Election: ಒಕ್ಕಲಿಗ ಸಂಘದ ಚುನಾವಣೆ; ಡಿ.ಕೆ.ಶಿವಕುಮಾರ್ ಬಣ ಮೇಲುಗೈ
ಮತ್ತೆ ಅಧಿಕಾರ ಹಿಡಿದ ಬಿ. ಕೆಂಚಪ್ಪಗೌಡ; ಎಚ್‌ಡಿಕೆ ಬಣಕ್ಕೆ ಹಿನ್ನಡೆ
Team Udayavani, Dec 16, 2024, 7:10 AM IST
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದಲ್ಲಿ ಬಣ ರಾಜಕೀಯ ಜೋರಾಗಿದ್ದು ರವಿವಾರ ನಡೆದ ಸಂಘದ ಚುನಾವಣೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬಣ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದೆ. ಈ ಮೂಲಕ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಬಣಕ್ಕೆ ಸೋಲಾಗಿದೆ.
ಮುಂದಿನ 24 ತಿಂಗಳಿಗೆ ರಾಜ್ಯ ಒಕ್ಕಲಿಗ ಸಂಘದ ಅಧ್ಯಕ್ಷರಾಗಿ ಡಿ.ಕೆ.ಶಿ. ಬೆಂಬಲಿತ ಬಣದ ಬಿ. ಕೆಂಚಪ್ಪಗೌಡ ಕಾರ್ಯ ನಿರ್ವಹಿಸಲಿದ್ದಾರೆ. ಎಚ್.ಡಿ.ಕೆ. ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಡಾ| ಅಂಜಿನಪ್ಪ ಅವರು ಕೆಂಚಪ್ಪ ಗೌಡ ಅವರ ವಿರುದ್ಧ ಸೋಲನುಭವಿಸಿದರು.
ಎಲ್. ಶ್ರೀನಿವಾಸ್, ಡಾ| ರೇಣುಕಾಪ್ರಸಾದ್ ಕೆ.ವಿ. ಉಪಾಧ್ಯಕ್ಷರಾಗಿ, ಟಿ. ಕೋನಪ್ಪ ರೆಡ್ಡಿ ಪ್ರಧಾನ ಕಾರ್ಯದರ್ಶಿಯಾಗಿ ಆರ್. ಹನುಮಂತರಾಯಪ್ಪ ಸಹಾಯಕ ಕಾರ್ಯದರ್ಶಿಯಾಗಿ ಮತ್ತು ಎನ್. ಬಾಲಕೃಷ್ಣ (ನೆಲ್ಲಿಗೆರೆ ಬಾಲು) ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ.
3 ವರ್ಷದಲ್ಲಿ ಐವರು ಅಧ್ಯಕ್ಷರು!
ವಿಶೇಷ ಅಂದರೆ 3 ವರ್ಷಗಳ ಆಡಳಿತ ಅವಧಿಯಲ್ಲಿ ಸಂಘ 5 ಅಧ್ಯಕ್ಷರನ್ನು ಕಂಡಿದೆ. ಆರಂಭದಲ್ಲಿ ಬಿ. ಕೆಂಚಪ್ಪ ಗೌಡ ಅಧ್ಯಕ್ಷರಾಗಿದ್ದರು. ಅನಂತರ ಅವರನ್ನು ಕೆಳಗಿಸಿ ಜೆಡಿಎಸ್ ಶಾಸಕ ಸಿ.ಎನ್. ಬಾಲಕೃಷ್ಣ ಅಧ್ಯಕ್ಷರಾದರು. ಇದಾದ ಅನಂತರ ನಡೆದ ಬೆಳವಣಿಗೆಯಲ್ಲಿ ಬಾಲಕೃಷ್ಣ ಅವರನ್ನು ಕೆಳಗಿಳಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಣದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾ ಪಂಚಾಯತ್‌ನ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಡಿ. ಹನುಮಂತಯ್ಯ ಅವರು ಸಂಘದ ಅಧ್ಯಕ್ಷರಾಗಿ ಅವಿರೋಧ ಆಯ್ಕೆ ಆಗಿದ್ದರು. ಕೊನೆಯಲ್ಲಿ ನಡೆದ ಬಣರಾಜಕೀಯದಲ್ಲಿ ಜೆಡಿಎಸ್‌ನ ಸಿ.ಎನ್. ಬಾಲಕೃಷ್ಣ ಮತ್ತೆ ಅಧ್ಯಕ್ಷರಾಗಿ ಅಧಿಕಾರ ಚುಕ್ಕಾಣಿ ಹಿಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಸಿಎಂ ಸಿದ್ದು ಮುಡಾ ಹಗರಣ… ಜ.27ಕ್ಕೆ ಮುಂದೂಡಿದ ಧಾರವಾಡ ಹೈಕೋರ್ಟ್
ಮೀಟರ್ ಬಡ್ಡಿ ದಂಧೆಗೆ ಮನನೊಂದು ವಿಎಸ್‌ಕೆ ವಿವಿ ಅಟೆಂಡರ್ ಆತ್ಮಹತ್ಯೆ… ಪೊಲೀಸರಿಂದ ತನಿಖೆ
Cast Census: ಜಾತಿಗಣತಿ ವರದಿ ಚರ್ಚೆಯ ಈಗಿನ ವಿಚಾರ, ಅಂಕಿ-ಅಂಶಗಳೆಲ್ಲ ಊಹಾಪೋಹವಷ್ಟೇ: ಸಿಎಂ
Lakshmi Hebbalkar ಕಾರು ಅಪಘಾ*ತ ಹಿಟ್ & ರನ್ ಪ್ರಕರಣ: ಬೆಳಗಾವಿ ಎಸ್ ಪಿ
Belagavi: ಇಬ್ಬರು ಅಪ್ರಾಪ್ತೆಯರ ಮೇಲೆ ಸಾಮೂಹಿಕ ಅತ್ಯಾಚಾ*ರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.