MP ಸ್ಥಾನದಿಂದ ಫೈಜಲ್ ಅನರ್ಹ
Team Udayavani, Oct 5, 2023, 12:53 AM IST
ಹೊಸದಿಲ್ಲಿ: ಕೊಲೆ ಯತ್ನ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪ ಕ್ಷೇತ್ರದ ಎನ್ಸಿಪಿ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದಾಗಿ ಬುಧವಾರ ಲೋಕಸಭಾ ಕಾರ್ಯಾಲಯ ತಿಳಿಸಿದೆ.
ಪ್ರಕರಣದಲ್ಲಿ ಫೈಜಲ್ ಅವರನ್ನು ದೋಷಿ ಎಂದು ಪರಿಗಣಿಸಿ, ಕವರಟ್ಟಿ ಸೆಷನ್ ನ್ಯಾಯಾಲಯ ಜ. 25ರಂದು 10 ವರ್ಷಗಳ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ, ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಫೈಜಲ್ ಸಲ್ಲಿಸಿದ್ದ ಅರ್ಜಿಯನ್ನು ಕೇರಳ ಹೈಕೋರ್ಟ್ ಅ.3ರ ಮಂಗಳವಾರ ವಜಾಗೊಳಿಸಿತ್ತು.
ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶವನ್ನು ಪರಿಗಣಿಸಿ, ಲೋಕಸಭಾ ಸಂಸದರಾದ ಮೊಹಮ್ಮದ್ ಫೈಜಲ್ ಅವರನ್ನು ಸಂಸದ ಸ್ಥಾನದಿಂದ ಅನರ್ಹ ಗೊಳಿಸಲಾಗಿದೆ. ಸೆಷನ್ ಕೋರ್ಟ್ ತೀರ್ಪು ನೀಡಿದ ದಿನದಿಂದಲೇ ಈ ಅನರ್ಹತೆಯನ್ನು ಪರಿಗಣಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅ. 10ಕ್ಕೆ ಬಿಧೂರಿ ವಿಚಾರಣೆ: ಸಂಸತ್ ವಿಶೇಷ ಅಧಿವೇಶನದಲ್ಲಿ ಬಿಎಸ್ಪಿ ಸಂಸದ ಡ್ಯಾನಿಷ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧೂರಿ ಅವಹೇಳನಾತ್ಮಕ ಪದ ಬಳಕೆ ಮಾಡಿರುವ ಪ್ರಕರಣ ಸಂಬಂಧಿಸಿದಂತೆ ಅ. 10ರಂದು ಹಕ್ಕುಚ್ಯುತಿ ಸಮಿತಿ ವಿಚಾರಣೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್ಪ್ರೆಸ್ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.