ಶಿವಣ್ಣ ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಕಾತರ
ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮ
Team Udayavani, Jul 10, 2020, 10:16 AM IST
ಜುಲೈ 12- ಇದು ಶಿವರಾಜ್ ಕುಮಾರ್ ಅಭಿಮಾನಿಗಳ ಪಾಲಿಗೆ ವಿಶೇಷ ದಿನ. ಕಾರಣವೇನೆಂಬುದನ್ನು ಹೊಸದಾಗಿ ಹೇಳುವ ಆಗತ್ಯವಿಲ್ಲ. ಹೌದು, ಜುಲೈ 12 ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ. ಶಿವಣ್ಣ ಹುಟ್ಟುಹಬ್ಬವನ್ನು ಅಭಿಮಾನಿಗಳು ದ್ಧೂರಿಯಾಗಿ ಆಚರಿಸುತ್ತಾರೆ. ಮುಂಚಿನ ದಿನ ರಾತ್ರಿಯಿಂದಲೇ ಮನೆ ಮುಂದೆ ಸೇರಿ ಕೇಕ್ ಕತ್ತರಿಸಿ ಸಂಭ್ರಮಿಸುತ್ತಾರೆ. ಆದರೆ ಈ ವರ್ಷ ಅಭಿಮಾನಿಗಳ ಆ ಸಂಭ್ರಮಕ್ಕೆ ಬ್ರೇಕ್ ಬಿದ್ದಿದೆ. ಕೋವಿಡ್ 19 ಎಂಬ ಮಹಾಮಾರಿ ಹುಟ್ಟುಹಬ್ಬದ ಸಂಭ್ರಮದಲ್ಲಿ ಜೊತೆಯಾಗಿ ಸೇರದಂತೆ ಮಾಡಿದೆ.
ಹಾಗಂತ ಅಭಿಮಾನಿಗಳು ಶಿವಣ್ಣ ಹುಟ್ಟುಹಬ್ಬವನ್ನು ಆಚರಿಸುವುದಿಲ್ಲ ಎಂದು ನೀವು ಭಾವಿಸುವಂತಿಲ್ಲ. ಏಕೆಂದರೆ ತಮ್ಮದೇ ಯಲ್ಲಿ ಅಭಿಮಾನಿಗಳು ಶಿವಣ್ಣ ಹುಟ್ಟುಹಬ್ಬ ಆಚರಿಸಲಿದ್ದಾರೆ. ಹುಟ್ಟುಹಬ್ಬಕ್ಕೆ ಇನ್ನೇನು ಕೆಲ ದಿನ ಬಾಕಿ ಇರುವಾಗಲೇ, ಶಿವಣ್ಣ ಅಭಿಮಾನಿಗಳು ಭರ್ಜರಿ ತಯಾರಿ ಶುರುಮಾಡಿದ್ದಾರೆ. ಒಂದೆಡೆ ಅಭಿಮಾನಿಗಳು ಸಿದ್ಧತೆ ಮಾಡಿಕೊಳ್ಳುತ್ತಿರುವಾಗಲೇ ಮತ್ತೊಂದೆಡೆ ನಟ ಕಿಚ್ಚ ಸುದೀಪ್ ಬರ್ತ್‌ಡೇ ಗೂ ಮೊದಲೇ ವಿಶೇಷ ಗಿಫ್ಟ್ ನೀಡುವ ಮೂಲಕ ಶುಭ ಕೋರಿದ್ದಾರೆ.
ಹೌದು, ನಟ ಶಿವರಾಜ್ ಕುಮಾರ್ ಕೋವಿಡ್ 19 ಕಾರಣದಿಂದಾಗಿ ಈ ಬಾರಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಅಲ್ಲದೆ ಹುಟ್ಟುಹಬ್ಬದ ದಿನ ಮನೆಯಲ್ಲಿ ಇರುವುದಿಲ್ಲ. ನನ್ನ ಹುಟ್ಟುಹಬ್ಬಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. ಇದರಲ್ಲಿ ನನ್ನ ಆರೋಗ್ಯಕ್ಕಿಂತ ನಿಮ್ಮ ಆರೋಗ್ಯ ಮುಖ್ಯ. ಕೋವಿಡ್ 19 ಪರಿಸ್ಥಿತಿ ಎಲ್ಲ ತಿಳಿಯಾದ ಮೇಲೆ ನಾವೆಲ್ಲರೂ ಭೇಟಿಯಾಗೋಣ ಇದು ನನ್ನ ಪ್ರಾಮಿಸ್ ಎಂದು ಶಿವಣ್ಣ ತಿಳಿಸಿದ್ದರು.
ಹೀಗಾಗಿ, ಅಭಿಮಾನಿಗಳು ಶಿವರಾಜಕುಮಾರ್ ಅವರ ಹುಟ್ಟುಹಬ್ಬವನ್ನು ಸಿಡಿಪಿ(ಕಾಮನ್ ಡಿಪಿ) ಮೂಲಕ ಸಾಮಾಜಿಕ ಜಾಲತಾಣಗಳಲ್ಲೇ ಸಂಭ್ರಮದಿಂದ ಆಚರಿಸಲು ನಿರ್ಧರಿಸಿದ್ದಾರೆ. ಈಗಾಗಲೇ ಈ ಸಿಡಿಪಿ ಸಿದ್ಧಪಡಿಸಲಾಗಿದ್ದು, ಇತ್ತೀಚೆಗೆ ಕಿಚ್ಚ ಸುದೀಪ್ ಇದನ್ನು ಬಿಡುಗಡೆ ಗೊಳಿಸಿದ್ದಾರೆ. ಸಿಡಿಪಿಯನ್ನು ಸ್ವತಃ ಕಿಚ್ಚ ಸುದೀಪ್ ತಮ್ಮ ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಟ್ವಿಟ್ಟರ್‌ನಲ್ಲಿ ಸಿಡಿಪಿ ಫೋಟೋ ಹಾಕಿ ಸಾಲುಗಳನ್ನು ಬರೆದಿರುವ ಕಿಚ್ಚ, ಜುಲೈ 12ರಂದು ಶಿವಣ್ಣನ ಹುಟ್ಟುಹಬ್ಬದ ಹಿನ್ನೆಲೆ ಅವರ ಅಭಿಮಾನಿ ಗಳು ಸಿಡಿಪಿ ಡಿಸೈನ್ ಮಾಡಿದ್ದು, ಇದನ್ನು ಬಿಡುಗಡೆಗೊ ಳಿಸಲು ಸಂತಸವಾಯಿತು ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್ ಶಿವಣ್ಣನಿಗೆ ಹುಟ್ಟುಹಬ್ಬಕ್ಕೆ ಮುಂಚಿತವಾಗಿ ವಿಶೇಷವಾಗಿ ಶುಭಾಶಯ ಕೋರಿದ್ದಾರೆ. ಇನ್ನು, ಈ ಬಾರಿ ಶಿವ ರಾಜ್ ಕುಮಾರ್ ಅವರ ಭಜರಂಗಿ 2 ಚಿತ್ರ ಅಭಿ ಮಾನಿ ಗಳಿಗೆ ಸರ್ಪ್ರೈಸ್ ನೀಡಲು ಮುಂದಾಗಿದೆ. ಈ ಬಗ್ಗೆ ಸ್ವತಃ ಚಿತ್ರತಂಡ ಟ್ವೀಟ್ ಮಾಡಿದೆ. ಇಷ್ಟು ದಿನ ಕೋವಿಡ್ ಮಹಾಮಾರಿಯಿಂದ ಏನೂ ಅಪ್ಡೆಟ್ ಕೊಡಲಿಲ್ಲ.
ಭಜರಂಗಿ ಅಂದ್ರೇನೆ ದುಷ್ಟ ಶಕ್ತಿಗಳ ಹುಟ್ಟಡಗಿಸೋ ಹೆಸರು. ಕೆಟ್ಟದ್ದ ನ್ನೆಲ್ಲಾ ಸಂಹಾರ ಮಾಡಿ ಹೊಸ ಶಕ್ತಿಯೊಂದಿಗೆ ಬರುತ್ತಿದ್ದೇವೆ. ಫಸ್ಟ್ ಲುಕ್ ಎಲ್ಲಾ ಆಯ್ತು. ಇವಾಗ ಹೊಸ ಸರ್‌ಪ್ರೈಸ್… ಎಲ್ಲಾ ಶಿವಣ್ಣನ ಅಭಿಮಾನಿಗಳಿಗೆ ಅವರ ಹುಟ್ಟುಹಬ್ಬದಂದು… ಎಂದು ಟ್ವೀಟ್ ಮಾಡುವ ಮೂಲಕ ಸಿನಿಮಾ ಬಗೆಗಿನ ಕುತೂಹಲ ಕಾಯ್ದಿರಿಸಿದೆ. ಕೋವಿಡ್ 19 ಮಾರಿ ಇದ್ದರೂ ತಮ್ಮ ನೆಚ್ಚಿನ ನಟನ ಹುಟ್ಟುಹಬ್ಬವನ್ನು ಸೋಶಿಯಲ್ ಮೀಡಿಯಾದಲ್ಲಿ ಅದ್ಧೂರಿಯಾಗಿ ಆಚರಿಸಲು ಮುಂದಾಗಿದೆ.
* ರವಿಪ್ರಕಾಶ್ ರೈ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.