ಸಮಾಜದ ಮುನ್ನೆಡೆಗೆ ಮಾರ್ಕ್ಸ್ ವಾದ ಚಿಂತನೆ ಅತ್ಯಗತ್ಯ: ಎಸ್‌ಯುಸಿಐ
ಭಾರತದಲ್ಲಿ ಬಿಜೆಪಿ ಮುಖವಾಡದ ಬಂಡವಾಳಿಗರ ಆಡಳಿತ
Team Udayavani, Aug 5, 2021, 8:05 PM IST
ವಾಡಿ(ಚಿತ್ತಾಪುರ): ಭಾರತದಲ್ಲಿ ಬಾಹ್ಯವಾಗಿ ಬಿಜೆಪಿ ಮುಖವಾಡದ ಆಡಳಿತ ಕಂಡು ಬಂದರೂ ಆಂತರಿಕದಲ್ಲಿ ಅಂಬಾನಿ ಹಾಗೂ ಅದಾನಿಯಂತಹ ದೊಡ್ಡ ಬಂಡವಾಳಶಾಹಿ ಶೋಷಕರು ಸರಕಾರವನ್ನು ನಿಯಂತ್ರಿಸುತ್ತಿದ್ದಾರೆ ಎಂದು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ಕಾರ್ಯದರ್ಶಿ ಕಾಮ್ರೇಡ್ ಆರ್.ಕೆ.ವೀರಭದ್ರಪ್ಪ ಆರೋಪಿಸಿದರು.
ಪಟ್ಟಣದ ಎಸ್‌ಯುಸಿಐ (ಕಮ್ಯುನಿಸ್ಟ್) ಪಕ್ಷದ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಪಕ್ಷದ ಸಂಸ್ಥಾಪಕ ಅಧ್ಯಕ್ಷ, ಮಹಾನ್ ಮಾರ್ಕ್ಸ್ ವಾದಿ ಚಿಂತಕ ಕಾಮ್ರೇಡ್ ಶಿವದಾಸ ಘೋಷ್ ಅವರ 45ನೇ ಸ್ಮರಣ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕೊರೊನಾ ಸಾಂಕ್ರಾಮಿಕ ರೋಗದಿಂದ ಇಡೀ ದೇಶ ತತ್ತರಿಸಿ ಹೋಗಿದೆ. ನೆರೆ ಹಾವಳಿಯಿಂದ ಬೆಳೆ ನಾಶವಾಗಿ ರೈತರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿ ಬಡವರ ಬದುಕು ಕಷ್ಟಕ್ಕೆ ಸಿಲುಕಿದೆ. ರಾಜ್ಯ ಸರಕಾರ ಅಧಿಕಾರದ ಹಪಹಪಿಯಲ್ಲಿ ಮುಳುಗಿದೆ. ಜನಸಾಮಾನ್ಯರಿಗೆ ಒಳ್ಳೆಯ ದಿನಗಳ ಕನಸು ತೋರಿಸಿ ಕರಾಳ ದಿನಗಳನ್ನು ಕೊಟ್ಟಿರುವ ಪ್ರಧಾನಿ ಮೋದಿ ಖಾಸಗೀಕರಣದ ಹೆಸರಿನಲ್ಲಿ ದೇಶದ ಸಂಪತ್ತನ್ನು ಬಂಡವಾಳಶಾಹಿಗಳ ಪಾದಕ್ಕೆ ಅರ್ಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಾರ್ಕ್ಸ್ ವಾದ ಚಿಂತನೆಯಡಿ ದೇಶದ 24 ರಾಜ್ಯಗಳಲ್ಲಿ ಜನತಾಂತ್ರಿಕ ಹೋರಾಟಗಳನ್ನು ಬೆಳೆಸುತ್ತಿರುವ ಎಸ್‌ಯುಸಿಐ (ಸಿ) ಪಕ್ಷ ನೈಜ ಕ್ರಾಂತಿಕಾರಿ ಪಕ್ಷವಾಗಿ ಹೊರಹೊಮ್ಮಿದೆ. ಇದರ ಸಂಸ್ಥಾಪಕ ಅಧ್ಯಕ್ಷ ಕಾಮ್ರೇಡ್ ಶಿವದಾಸ ಘೋಷ್ ಅವರು ಮಾರ್ಕ್ಸ್ ವಾದಿ ದೃಷ್ಠಿಕೋನದಡಿ ದೇಶದ ಬಂಡವಾಳಶಾಹಿ ವ್ಯವಸ್ಥೆಯನ್ನು ಸೋಲಿಸಲು ಹೋರಾಟಗಳಿಗೆ ಮಾರ್ಗದರ್ಶನ ಮಾಡಿದ್ದಾರೆ. ಬಂಡವಾಳಶಾಹಿ ವಿರೋಧಿ ಸಮಾಜವಾದಿ ಕ್ರಾಂತಿಕಾಗಿ ಪಕ್ಷದ ಲಕ್ಷಾಂತರ ಜನ ಕ್ರಾಂತಿಕಾರಿ ಕಾರ್ಯಕರ್ತರು ಜನ ಸಂಘಟನೆಯಲ್ಲಿ ತೊಡಗಿದ್ದಾರೆ. ರೈತ, ಕಾರ್ಮಿಕ, ವಿದ್ಯಾರ್ಥಿ, ಯುವಜನ, ಮಹಿಳೆ ಮತ್ತು ದುಡಿಯುವ ಜನಗಳ ದನಿಯಾಗಿ ಕೆಲಸ ಮಾಡುತ್ತಿದೆ. ಸಮಾಜದಲ್ಲಿ ಸಾಮಾಜಿಕ ಕ್ರಾಂತಿಯ ಗುರಿಯೊಂದಿಗೆ ಘೋಷಣೆ ಮೊಳಗಿಸುತ್ತಿರುವ ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷವು ಸೈದ್ಧಾಂತಿಕ ನೆಲೆಗಟ್ಟಿನ ಮೇಲೆ ಸಾಂಸ್ಕೃತಿಕ ಚಳುವಳಿಯನ್ನೂ ಅಷ್ಟೇ ಪ್ರಬಲವಾಗಿ ಮುನ್ನೆಡೆಸುತ್ತಿದೆ ಎಂದರು.
ಪಕ್ಷದ ಕಾರ್ಯಕರ್ತರಾದ ಯೇಸಪ್ಪಾ ಕೇದಾರ, ಶರಣು ಹೇರೂರ, ರಾಜು ಒಡೆಯರಾಜ್, ದೌಲಪ್ಪ ದೊರೆ, ಅವಿನಾಶ ಒಡೆಯರ, ರಿತ್ವಿಕ್ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
Wadi: ಡಾ.ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ; ಬೃಹತ್ ಪ್ರತಿಭಟನೆ, ವಾಡಿ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.