Karnataka: 14.72 ಲಕ್ಷ ಎಕರೆ ಸರಕಾರಿ ಜಮೀನು ಒತ್ತುವರಿ- ಕೃಷ್ಣ ಭೈರೇಗೌಡ
Team Udayavani, Dec 13, 2023, 11:42 PM IST
ಬೆಳಗಾವಿ: ರಾಜ್ಯಾದ್ಯಂತ ಒಟ್ಟು 63.32 ಲಕ್ಷ ಎಕರೆ ಸರಕಾರಿ ಜಮೀನು ಇದ್ದು, ಇದರಲ್ಲಿ 14.72 ಲಕ್ಷ ಎಕರೆ ಜಮೀನು ಒತ್ತುವರಿಯಾಗಿದೆ. ವಿವಿಧ ನ್ಯಾಯಾಲಯಗಳಲ್ಲಿರುವ ಪ್ರಕರಣಗಳು, ಅಕ್ರಮ-ಸಕ್ರಮ ಯೋಜನೆ ಮತ್ತು ಸಾರ್ವಜನಿಕ ಉದ್ದೇಶಗಳಿಗೆ ಬಳಕೆಯಾಗಿರುವ 10.82 ಎಕರೆ ಜಮೀನು ಹೊರತುಪಡಿಸಿ ಉಳಿದ 3.89 ಲಕ್ಷ ಎಕರೆ ಭೂಮಿಯನ್ನು ಒತ್ತುವರಿಯಿಂದ ತೆರವುಗೊಳಿಸಬೇಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು.
ವಿಧಾನಪರಿಷತ್‌ನಲ್ಲಿ ಡಾ| ವೈ.ಎ. ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒತ್ತುವರಿಯಾಗಿರುವ 3.89 ಲಕ್ಷ ಎಕರೆ ಭೂಮಿಯಲ್ಲಿ 2.73 ಲಕ್ಷ ಎಕರೆ ಜಮೀನನ್ನು ತೆರವುಗೊಳಿಸಲಾಗಿದೆ. ರಾಜ್ಯಾದ್ಯಂತ ಒತ್ತುವರಿ ತೆರವು ಕಾರ್ಯ ಪ್ರಗತಿಯಲ್ಲಿದೆ ಎಂದರು.
ಅತಿಕ್ರಮಣವನ್ನು ತೆರವು ಗೊಳಿಸಲು ಅಭಿಯಾನದ ರೀತಿಯಲ್ಲಿ ಆ್ಯಪ್ ಒಂದನ್ನು ಆರಂಭಿಸಲಾಗಿದ್ದು ಇದು ಜನವರಿಯಿಂದ ಕಾರ್ಯಾರಂಭ ಮಾಡಲಿದೆ. ಗ್ರಾಮ ಲೆಕ್ಕಾಧಿಕಾರಿಗಳು ಸ್ಥಳಕ್ಕೆ ಹೋಗಿ ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆ ಮಾಡಿ ತಹಶೀಲ್ದಾರರಿಗೆ ವರದಿ ಕೊಡಬೇಕು. ಅನಂತರ ಅದನ್ನು ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದರು.
ಗೋಮಾಳ ಮಂಜೂರಾತಿ ಇಲ್ಲ
ದಕ್ಷಿಣ ಕನ್ನಡ ಜಿಲ್ಲೆ ಸೇರಿ ರಾಜ್ಯದ ಯಾವುದೇ ಪ್ರದೇಶದಲ್ಲಿನ ಗೋಮಾಳ ಮತ್ತು ಖರಾಬು ಹಾಗೂ ಸರಕಾರದ ಜಮೀನುಗಳನ್ನು ಕರ್ನಾಟಕ ಭೂ ಮಂಜೂರಾತಿ ನಿಯಮದಂತೆ ಯಾವುದೇ ವ್ಯಕ್ತಿ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶ ಇಲ್ಲ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದರು. ವಿಧಾನಪರಿಷತ್‌ದಲ್ಲಿ ಸದಸ್ಯ ಕೆ. ಹರೀಶಕುಮಾರ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ನಗರ ಪೌರಮಿತಿಯೊಳಗಿನ ಸರಕಾರಿ ಜಮೀನುಗಳನ್ನು ಸಾರ್ವಜನಿಕ ಉದ್ದೇಶಕ್ಕಾಗಿ ಕಾಯ್ದಿರಿಸಬೇಕಾಗುತ್ತದೆ. ಮುಖ್ಯ ವಾಗಿ ರಾಜ್ಯದಲ್ಲಿ ಜಾಗದ ಕೊರತೆ ಬಹಳವಾಗಿದೆ. ಶ್ಮಶಾನ, ಶಾಲೆಗಳ ನಿರ್ಮಾಣಕ್ಕೆ ಜಾಗ ಸಿಗುತ್ತಿಲ್ಲ ಎಂದರು. ಈಗ ಅಲ್ಪಸ್ವಲ್ಪ ಜಮೀನುಗಳನ್ನು ಖಾಸಗಿಯವರಿಂದ ಖರೀದಿಸಿ ಶ್ಮಶಾನಕ್ಕೆ ಕೊಡಬೇಕಾದ ಸ್ಥಿತಿ ಬಂದಿದೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರದ ಜಮೀನುಗಳನ್ನು ಯಾವುದೇ ವ್ಯಕ್ತಿ ಅಥವಾ ಖಾಸಗಿ ಸಂಘ ಸಂಸ್ಥೆಗಳಿಗೆ ಮಂಜೂರು ಮಾಡಲು ಅವಕಾಶ ಇಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.