ಕಾಯ್ದೆ ಅಮಾನತು ಪ್ರಸ್ತಾವ ತಿರಸ್ಕಾರ : ಕಾಯ್ದೆ ಸಂಪೂರ್ಣ ರದ್ದು ಮಾಡಲು ರೈತರ ಪಟ್ಟು
Team Udayavani, Jan 22, 2021, 6:20 AM IST
ಹೊಸದಿಲ್ಲಿ: ಕೇಂದ್ರ ಸರಕಾರ ಮತ್ತು ರೈತ ಸಂಘಟನೆಗಳ ನಡುವಿನ ಕೃಷಿ ಕಾಯ್ದೆಗಳ ಸಂಘರ್ಷ ನಿಲ್ಲುವ ಹಾಗೆ ಕಾಣಿಸುತ್ತಿಲ್ಲ.
ಬುಧವಾರದ ಮಾತುಕತೆ ವೇಳೆ 18 ತಿಂಗಳುಗಳ ಕಾಲ ಮೂರು ಕಾಯ್ದೆಗಳನ್ನು ಅಮಾನತಿನಲ್ಲಿಡುವ ಬಗ್ಗೆ ಕೇಂದ್ರ ಸರಕಾರ ಇಟ್ಟಿದ್ದ ಪ್ರಸ್ತಾವವನ್ನು ರೈತ ಸಂಘಟನೆಗಳು ತಿರಸ್ಕರಿಸಿವೆ. ಇದಕ್ಕೆ ಬದಲಾಗಿ ಮೂರು ಕಾಯ್ದೆಗಳನ್ನು ಸಂಪೂರ್ಣವಾಗಿ ರದ್ದು ಮಾಡಬೇಕು ಎಂದು ಪಟ್ಟು ಹಿಡಿದಿವೆ. ಈ ಬಗ್ಗೆ ಸಂಯುಕ್ತ ಕಿಸಾನ್ ಮೋರ್ಚಾ ಹೇಳಿಕೆ ಹೊರಡಿಸಿದೆ.
ಗುರುವಾರ ನಡೆದ ರೈತ ಸಂಘಟನೆಗಳ ಆಂತರಿಕ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಈ ಮಧ್ಯೆ ಶುಕ್ರವಾರ ಕೇಂದ್ರ ಸರಕಾರ ಮತ್ತು ರೈತ ಸಂಘಟನೆಗಳ ನಡುವೆ 11ನೇ ಸುತ್ತಿನ ಸಭೆ ನಡೆಯಲಿದೆ. ಬುಧವಾರ ಮಾತನಾಡಿದ್ದ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಶುಕ್ರವಾರದ ಸಭೆ ಅನಂತರ ರೈತರ ಪ್ರತಿಭಟನೆ ಅಂತ್ಯವಾಗಬಹುದು ಎಂದಿದ್ದರು.
ರೈತರ ಜತೆ ಸುಪ್ರೀಂ ಸಮಿತಿ ಮಾತುಕತೆ : ಈ ಮಧ್ಯೆ ಕೇಂದ್ರ ಸರಕಾರ ಮತ್ತು ರೈತ ಸಂಘಟನೆಗಳ ನಡುವೆ ಸಮನ್ವಯಕ್ಕಾಗಿ ಸುಪ್ರೀಂಕೋರ್ಟ್ ನೇಮಕ ಮಾಡಿರುವ ಸಮಿತಿ, ರೈತ ಮುಖಂಡರ ಜತೆ ಮಾತುಕತೆ ಶುರು ಮಾಡಿದೆ. ಗುರುವಾರ ಕರ್ನಾಟಕ, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ತಮಿಳುನಾಡು ಮತ್ತು ಉತ್ತರ ಪ್ರದೇಶ ರಾಜ್ಯಗಳ ರೈತ ಮುಖಂಡರ ಜತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದೆ. ಸಭೆಯಲ್ಲಿ ಸಮಿತಿಯ ಸದಸ್ಯರಾದ ಅನಿಲ್ ಘನಾವತ್, ಡಾ| ಅಶೋಕ್ ಗುಲಾತಿ ಮತ್ತು ಡಾ| ಪ್ರಮೋದ್ ಜೋಶಿ ಭಾಗಿಯಾಗಿದ್ದರು. ಈ ಸಭೆಯಲ್ಲಿ ಪಾಲ್ಗೊಂಡಿದ್ದ ರೈತರು ಕಾಯ್ದೆಯಲ್ಲಿನ ಅಂಶಗಳು ಹಾಗೂ ಜಾರಿ ಮಾಡುವ ಮುನ್ನ ಸುಧಾರಿಸಬೇಕಾದ ಅಂಶಗಳ ಬಗ್ಗೆ ಅಭಿಪ್ರಾಯ ಹಂಚಿಕೊಂಡಿದ್ದಾರೆ ಎಂದು ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಟ್ರ್ಯಾಕ್ಟರ್ ರ‍್ಯಾಲಿ ಖಚಿತ
ಗಣರಾಜ್ಯೋತ್ಸವದ ದಿನ ದಿಲ್ಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿಯೇ ತೀರುವುದಾಗಿ ರೈತರು ಪಟ್ಟು ಹಿಡಿದಿದ್ದಾರೆ. ದಿಲ್ಲಿ ಪೊಲೀಸರು ಮತ್ತು ರೈತರೇ ಈ ವಿಚಾರದಲ್ಲಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂಬ ಸುಪ್ರೀಂ ಕೋರ್ಟ್ ಸೂಚನೆ ಅನ್ವಯ, ಗುರುವಾರ ರೈತರು ಮತ್ತು ಪೊಲೀಸರು ಸಂಧಾನ ಮಾತುಕತೆ ನಡೆಸಿದರು. ದಿಲ್ಲಿ ಹೊರ ಭಾಗದಲ್ಲಿ ಟ್ರ್ಯಾಕ್ಟರ್ ರ‍್ಯಾಲಿ ನಡೆಸಿ ಎಂಬುದು ಪೊಲೀಸರ ಹೇಳಿಕೆ. ಆದರೆ ಇದಕ್ಕೆ ಒಪ್ಪದ ರೈತ ಮುಖಂಡರು, ದಿಲ್ಲಿಯ ಔಟರ್ ರಿಂಗ್ ರೋಡ್‌ನಲ್ಲಿಯೇ ರ‍್ಯಾಲಿ ನಡೆಸುವುದಾಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಗುರುವಾರದ ಮಾತುಕತೆ ಅಪೂರ್ಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.