ಯಾದಗಿರಿಯಲ್ಲಿ ಔಷಧ ಪಾರ್ಕ್‌ಗೆ ಅಪಸ್ವರ; ತೆಲಂಗಾಣದಲ್ಲೂ ಇಂಥದೇ ಸಮಸ್ಯೆ

ಜನ-ಜಾನುವಾರುಗಳು ರೋಗಕ್ಕೆ ತುತ್ತಾಗುವ ಅಪಾಯವಿದೆ.

Team Udayavani, Sep 25, 2021, 11:05 AM IST

ಯಾದಗಿರಿಯಲ್ಲಿ ಔಷಧ ಪಾರ್ಕ್‌ಗೆ ಅಪಸ್ವರ; ತೆಲಂಗಾಣದಲ್ಲೂ ಇಂಥದೇ ಸಮಸ್ಯೆ

ಯಾದಗಿರಿ: ಕಡೇಚೂರು ಮತ್ತು ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ ರಾಜ್ಯ ಸರ್ಕಾರ 2478 ಕೋಟಿ ರೂ. ವೆಚ್ಚದಲ್ಲಿ ವಿಶ್ವದರ್ಜೆಯ ಬೃಹತ್‌ ಔಷಧ ಪಾರ್ಕ್‌ ನಿರ್ಮಾಣಕ್ಕೆ ಮುಂದಾಗಿರುವ ಬೆನ್ನಲ್ಲೇ ಅಪಸ್ವರ ಕೇಳಿಬಂದಿದೆ. ಕೇಂದ್ರ ಸರ್ಕಾರದ ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯಕ್ಕೆ ಈ ಪಾರ್ಕ್‌ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರಸ್ತಾವನೆ ಕಳುಹಿಸಿದೆ. ಕೇಂದ್ರ ಸರ್ಕಾರದ 1000 ಕೋಟಿ ರೂ. ಹಾಗೂ ರಾಜ್ಯದ 1478 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಪಾರ್ಕ್‌ ನಿರ್ಮಾಣವಾಗಲಿದೆ. ಇದರಿಂದ 10 ಸಾವಿರಕ್ಕೂ ಹೆಚ್ಚು ಉದ್ಯೋಗಗಳು ಸೃಷ್ಟಿಯಾಗಲಿದೆ.ಕಡೇಚೂರು ಬಾಡಿಯಾಳ ಭಾಗದಲ್ಲಿ ಗುಣಮಟ್ಟದ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಾಗಲಿವೆ ಎನ್ನಲಾಗಿದೆ.

ಶುರುವಾಗಿದೆ ವಿರೋಧ: ಆದರೆ ಔಷಧ ಪಾರ್ಕ್‌ ನಿರ್ಮಾಣ ವಾಗುವುದರಿಂದ ಕೆಮಿಕಲ್‌ ತ್ಯಾಜ್ಯದಿಂದ ಪರಿಸರ ಹಾಳಾಗುವುದಲ್ಲದೇ ಕುಡಿಯುವ ನೀರು ಕಲುಷಿತಗೊಂಡು ಜನ-ಜಾನುವಾರುಗಳು ರೋಗಕ್ಕೆ ತುತ್ತಾಗುವ ಅಪಾಯವಿದೆ. ಕೆಮಿಕಲ್‌ ತ್ಯಾಜ್ಯ ನದಿಗೆ ಹರಿಯುವುದರಿಂದ ಜಲಚರಗಳಿಗೂ ಮಾರಕವಾಗಲಿದೆ. ಹೀಗಾಗಿ ಈ ಪಾರ್ಕ್‌ ನಿರ್ಮಾಣದಿಂದ ಲಾಭಕ್ಕಿಂತ ಅಪಾಯವೇ ಹೆಚ್ಚು ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

ಈ ನಡುವೆ ಥರ್ಮಲ್‌ ಮತ್ತು ಜವಳಿ ಪಾರ್ಕ್‌ ನಿರ್ಮಿಸಿ ಲಕ್ಷಾಂತರ ಉದ್ಯೋಗ ನೀಡಲಾಗುವುದೆಂದು ಮೊದಲು ತಿಳಿಸಿ ರೈತರಿಂದ ಭೂಮಿ ಪಡೆದ ಸರ್ಕಾರ ಈಗ ಏಕಾಏಕಿ ಔಷಧ ಪಾರ್ಕ್‌ ಸ್ಥಾಪಿಸಲು ಹೊರಟಿರುವುದು ಈ ಭಾಗದ ರೈತರು ಮತ್ತು ಹೋರಾಟಗಾರರ ಕೆಂಗಣ್ಣಿಗೆ ಗುರಿಯಾಗಿದೆ. ಜವಳಿ ಪಾರ್ಕ್‌ ನಿರ್ಮಾಣದಿಂದ ತಮ್ಮ ಮಕ್ಕಳ ನಿರುದ್ಯೋಗ ನಿವಾರಣೆಯಾಗಲಿದೆ ಎಂದು ನಂಬಿ ಭೂಮಿ ಕೊಟ್ಟ ರೈತ ಕುಟುಂಬಗಳ ಮಕ್ಕಳಿಗೆ ಉದ್ಯೋಗವಿಲ್ಲ. ಅಲ್ಲದೇ ರೈತರ ಭೂಮಿಗೆ ನಿಗದಿತ ಹಣ ನೀಡಿಲ್ಲವಾದ್ದರಿಂದ ಕೈಯಲ್ಲಿ ಹಣವಿಲ್ಲದೆ ಮುಂಬೈ, ಬೆಂಗಳೂರು, ಹೈದರಾಬಾದ್‌ ಸೇರಿದಂತೆ ಮಹಾನಗರಗಳಿಗೆ
ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ.

ತೆಲಂಗಾಣದಲ್ಲೂ ಇಂಥದೇ ಸಮಸ್ಯೆ!
ತೆಲಂಗಾಣ ರಾಜ್ಯದ ಪಟಾಂಚೇರು-ಬೋಳಾರಂ ವ್ಯಾಪ್ತಿಯ ಪಟಾಂಚೆರು, ಬಡ್ಡಿ, ಕಡಲೂರು ಮತ್ತು ಇತರೆ ಸ್ಥಳಗಳಲ್ಲಿ ಬೃಹತ್‌ ಔಷಧ ತಯಾರಿಕಾ ಘಟಕಗಳಿದ್ದು, ಔಷಧ ತಯಾರಿಸಲು ರಾಸಾಯನಿಕಗಳನ್ನು ವ್ಯಾಪಕವಾಗಿ ಬಳಸಲಾಗುತ್ತದೆ. ಇದರಿಂದ ಹೊರ ಸೂಸಿದ ವಿಷಗಾಳಿ ಮತ್ತು ತ್ಯಾಜ್ಯ ನೀರಿನಿಂದ ಸುತ್ತಮುತ್ತಲಿನ ಗಾಳಿ, ನೀರು ಮತ್ತು ಮಣ್ಣು ಕಲುಷಿತಗೊಂಡಿರುವ ಕುರಿತು ಹಲವು ಬಾರಿ ವರದಿಯಾಗಿದೆ.

ಹೀಗಾಗಿ ಯಾದಗಿರಿ ಜಿಲ್ಲೆಯಲ್ಲೂ ಔಷಧ ಪಾರ್ಕ್‌ ಸ್ಥಾಪನೆಗೂ ಮುನ್ನ ತೆಲಂಗಾಣದ ಪಟಾಂಚೇರು-ಬೋಳಾರಂ ವ್ಯಾಪ್ತಿಯ ಈಗಿನ ಸ್ಥಿತಿ ಹೇಗಿದೆ ಎಂಬುದನ್ನು ಈ ಭಾಗದ ಜನಪ್ರತಿನಿಧಿಗಳ ನಿಯೋಗ ಒಮ್ಮೆ ನೋಡಿ ಬರುವುದು ಒಳಿತು ಎನ್ನುವುದು ಸಾರ್ವಜನಿಕರ ಅಭಿಪ್ರಾಯ.

ಯಾದಗಿರಿ ಜಿಲ್ಲೆಯ ಕಡೇಚೂರು-ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿ 125 ಕಂಪನಿಗಳಿಗೆ ಅನುಮತಿ ನೀಡಲಾಗಿದೆ. ಈ ಪೈಕಿ 25 ಕಂಪನಿಗಳಿಗೆ ಎನ್‌ಒಸಿ ಸಿಕ್ಕಿದ್ದು, ಇನ್ನುಳಿದವುಗಳಿಗೆ ಅನುಮತಿ ಸಿಗಬಹುದು. ಔಷಧ ಪಾರ್ಕ್‌ ಮತ್ತು ಜವಳಿ ಪಾರ್ಕ್‌ ಸ್ಥಾಪನೆಗಾಗಿ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇವುಗಳಲ್ಲಿ ಯಾವುದಾದರೊಂದು ಪಾರ್ಕ್‌ ಸ್ಥಾಪನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬಹುದೆನ್ನುವ ಭರವಸೆ ಇದೆ. ಕಡೇಚೂರಲ್ಲಿ ಔಷಧ ಪಾರ್ಕ್‌ ನಿರ್ಮಾಣ ಇನ್ನೂ ತಡವಾಗಲಿದೆ. ಕೇಂದ್ರ ಸರಕಾರ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಅನುಮತಿ ನೀಡುವುದರ ಜತೆಗೆ ಅನುದಾನ ಬಿಡುಗಡೆಗೊಂಡ ನಂತರ ಎಲ್ಲ ಕೆಲಸಗಳು ಆರಂಭವಾಗಲಿವೆ.
ಡಾ| ರಾಗಪ್ರಿಯಾ ಆರ್‌.,
ಜಿಲ್ಲಾಧಿಕಾರಿ, ಯಾದಗಿರಿ

ನಮ್ಮ ಜನರಿಗೆ ಉದ್ಯೋಗ ಸಿಗಬೇಕೆನ್ನುವ ಉದ್ದೇಶದಿಂದ ಭೂಮಿಯನ್ನು ಕೈಗಾರಿಕೆ ಸ್ಥಾಪನೆಗೆ ನೀಡಿದ್ದೇವೆ. ಆದರೆ ಜನ-ಜಾನುವಾರುಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವಂತಹ ಕಾರ್ಖಾನೆಗಳ ಸ್ಥಾಪನೆ ಇಲ್ಲಿ ಬೇಡ. ಅಲ್ಲಿನ ಕಾರ್ಖಾನೆಗಳು ಬಿಡುತ್ತಿರುವ ಕಲುಷಿತ ನೀರಿನಿಂದ ಜನ-ಜಾನುವಾರುಗಳಿಗೆ ತೊಂದರೆಯಾಗಿದೆ ಎಂಬ ದೂರುಗಳಿಂದ ಶಾಸಕರು ಜಿಲ್ಲಾಡಳಿತದೊಂದಿಗೆ ಸಭೆ ಕೂಡ ನಡೆಸಿದ್ದಾರೆ. ಮುಂದೆ ಹೀಗಾಗದಂತೆ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಭರವಸೆ ನೀಡಿದೆ. ಮತ್ತೆ ಈಗ ಔಷಧ ಪಾರ್ಕ್‌ ಸ್ಥಾಪಿಸಿ ಅಲ್ಲಿನ ವಾತಾವರಣ ಕಲುಷಿತಗೊಳಿಸುವುದು ಬೇಡ.
ಶರಣಗೌಡ ಕಂದಕೂರ, ರಾಜ್ಯ ಉಪಾಧ್ಯಕ್ಷ, ಜೆಡಿಎಸ್‌ ಯುವ ಘಟಕ

ಜವಳಿ ಪಾರ್ಕ್‌ ನಿರ್ಮಿಸುತ್ತೇವೆಂದು ರೈತರಿಗೆ ನಂಬಿಸಿ ಭೂಮಿ ಖರೀದಿಸಿರುವ ರಾಜ್ಯ ಸರ್ಕಾರ ಹಿಂದುಳಿದ ಜಿಲ್ಲೆಯೆಂದು ತಿಳಿದು ಬರೀ ಕೆಮಿಕಲ್‌ ಫ್ಯಾಕ್ಟರಿಗಳನ್ನು ಇಲ್ಲಿ ಸ್ಥಾಪಿಸಲು ಹೊರಟಿರುವುದು ಸರಿಯಲ್ಲ. ಮುಂದಿನ ದಿನಗಳಲ್ಲಿ ನಡೆಯುವ ಬೃಹತ್‌ ಹೋರಾಟಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ.
ಟಿ.ಎನ್‌.ಭೀಮುನಾಯಕ, ಕರವೇ ಜಿಲ್ಲಾಧ್ಯಕ್ಷ, ಯಾದಗಿರಿ

*ಮಹೇಶ ಕಲಾಲ

ಟಾಪ್ ನ್ಯೂಸ್

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ

Sharanagowda-Kandakura

JDS: ದೇವೇಗೌಡರ ಕುಟುಂಬ ಬಲಿ ಪಡೆಯೋದಾದ್ರೆ ಶಿವರಾಮೇಗೌಡ್ರು ಸಂಸದರಾಗ್ತಿದ್ರಾ?: ಕಂದಕೂರ

8-hunasagi

Hunasagi: ಕೃಷ್ಣಾನದಿಯಲ್ಲಿ ಕಾಲು ಜಾರಿ ಬಿದ್ದು ಇಬ್ಬರು ಸಾವು

ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

Yadagiri: ಕೃಷ್ಣಾ ನದಿಯಲ್ಲಿ ಈಜಲು ಹೋಗಿ ಯುವಕರಿಬ್ಬರು ಸಾವು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-chilly

Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ

attack

Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ

1-reeee

Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.