ಚುನಾವಣಾ ಆಯೋಗ ಬಿಜೆಪಿ ಏಜೆಂಟ್‌: ದಿನೇಶ್‌ ಆರೋಪ

Team Udayavani, Sep 27, 2019, 8:00 PM IST

Dinesh-Gundurao-545-A

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗ ಅನರ್ಹಗೊಂಡ ಶಾಸಕರ ಪ್ರಕರಣದಲ್ಲಿ ಬಿಜೆಪಿ ಏಜೆಂಟ್‌ ರೀತಿ ವರ್ತಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಗಂಭೀರ ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಅನರ್ಹಗೊಂಡ ಶಾಸಕರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ನಿಂದ ಯಾವುದೇ ನೋಟಿಸ್‌ ಇಲ್ಲದಿದ್ದರೂ ಸ್ವಯಂಪ್ರೇರಿತವಾಗಿ ತಮ್ಮ ವಕೀಲರ ಮೂಲಕ ಹೇಳಿಕೆ ನೀಡಿ, ಯಾವುದೇ ಕಾರಣಕ್ಕೂ ಚುನಾವಣೆ ನಿಲ್ಲಿಸಲು ಆಗುವುದಿಲ್ಲ. ಅನರ್ಹರು ಚುನಾವಣೆ ಸ್ಪರ್ಧೆಗೆ ತಮ್ಮ ಆಕ್ಷೇಪವಿಲ್ಲ ಎಂದು ಹೇಳಿದ್ದರು. ಆದರೆ ಅದೇ ವಕೀಲರು ಅನರ್ಹರ ಪ್ರಕರಣ ಮುಕ್ತಾಯವಾಗುವವರೆಗೂ ಚುನಾವಣೆ ಮುಂದೂಡುತ್ತೇವೆ ಎಂದು ಹೇಳುತ್ತಾರೆ. ಇದನ್ನು ಗಮನಿಸಿದಾಗ ಆಯೋಗ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿರುವ ಅನುಮಾನ ಮೂಡುತ್ತಿದೆ ಎಂದು ಹೇಳಿದರು.

ಸಂವಿಧಾನದ 150 ಕಲಂ ಪ್ರಕಾರ ಉಪ ಚುನಾವಣೆ ಘೋಷಣೆ ಮಾಡಲಾಗುತ್ತದೆ. ಅನಂತರ ಚುನಾವಣೆ ಮುಂದೂಡಲು ಆಯೋಗ ರಾಷ್ಟ್ರಪತಿ ಒಪ್ಪಿಗೆ ಪಡೆದುಕೊಳ್ಳಬೇಕು. ಅನಗತ್ಯವಾಗಿ ಚುನಾವಣೆ ಮುಂದೂಡಲು ಅವಕಾಶವಿಲ್ಲ. ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಗಲಾಟೆ, ದಂಗೆ, ಪ್ರಕೃತಿ ವಿಕೋಪ, ಕಾನೂನು ಸುವ್ಯವಸ್ಥೆ ಹಾಳಾಗಿದ್ದರೆ, ರಾಷ್ಟ್ರೀಯ ತುರ್ತು ಪರಿಸ್ಥಿತಿ ಉಂಟಾದಾಗ ಮಾತ್ರ ಚುನಾವಣೆ ಮುಂದೂಡಲು ಅವಕಾಶ ಇದೆ. ಆದರೆ ಸದ್ಯ ಅಂಥ ಯಾವುದೇ ಪರಿಸ್ಥಿತಿಯಿಲ್ಲ. ಚುನಾವಣ ಆಯೋಗ ಕೂಡ ಯಾವುದೇ ಸ್ಪಷ್ಟ ಕಾರಣವನ್ನೂ ನೀಡದೇ ನೇರವಾಗಿ ಸುಪ್ರೀಂ ಕೋರ್ಟ್‌ ಮುಂದೆ ಚುನಾವಣೆ ಮುಂದೂಡುವುದಾಗಿ ಹೇಳಿದೆ. ಇದರ ಹಿಂದೆ ಯಾರದೋ ಒತ್ತಡ ಇದೆ ಎನ್ನುವುದು ಸಾಮಾನ್ಯ ಜನರಿಗೂ ಗೊತ್ತಾಗುತ್ತದೆ ಎಂದರು.

ಸ್ಪೀಕರ್‌ ಆಗಿದ್ದ ರಮೇಶ್‌ ಕುಮಾರ್‌ ಅವರ ಆದೇಶವನ್ನು ಸುಪ್ರೀಂ ಕೋರ್ಟ್‌ ರದ್ದು ಮಾಡಿಲ್ಲ. ಅಲ್ಲದೇ ಶಾಸಕರ ಅನರ್ಹತೆ ಕುರಿತು ಯಾವುದೇ ಆದೇಶ ನೀಡಿಲ್ಲ. ಚುನಾವಣೆ ಮುಂದೂಡಲು ಆಯೋಗಕ್ಕೆ ರಾಷ್ಟ್ರಪತಿ ಒಪ್ಪಿಗೆಯನ್ನೂ ನೀಡಿಲ್ಲ. ಆಯೋಗ ಅದ್ಯಾವುದನ್ನೂ ಪರಿಗಣಿಸದೇ ಚುನಾವಣೆ ಮುಂದೂಡುವ ನಿರ್ಧಾರ ತೆಗೆದುಕೊಂಡಿರುವುದು ಬಿಜೆಪಿ ಜತೆಗೆ ಹೊಂದಾಣಿಕೆ ಮಾಡಿಕೊಂಡಿದೆ ಎನ್ನುವುದರ ಸಂಕೇತ ಎಂದು ಆರೋಪಿಸಿದರು.

ದೇಶದಲ್ಲಿ ಎಲ್ಲ ಸ್ವಾಯತ್ತ ಸಂಸ್ಥೆಗಳು ಕೇಂದ್ರ ಸರಕಾರದೊಂದಿಗೆ ಹೊಂದಾಣಿಕೆ ಮಾಡಿಕೊಂಡು ಕೆಲಸ ಮಾಡುತ್ತಿವೆ. ಇಸಿ, ಇಡಿ, ಸಿಬಿಐ, ಆರ್‌ಬಿಐ, ಪ್ರಸ್‌ ಕೌನ್ಸಿಲ್‌ ಆಫ್ ಇಂಡಿಯಾ ಎಲ್ಲವೂ ಕೇಂದ್ರ ಸರಕಾರದ ಜತೆ ಹೊಂದಾಣಿಕೆ ಮಾಡಿಕೊಂಡಿವೆ. ಸ್ವಾಯತ್ತ ಸಂಸ್ಥೆಗಳು ಈ ರೀತಿ ಒಂದು ರಾಜಕೀಯ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಂಡರೆ ಹೇಗೆ ಕೆಲಸ ಮಾಡುವುದು ಎಂದು ಪ್ರಶ್ನಿಸಿದರು.

ಕೇಂದ್ರ ಚುನಾವಣಾ ಆಯೋಗದ ನಡವಳಿಕೆ ನೋಡಿದರೆ ನಾಚಿಕೆಯಾಗುತ್ತದೆ. ಅದರ ವಿರುದ್ಧ ಕಾನೂನಾತ್ಮಕ ಹೋರಾಟ ಮಾಡುತ್ತೇವೆ. ಕಾಂಗ್ರೆಸ್‌ ಉಪ ಚುನಾವಣೆಗೆ ಸಿದ್ದವಿದೆ. ರಮೇಶ್‌ ಕುಮಾರ್‌ ಆದೇಶ ಮತ್ತು ಕಾಂಗ್ರೆಸ್‌ ಪರ ಮಾಡಿರುವ ವಕೀಲರ ವಾದವನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿದೆ. ಅದೇ ಕಾರಣಕ್ಕೆ ತತ್‌ಕ್ಷಣಕ್ಕೆ ತಡೆಯಾಜ್ಞೆ ನೀಡದೆ ವಿಸ್ತೃತ ಚರ್ಚೆ ನಡೆಸುವ ಇಂಗಿತ ವ್ಯಕ್ತಪಡಿಸಿದೆ. ಅನರ್ಹರಿಗೆ ಚುನಾವಣೆಗೆ ಸ್ಪರ್ಧಿಸುವ ಅವಕಾಶ ಸಿಗದಂಥ ಆದೇಶವನ್ನು ಸುಪ್ರೀಂ ಕೋರ್ಟ್‌ ನೀಡುತ್ತದೆ ಎನ್ನುವ ವಿಶ್ವಾಸ ಇದೆ ಎಂದು ದಿನೇಶ್‌ ಗುಂಡೂರಾವ್‌ ಹೇಳಿದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

sirsi

Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ

JPC misused for drama in by-election: HK Patil

Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.