ಜಲ್ಲಿ ಕಲ್ಲುಗಳಿಂದ ಕೂಡಿದ ರಸ್ತೆಗೆ ಕೊನೆಗೂ ಮುಕ್ತಿ !
Team Udayavani, Apr 15, 2021, 1:08 AM IST
ಕಾರ್ಕಳ: ರಸ್ತೆ ಕಾಮಗಾರಿ ಅಪೂರ್ಣಗೊಂಡು ಜಲ್ಲಿಕಲ್ಲುಗಳಿಂದ ಸಂಚರಿಸಲಾಗದೆ ಸರಣಿ ಅಪಘಾತ ಸಂಭವಿಸಿ ತೊಂದರೆಯಾಗುತ್ತಿದ್ದ ಕಾವೇರಡ್ಕ ಅಯೋಧ್ಯಾ ನಗರದ ದುರ್ಗಾ ಮತ್ತು ಕಾರ್ಕಳ ನಗರವನ್ನು ಸಂಪರ್ಕಿಸುವ ರಸ್ತೆಯಲ್ಲಿ ಡಾಮರು ಕಾಮಗಾರಿ ಆರಂಭಗೊಂಡಿದೆ.
ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರದ ದುರ್ಗಾ ಮತ್ತು ಕಾರ್ಕಳ ನಗರವನ್ನು ಸಂಪರ್ಕಿಸುವ ಪ್ರಮುಖ ಕೊಂಡಿ ಯಾಗಿರುವ ಈ ರಸ್ತೆ ಸಂಪೂರ್ಣ ಹದಗೆಟ್ಟಿತ್ತು. ಇದು 18 ವರ್ಷದ ಹಿಂದೆ ಅಭಿವೃದ್ಧಿಗೊಂಡಿದ್ದು, ಬಿಟ್ಟರೆ ಅನಂತರದಲ್ಲಿ ರಸ್ತೆಯ ಅಭಿವೃದ್ಧಿ ನಡೆದಿರಲಿಲ್ಲ. 2020ರ ಜನವರಿ ತಿಂಗಳಲ್ಲಿ ಟೆಂಡರ್ ಆಗಿತ್ತು. ಅದೇ ವರ್ಷದ ಮೇ ತಿಂಗಳಿನಲ್ಲಿ ಮಂಗಳೂರು ಭಾಗದ ಗುತ್ತಿಗೆದಾರರು ರಸ್ತೆ ನಿರ್ಮಾಣದ ಕಾಮಗಾರಿ ವಹಿಸಿಕೊಂಡಿದ್ದರು. ಕಾರಣಾಂತರಗಳಿಂದ ರಸ್ತೆ ಪೂರ್ಣಗೊಳ್ಳದೆ ಅರ್ಧಕ್ಕೆ ನಿಂತಿತ್ತು. ಇಲ್ಲಿ ವಾಹನ ಸಂಚರಿಸುವ ವೇಳೆ ಸರಣಿ ಅಪಘಾತಗಳು ನಡೆಯುತ್ತಿದ್ದವು.
ಇಲ್ಲಿಯ ರಸ್ತೆ ವಿದ್ಯಾರ್ಥಿಗಳ, ಸ್ಥಳಿಯ ನಾಗರಿಕರ ಪ್ರಾಣಕ್ಕೆ ಸಂಚಕಾರ ತರುತ್ತಿತ್ತು. ಇದರಿಂದ ರಸ್ತೆ ಅಭಿವೃದ್ಧಿಗೆ ಪುರಸಭೆ ಮುಂದಾಗಿತ್ತು. ಅನಂತರ ರಸ್ತೆ ಅಭಿವೃದ್ಧಿಗೆಂದು ಜಲ್ಲಿಕಲ್ಲು ಹಾಕಿದ್ದರೂ ಡಾಮರು ಕಾಮಗಾರಿ ಆರಂಭ ವಾಗಿರಲಿಲ್ಲ. ಸ್ಥಳೀಯರು ಸತತವಾಗಿ ಪುರಸಭೆ, ಗುತ್ತಿಗೆದಾರರಿಗೆ ಕರೆ ಮಾಡಿ ದರೂ ಪ್ರಯೋಜನವಾಗಿರಲಿಲ್ಲ. ಘಟನೆಗೆ ಪುರಸಭೆ, ಗುತ್ತಿಗೆೆದಾರರನ್ನು ಹೊಣೆಯಾಗಿಸಿ ಸ್ಥಳೀಯರು ಕಾನೂನು ಹೋರಾಟಕ್ಕೂ ಮುಂದಾಗಿದ್ದರು.
ವರದಿ ಬೆನ್ನಲ್ಲೇ ಕಾಮಗಾರಿ
ಪುರಸಭೆ ವಾರ್ಡ್-11ರಲ್ಲಿ ಇಂತಹದ್ದೊಂದು ಶೋಚನೀಯ ಸ್ಥಿತಿ ಇರುವ ಕುರಿತು ಎ.10ರಂದು ಉದಯವಾಣಿ ವರದಿಯಲ್ಲಿ ಸಚಿತ್ರ ವರದಿ ಪ್ರಕಟಗೊಂಡಿತ್ತು. 6 ತಿಂಗಳಿಂದ ಸಂಚಾರದಲ್ಲಿ ಆಗುತ್ತಿರುವ ತೊಂದರೆ ಕುರಿತು ಆಡಳಿತದ ಗಮನ ಸೆಳೆದಿತ್ತು. ಪುರಸಭೆ ಮುಖ್ಯಾಧಿಕಾರಿ ರೇಖಾ ಜೆ.ಶೆಟ್ಟಿ ಅವರು ಗುತ್ತಿಗೆದಾರರ ಗಮನಕ್ಕೆ ಈ ಕೂಡಲೇ ತಂದು ಸಮಸ್ಯೆ ಬಗೆಹರಿಸುವ ಭರವಸೆಯನ್ನು ನೀಡಿದ್ದರು. ಇದರ ಫಲಶ್ರುತಿ ಎಂಬಂತೆ ರಸ್ತೆ ಡಾಮರುಗೊಳ್ಳುತ್ತಿದೆ. ಎರಡು ದಿನಗಳಿಂದ ಕೆಲಸ ನಡೆಯುತ್ತಿದ್ದು, ಇನ್ನೆರಡು ದಿನದಲ್ಲಿ ಕಾಮಗಾರಿ ಮುಕ್ತಾಯಗೊಂಡು ಸುಗಮ ಸಂಚಾರಕ್ಕೆ ರಸ್ತೆ ತೆರೆದುಕೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.