳು ಹೊಸ ರೌಡಿಶೀಟರ್‌ ಪಟ್ಟಿಗೆ ಸೇರ್ಪಡೆಗೊಂಡಿದ್ದಾರೆ. 2019ರಲ್ಲಿ 2,259, 2020ರಲ್ಲಿ 3,175, 2021ರಲ್ಲಿ 2,569 ಹಾಗೂ 2022ರಲ್ಲಿ 2,389 ಆರೋಪಿಗಳನ್ನು ರೌಡಿಪಟ್ಟಿಗೆ ಸೇರಿಸಲಾಗಿದೆ. 2018ರಲ್ಲಿ 3,489, 2019ರಲ್ಲಿ 2,195, 2020 ರಲ್ಲಿ 1,718, 2021ರಲ್ಲಿ 8062, 2022ರಲ್ಲಿ 3,314 ಮಂದಿ ರೌಡಿಶೀಟರ್‌ ಕಳಂಕದಿಂದ ಮುಕ್ತಿ ಹೊಂದಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿರುವ ರೌಡಿಗಳ ಸಂಖ್ಯೆ:
ಘಟಕ- ರೌಡಿಶೀಟರ್‌ಗಳ ಸಂಖ್ಯೆ
ಬೆಂಗಳೂರು ನಗರ-7,525
ಬೆಂಗಳೂರು ಜಿಲ್ಲೆ-1,701
ಹುಬ್ಬಳಿ-ಧಾರವಾಡ-2,888
ಕಲಬುರಗಿ ಜಿಲ್ಲೆ-2,196
ಮಂಗಳೂರು ನಗರ-1,526
ದ.ಕನ್ನಡ ಜಿಲ್ಲೆ -1,158
ಉಡುಪಿ ಜಿಲ್ಲೆ-1,154
ರಾಯಚೂರು ಜಿಲ್ಲೆ-1,750
ದಾವಣಗೆರೆ ಜಿಲ್ಲೆ-1,175
ವಿಜಯಪುರ ಜಿಲ್ಲೆ-1,239

ಚುನಾವಣೆ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಪ್ರಕರಣ ಸಂಭವಿಸದಂತೆ ಕೆಲ ರೌಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ಒಂದು ತಿಂಗಳಲ್ಲಿ ಬೆಂಗಳೂರಿನ ಪೂರ್ವ ವಿಭಾಗದ ಠಾಣಾ ವ್ಯಾಪ್ತಿಯಲ್ಲಿ 16ಕ್ಕೂ ಹೆಚ್ಚಿನ ರೌಡಿಗಳ ಬಂಧನವಾಗಿದೆ.
– ಡಾ.ಭೀಮಾ ಶಂಕರ್‌ ಗುಳೆದ್‌, ಡಿಸಿಪಿ, ಪೂರ್ವ ವಿಭಾಗ.

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

6-siruguppa

Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.