ಸಂಶೋಧನೆ, ಅಭಿವೃದ್ಧಿಗೆ ಒತ್ತು: NRFಗೆ 50,000 ಕೋ. ರೂ.
Team Udayavani, Feb 2, 2021, 1:00 AM IST
ಮುಂಬರುವ ಸಾಲಿನ ಕೇಂದ್ರ ಮುಂಗಡಪತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಭಾರತದ ಪರಿಸರ ವ್ಯವಸ್ಥೆಗೆ ಹೊಂದುವಂತಹ ಸಂಶೋಧನೆ ಮತ್ತು ನಾವೀನ್ಯ ತಂತ್ರಜ್ಞಾನ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು.
“ನಾವೀನ್ಯತೆ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ’ಯು 2021-22ನೇ ಸಾಲಿನ ಮುಂಗಡ ಪತ್ರದ ಆರು ಆಧಾರಸ್ತಂಭಗಳಲ್ಲಿ ಒಂದಾಗಿದೆ ಎಂದವರು ಹೇಳಿದರು. 2019ರ ಜುಲೈನಲ್ಲಿ ಸಂಸತ್‌ನಲ್ಲಿ ಮಂಡಿಸಲಾಗಿದ್ದ ಬಜೆಟ್‌ನಲ್ಲಿ ಘೋಷಿಸಲಾಗಿದ್ದ ರಾಷ್ಟ್ರೀಯ ಸಂಶೋಧನ ಪ್ರತಿಷ್ಠಾನ(ಎನ್‌ಆರ್‌ಎಫ್)ದ ಕಾರ್ಯವಿಧಾನವನ್ನು ಅಂತಿಮಗೊಳಿಸಲಾಗಿದೆ. ಎನ್‌ಆರ್‌ಎಫ್ಗೆ 50,000 ಕೋ. ರೂ. ಅನುದಾನವನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದ್ದು ಇದನ್ನು ಮುಂದಿನ ಐದು ವರ್ಷಗಳಲ್ಲಿ ವ್ಯಯಿಸಲು ಉದ್ದೇಶಿಸಲಾಗಿದೆ. ದೇಶದ ಪರಿಸರ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಂಶೋಧನೆಗಳನ್ನು ಕೈಗೊಳ್ಳಲಾಗುವುದು ಎಂದರು.
ಎನ್‌ಎಲ್‌ಟಿಎಂ ಘೋಷಣೆ
ಬಜೆಟ್‌ನಲ್ಲಿ ರಾಷ್ಟ್ರೀಯ ಭಾಷಾ ಅನುವಾದ ಮಿಷನ್(ಎನ್‌ಎಲ್‌ಟಿಎಂ)ಅನ್ನು ಪ್ರಕಟಿಸಲಾಗಿದೆ. ಈ ಯೋಜನೆಯ ಮೂಲಕ ದೇಶದ ಪ್ರಮುಖ ಭಾಷೆಗಳಲ್ಲಿ ಸರಕಾರ ನೀತಿ-ನಿರ್ಧಾರಗಳು ಮತ್ತು ಆಡಳಿತದ ಕುರಿತ ಮಾಹಿತಿಗಳು ಸಾರ್ವಜನಿಕರಿಗೆ ಅಂತರ್ಜಾಲದಲ್ಲಿ ಲಭ್ಯವಾಗಲಿದೆ.
ಆಳ ಸಾಗರ ಸಂಶೋಧನೆ
ಆಳ ಸಮುದ್ರದಲ್ಲಿನ ಸಂಶೋಧನೆ ಮತ್ತು ಅನ್ವೇಷಣೆಗಳಿಗಾಗಿ ಮುಂದಿನ ಐದು ವರ್ಷಗಳಲ್ಲಿ 4,000ಕೋ. ರೂ.ಗಳನ್ನು ವ್ಯಯಿಸಲು ಉದ್ದೇಶಿಸಲಾಗಿದೆ. ಈ ಯೋಜನೆಯಡಿ ಸಾಗರದಲ್ಲಿನ ಜೀವವೈವಿಧ್ಯ ಸಂರಕ್ಷಣೆಯ ಉದ್ದೇಶದೊಂದಿಗೆ ಆಳ ಸಮುದ್ರ ಸಂಶೋಧನೆ ಮತ್ತು ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.