Girls: ಸಶಕ್ತ ಹೆಣ್ಣುಮಕ್ಕಳೇ ಸಮಸಮಾಜಕ್ಕೆ ಬುನಾದಿ

Team Udayavani, Oct 11, 2023, 12:23 AM IST

women EMPOWERMENT

ಹೆಣ್ಣುಮಕ್ಕಳು ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಅಭಿವ್ಯಕ್ತಪಡಿಸಲು ಹಾಗೂ ಅವುಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪ್ರತೀವರ್ಷ ಅಕ್ಟೋಬರ್‌ 11ರಂದು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

1995 ರಲ್ಲಿ ಬೀಜಿಂಗ್‌ನಲ್ಲಿ ನಡೆದ ವಿಶ್ವ ಮಹಿಳಾ ಸಮ್ಮೇಳನದಲ್ಲಿ ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ರಕ್ಷಣೆಯ ಕುರಿತಂತೆ ಮಹತ್ವದ ನಿರ್ಣಯವನ್ನು ಅಂಗೀಕರಿಸಲಾಯಿತು. ಇದು ಮಹಿಳೆಯರ ಹಕ್ಕುಗಳಿಗೆ ಮಾತ್ರವಲ್ಲದೇ, ಹೆಣ್ಣು ಮಕ್ಕಳ ಭವಿಷ್ಯವನ್ನು ರೂಪಿಸುವ ನಿಟ್ಟಿನಲ್ಲಿ ದೂರದೃಷ್ಟಿಯನ್ನು ಹೊಂದಿತ್ತು. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಹೆಣ್ಣುಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಅವರನ್ನು ಸಶಕ್ತೀಕರಣಗೊಳಿಸುವ ಅಗತ್ಯವನ್ನು ಮನಗಂಡ ವಿಶ್ವಸಂಸ್ಥೆ 2011ರ ಡಿಸೆಂಬರ್‌ 19ರಂದು ನಡೆದ ಸಾಮಾನ್ಯ ಸಭೆಯಲ್ಲಿ ಅಕ್ಟೋಬರ್‌ 11 ಅನ್ನು ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನವೆಂದು ಘೋಷಿಸುವ ನಿರ್ಣಯವನ್ನು ಕೈಗೊಂಡಿತು. ಅದರಂತೆ 2012ರಲ್ಲಿ ಈ ದಿನವನ್ನು ಮೊದಲ ಬಾರಿಗೆ ಆಚರಿಸಲಾಗಿತ್ತು.

ಪ್ರಾಚೀನ ಕಾಲದಲ್ಲಿ ಹೆಣ್ಣನ್ನು ಬಹಳ ಗೌರವ ದಿಂದ ಕಾಣಲಾಗುತ್ತಿತ್ತು. ಆದರೆ ಕಾಲಾನಂತರದಲ್ಲಿ, ಪರಕೀಯರ ದಾಳಿ ಹಾಗೂ ಸಮಾಜದಲ್ಲಿನ ತಾರತಮ್ಯ, ಅಸಮಾನತೆಯ ಧೋರಣೆಗಳಿಂದಾಗಿ ಹೆಣ್ಣುಮಕ್ಕಳ ಬಗೆಗಿನ ಸಮಾಜದ ದೃಷ್ಟಿಕೋನ ಬದಲಾಗತೊಡಗಿತು. ಹೆಣ್ಣು ಮಗುವಿನ ಕುರಿತು ಜನರ ಆಲೋಚನೆ ಬದಲಾದ ಕಾರಣ ಬಾಲ್ಯವಿವಾಹ, ಸತಿ ಪದ್ಧತಿ, ವರದಕ್ಷಿಣೆ, ಹೆಣ್ಣು ಭ್ರೂಣ ಹತ್ಯೆ ಮುಂತಾದ ಸ್ತ್ರೀ ವಿರೋಧಿ ಪದ್ಧತಿ ಗಳು, ಆಚರಣೆಗಳು ಆರಂಭಗೊಂಡವು. ಇದರಿಂದಾಗಿ ಹೆಣ್ಣು ಮಕ್ಕಳಿಗೆ ಶಿಕ್ಷಣ, ಕಾನೂನು ಹಕ್ಕುಗಳನ್ನು ನಿರಾಕರಿಸಲಾಯಿತು. ಹೆಣ್ಣುಮಕ್ಕಳ ಮೇಲೆ ನಡೆಯುವ ಶೋಷಣೆ, ಹೆಣ್ಣು ಭ್ರೂಣ ಹತ್ಯೆ, ಲೈಂಗಿಕ ಕಿರುಕುಳದಂತಹ ಕೃತ್ಯ ಗಳನ್ನು ತಡೆಗಟ್ಟಲು ಮತ್ತು ಹೆಣ್ಣುಮಕ್ಕಳ ಹಕ್ಕಿನ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತಿದೆ. ಅಷ್ಟು ಮಾತ್ರವಲ್ಲ ಹೆಣ್ಣು ಮಕ್ಕಳಿಗೆ ಅವರ ಹಕ್ಕುಗಳನ್ನು ಒದಗಿಸಲು, ಅದರ ಕುರಿತು ಜನರಲ್ಲಿ ಅರಿವು ಮೂಡಿಸಲು ಹಲವಾರು ಪ್ರಯತ್ನಗಳನ್ನು ನಡೆಸಲಾಗುತ್ತಿದೆ.

ಆಚರಣೆಯ ಮಹತ್ವ
ಒಂದು ಕಾಲದಲ್ಲಿ ಹೆಣ್ಣು ಮಗು ಹುಟ್ಟುವುದನ್ನೇ ಕೀಳಾಗಿ ನೋಡಲಾಗುತ್ತಿತ್ತು. ಆದರೆ ಇಂದು ವಾತಾವರಣ ಬದಲಾಗಿದೆ. ಅನೇಕ ಮಂದಿ ಹೆಣ್ಣು ಮಗು ಜನಿಸಲಿ ಎಂದು ಬಯಸುತ್ತಿದ್ದಾರೆ. ಹೆಣ್ಣು ಮಕ್ಕಳ ಸಾಧನೆ ಕಂಡು ಸಂತಸಪಡುತ್ತಿದ್ದಾರೆ. ಹಾಗೆಂದು ಹೆಣ್ಣುಮಕ್ಕಳ ಬಗೆಗಿನ ಸಮಾಜದ ಧೋರಣೆ ಸಂಪೂರ್ಣ ಬದಲಾಗಿದೆ ಎಂದಲ್ಲ. ಇನ್ನೂ ಹೆಣ್ಣುಮಕ್ಕಳಿಗೆ ಚಿತ್ರಹಿಂಸೆ, ದೌರ್ಜನ್ಯ, ಲೈಂಗಿಕ ಕಿರುಕುಳ, ಅತ್ಯಾಚಾರದಂತಹ ದುಷ್ಕೃತ್ಯಗಳು ನಿರಂತರವಾಗಿ ನಡೆಯುತ್ತಲೇ ಇವೆ. ಇವೆಲ್ಲವುಗಳಿಂದ ಹೆಣ್ಣು ಮಕ್ಕಳಿಗೆ ರಕ್ಷಣೆ ಒದಗಿಸುವ ಜತೆಯಲ್ಲಿ ಅವರನ್ನು ಸ್ವಾವಲಂಬಿಗಳನ್ನಾಗಿಸಿ, ಸಶಕ್ತರನ್ನಾಗಿಸುವ ಮಹತ್ತರ ಆಶಯ, ಉದ್ದೇಶ ಈ ಆಚರಣೆಯ ಹಿಂದಿದೆ.

ಸಮಾಜದಲ್ಲಿ ಬೇರೂರಿರುವ ಗಂಡು-ಹೆಣ್ಣು ಎಂಬ ಲಿಂಗ ತಾರತಮ್ಯವನ್ನು ಹೋಗಲಾಡಿಸಿ, ಸಮಾನತೆಯನ್ನು ಪ್ರಚುರಪಡಿಸುವ ಉದ್ದೇಶದಿಂದ ವಿವಿಧ ದೇಶಗಳು ಈ ಹೆಣ್ಣುಮಕ್ಕಳ ದಿನವನ್ನು ರಾಷ್ಟ್ರೀಯ ಉತ್ಸವವನ್ನಾಗಿ ಆಚರಿಸುತ್ತಿವೆ. ಈ ಮೂಲಕ ಸರಕಾರ ಮತ್ತು ಕಾನೂನಿನ ಮುಂದೆ ಪ್ರತೀ ನಾಗರಿಕ ಸರಿಸಮಾನ ಎಂಬುದನ್ನು ಪ್ರತಿಯೊಬ್ಬರಿಗೆ ಮನವರಿಕೆ ಮಾಡಿಕೊಡುವ ಕೆಲಸ ನಡೆಯುತ್ತಿದೆ.

ಆಚರಣೆಯ ಉದ್ದೇಶಗಳು
ಸಮಾಜದಲ್ಲಿ ಹೆಣ್ಣು ಮಕ್ಕಳು ಎದುರಿಸುತ್ತಿರುವ ಎಲ್ಲ ತೆರನಾದ ತಾರತಮ್ಯ ವನ್ನು ತೊಡೆದು ಹಾಕುವುದು.
 ಹೆಣ್ಣು ಮಗುವಿಗೂ ಎಲ್ಲ ಮೂಲಭೂತ ಹಕ್ಕುಗಳು ದೊರೆಯುವಂತೆ ಮಾಡುವುದು.
ಸಮಾಜದಲ್ಲಿ ಹೆಣ್ಣು ಮಗುವಿಗೆ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸುವುದು ಮತ್ತು ಹೆಣ್ಣು ಮಗುವಿನತ್ತ ಸಮಾಜದ ದೃಷ್ಟಿಕೋನ ಬದಲಿಸುವುದು.
ಜನರಲ್ಲಿ ಲಿಂಗಸಮಾನತೆಯ ಬಗ್ಗೆ ಜಾಗೃತಿ ಉಂಟು ಮಾಡುವುದು.
 ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ನಿಷೇಧ.
ಬಾಲ್ಯ ವಿವಾಹಕ್ಕೆ ವಿಧಿಸಲಾಗಿರುವ ನಿಷೇಧದ ಕಟ್ಟುನಿಟ್ಟಿನ ಪಾಲನೆ
ಹೆಣ್ಣು ಮಕ್ಕಳ ಸುರಕ್ಷೆಯನ್ನು ಖಾತರಿಪಡಿಸುವ ದಿಸೆಯಲ್ಲಿ ಪರಿಣಾಮಕಾರಿ ಕಾನೂನು ಕ್ರಮಗಳ ಅನುಷ್ಠಾನ

ಸ್ವಾವಲಂಬನೆಯತ್ತ ದಿಟ್ಟ ನಡೆ
ಇಂದು 1.1 ಬಿಲಿಯನ್‌ಗೂ ಹೆಚ್ಚು ಹುಡುಗಿಯರು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳುತ್ತಿದ್ದಾರೆ. ಪ್ರತೀ ದಿನ ತಮಗೆ ಎದುರಾಗುವ ಅಡೆತಡೆಗಳನ್ನು ಎದುರಿಸುತ್ತಿದ್ದಾರೆ, ಬಾಲ್ಯ ವಿವಾಹ, ಶಿಕ್ಷಣ ಅಸಮಾನತೆ, ಹಿಂಸೆ, ಅನ್ಯಾಯ ಮತ್ತು ಅಸಮಾನತೆಯಂತಹ ಸಮಸ್ಯೆಗಳನ್ನು ಅವರೇ ನಿಭಾಯಿಸುತ್ತಿದ್ದಾರೆ. ಹೆಣ್ಣು ಮಕ್ಕಳ ಆರೋಗ್ಯ, ಶಿಕ್ಷಣ, ಹೆಣ್ಣುಮಕ್ಕಳ ಬಗೆಗಿನ ಸಮಾಜದ ದೃಷ್ಟಿಕೋನದಲ್ಲೂ ಅಪಾರವಾದ ಸುಧಾರಣೆಗಳು ಇತ್ತೀಚಿನ ವರ್ಷಗಳಲ್ಲಿ ಕಾಣಲಾರಂಭಿಸಿವೆ. ಆದರೆ ಈ ಎಲ್ಲ ವಿಷಯಗಳಲ್ಲಿ ಸಾಗಬೇಕಾದ ಹಾದಿ ಬಹಳಷ್ಟು ದೂರ ಇದೆ.

ಈ ಬಾರಿಯ ಧ್ಯೇಯ
ಪ್ರತೀ ವರ್ಷವು ಹೆಣ್ಣು ಮಕ್ಕಳ ಅಂತಾರಾಷ್ಟ್ರೀಯ ದಿನವನ್ನು ಪ್ರತ್ಯೇಕ ಧ್ಯೇಯದೊಂದಿಗೆ ಆಚರಿಸಿಕೊಂಡು ಬರಲಾಗಿದೆ. ಅದರಂತೆ ಈ ಬಾರಿ “ಡಿಜಿಟಲ್‌ ಜನರೇಶನ್‌, ನಮ್ಮ ಪೀಳಿಗೆ, ನಮ್ಮ ಸಮುದಾಯ, ನಮ್ಮ ಹಕ್ಕುಗಳು, ನಮ್ಮ ಭವಿಷ್ಯ’ ಎಂಬ ಧ್ಯೇಯದಡಿ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತಿದೆ. ಇಂದಿನ ಡಿಜಿಟಲ್‌ ಯುಗದಲ್ಲಿ ಹೆಣ್ಣು ಮಕ್ಕಳಿಗೂ ತಂತ್ರಜ್ಞಾನದ ಎಲ್ಲ ಅವಕಾಶಗಳು ಮುಕ್ತವಾಗಿ ಲಭಿಸುವಂತೆ ಮಾಡುವ ಗುರಿಯೊಂದಿಗೆ ಈ ಬಾರಿಯ ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣಿನ ಸುರಕ್ಷೆ, ಶಿಕ್ಷಣ, ಸಮಾನತೆಯ ಕುರಿತು ಅರಿವು ಮೂಡಿಸುವ ಹಾಗೂ ಅವರ ಭದ್ರತೆಗೆ ಸಂಕಲ್ಪ ತೊಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕಾಗಿದೆ.

 ಪೂಜಾ ಆರ್‌. ಹೆಗಡೆ, ಮೇಲಿನಮಣ್ಣಿಗೆ

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.