HDK ಗೆ ಅನುಭವ ಹೆಚ್ಚಾಗುತ್ತಿದೆ: ಡಿಕೆಶಿ
ಕುಮಾರಸ್ವಾಮಿ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲ್ಲಿಲ್ಲ: ಡಿಸಿಎಂ ವ್ಯಂಗ್ಯ
Team Udayavani, Dec 23, 2023, 12:22 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮೇಧಾವಿಗಳು. ಅವರಿಗೆ ಅನುಭವ ಹೆಚ್ಚಾಗಿದೆ. ಅವರಿಗೆ ಜೋತಿಷ್ಯ ಗೊತ್ತಿದೆ. ಅವರ ನುಡಿಮುತ್ತುಗಳನ್ನು ನಾವು ಸಂತೋಷದಿಂದ ಕೇಳುತ್ತಿದ್ದೇವೆ. ಅವರ ಬಾಯಿಗೆ ಬೀಗ ಹಾಕುವ ಶಕ್ತಿ ನನ್ನಲಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರಕಾರದಲ್ಲಿ ಅಜಿತ್ ಪವಾರ್ ಹಾಗೂ ಏಕನಾಥ ಶಿಂಧೆಯಂಥವರು ಇದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ, ಕುಮಾರಸ್ವಾಮಿ ಮಾತ ನಾಡುತ್ತಿರಬೇಕು. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾಗೂ ನಮ್ಮ ಪಕ್ಷ ಅಧಿಕಾರದಲ್ಲಿರುವುದನ್ನು ಅವರಿಂದ ಸಹಿಸಲಾಗುತ್ತಿಲ್ಲ. ಅವರಿಗೆ ಅಧಿಕಾರ ಸಿಗಲಿಲ್ಲ ಎಂಬ ಹತಾಶೆಯಿಂದ ಏನೇನೋ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಒಳ್ಳೆಯದಾಗಲಿ ಎಂದರು.
ಸಿಎಂ ವಿಮಾನದಲ್ಲಿ ಓಡಾಡುವುದು ಸಹಜ
ಬರದ ಸಮಯದಲ್ಲೂ ಮುಖ್ಯ ಮಂತ್ರಿಗಳು ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂಬ ವಿಪಕ್ಷಗಳ ಟೀಕೆ ಬಗ್ಗೆ ಮಾಧ್ಯಮಗಳು ಕೇಳಿದಾಗ, ಸಮಯ ಉಳಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳು ವಿಮಾನಗಳಲ್ಲಿ ಓಡಾಡುವುದು ಸಹಜ ಎಂದರು. ಮುಖ್ಯಮಂತ್ರಿಗಳು ಪ್ರಧಾನಮಂತ್ರಿಗಳ ಭೇಟಿಗೆ ವಿಪಕ್ಷಗಳ ನಾಯಕರನ್ನು ಕರೆದುಕೊಂಡು ಹೋಗ
ಬೇಕಿತ್ತು ಎಂದಾಗ, ನಾವು ಸರ್ವಪಕ್ಷ ನಿಯೋಗವನ್ನು ಪ್ರಧಾನಿಗಳ ಬಳಿ ಕರೆದೊಯ್ಯಲು ಸಿದ್ಧವಿದ್ದೇವೆ. ಅವರು ಅಧಿಕಾರಿಗಳ ಭೇಟಿಗೆ ಸಮಯ ನೀಡಿಲ್ಲ ಎಂದು ತಿಳಿಸಿದರು.
ನೀರಿನ ದರ ಏರಿಕೆಯಾಗಿಲ್ಲ
ಸಚಿವ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳದ ಬಗ್ಗೆ ಕೇಳಿದಾಗ, ಜನಸಾಮಾನ್ಯರ ಮನೆಗಳ ನೀರಿನ ದರ ಏರಿಕೆ ಆಗಿಲ್ಲ. 2018ರಲ್ಲಿ ತೆಗೆದುಕೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಇತ್ತು. ಹೀಗಾಗಿ 2018ರಲ್ಲಿ ನಿಗದಿ ಮಾಡಿದಂತೆ ಕೈಗಾರಿಕೆಗಳ ನೀರಿನ ದರ ಏರಿಸಲಾಗಿದೆ. 2013ರಿಂದ ಇಲ್ಲಿಯವರೆಗೆ ಬೆಂಗಳೂರಿನ ಜನಸಾಮಾನ್ಯರು ಬಳಸುವ ನೀರಿನ ದರವನ್ನು ಏರಿಸಿಲ್ಲ. ಈಗ 2018ರ ಕಾನೂನನ್ನು ಸಕ್ರಮ ಮಾಡಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.