ಸೋಲಿಗೆ ಎಲ್ಲರೂ ಹೊಣೆ: ದೇಶಪಾಂಡೆ
Team Udayavani, Dec 12, 2019, 10:19 PM IST
ಬೆಂಗಳೂರು: ಉಪ ಚುನಾವಣೆ ಸೋಲಿಗೆ ಎಲ್ಲ ನಾಯಕರೂ ಕಾರಣರಾಗಿದ್ದೇವೆ. ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ಅವರು ನೀಡಿರುವ ರಾಜೀನಾಮೆ ವಾಪಸ್ ಪಡೆಯಬೇಕು ಎಂದು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.
ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಉಪ ಚುನಾವಣೆಗೆ ಟಿಕೆಟ್ ಹಂಚಿಕೆ ಸಂದರ್ಭದಲ್ಲಿ ಎಲ್ಲ ನಾಯಕರು ಕೂಡಿಯೇ ಚರ್ಚಿಸಿ ತೀರ್ಮಾನ ಮಾಡಿದ್ದೇವು. ಕೇವಲ ಸಿದ್ದರಾಮಯ್ಯ ಅವರನ್ನು ಮಾತ್ರ ಹೊಣೆಗಾರರನ್ನಾಗಿ ಮಾಡುವುದು ಸರಿಯಲ್ಲ. ಅವರು ತಮ್ಮ ರಾಜಿನಾಮೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಉಪ ಚುನಾವಣೆಯ ಬೆಳವಣಿಗೆಯ ಬಗ್ಗೆ ಹೈಕಮಾಂಡ್ ನಮ್ಮ ಜೊತೆ ಯಾವುದೇ ರೀತಿಯ ಚರ್ಚೆ ನಡೆಸಿಲ್ಲ ಎಂದು ಹೇಳಿದರು.
ಇದೇ ವೇಳೆ, ಸಿದ್ದರಾಮಯ್ಯ ಆರೋಗ್ಯವಾಗಿದ್ದು, ನಮ್ಮ ಜೊತೆಗೆ ಉತ್ತಮವಾಗಿ ಮಾತನಾಡಿದ್ದಾರೆ. ವಾರ್ಡ್‌ಗೆ ಶಿಫ್ಟ್ ಆಗಿದ್ದಾರೆ ಎಂದು ಹೇಳಿದರು.
ಆರೋಗ್ಯ ವಿಚಾರಿಸಿ ಹೈಕಮಾಂಡ್
ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದ ಕುರಿತು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಮಾಹಿತಿ ಪಡೆದುಕೊಂಡಿದ್ದಾರೆ.
ಸೋನಿಯಾ ಗಾಂಧಿ ಕಚೇರಿಯ ಅಧಿಕಾರಿಗಳು ದೂರವಾಣಿ ಮೂಲಕ ಸಿದ್ದರಾಮಯ್ಯ ಅವರನ್ನು ಸಂಪರ್ಕಿಸಿ ಆರೋಗ್ಯದ ಮಾಹಿತಿ ಪಡೆದುಕೊಂಡಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಹಮದ್ ಪಟೇಲ್ ಕೂಡ ದೂರವಾಣಿ ಮೂಲಕ ಸಿದ್ದರಾಮಯ್ಯ ಅವರ ಆರೋಗ್ಯ ವಿಚಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.