ನಾಳೆ ಕೇಂದ್ರದ ವಿರುದ್ಧ ರೈತರ “ದಿಲ್ಲಿ ಚಲೋ”: 20 ಸಾವಿರಕ್ಕೂ ಅಧಿಕ ರೈತರು ಭಾಗಿ ಸಾಧ್ಯತೆ
ಹರಿಯಾಣದಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತ, ದಿಲ್ಲಿಯಲ್ಲಿ ಹೈಅಲರ್ಟ್, ಬಿಗಿಭದ್ರತೆ
Team Udayavani, Feb 12, 2024, 5:21 AM IST
ಹೊಸದಿಲ್ಲಿ: ಕನಿಷ್ಠ ಬೆಂಬಲ ಬೆಲೆ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸು ವಂತೆ ಕೇಂದ್ರದ ವಿರುದ್ಧ 200ಕ್ಕೂ ಅಧಿಕ ರೈತ ಸಂಘಟನೆಗಳು ಮಂಗಳವಾರ “ದಿಲ್ಲಿ ಚಲೋ” ನಡೆಸಲಿದೆ. ಈ ಹೋರಾಟವನ್ನು ಹತ್ತಿಕ್ಕಲು ಮುಂದಾಗಿರುವ ಹರಿಯಾಣ ಸರಕಾರವು ಏಳು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ನಿರ್ಬಂಧಿಸಿದ್ದು, ಪಂಜಾಬ್ ಗಡಿಯನ್ನು ಬಂದ್ ಮಾಡಿದೆ. ಇದೇ ವೇಳೆ, ದಿಲ್ಲಿ ಚಲೋದಲ್ಲಿ 20 ಸಾವಿರ ರೈತರು ಭಾಗಿಯಾಗುವ ನಿರೀಕ್ಷೆಯಿದೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ ಜಿಲ್ಲೆಗಳಲ್ಲಿ ರವಿವಾರ ಬೆಳಗ್ಗೆ 6ರಿಂದ ಮಂಗಳವಾರ ಮಧ್ಯರಾತ್ರಿಯವರೆಗೆ ಇಂಟರ್ನೆಟ್ ಸೇವೆ ಸ್ಥಗಿತಗೊಳಿಸಿ ಹರಿಯಾಣ ಸರಕಾರ ಆದೇಶಿಸಿದೆ. ಪಂಜಾಬ್ ರೈತರು ರಾಜ್ಯ ಪ್ರವೇಶಿಸುವುದನ್ನು ತಡೆಯುವ ಸಲುವಾಗಿ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಜನರು ಗುಂಪುಗೂಡುವುದನ್ನು ನಿಷೇಧಿಸಿ ಪಂಚಕುಲಾ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಒಂದೆಡೆ ರೈತ ಮುಖಂಡರನ್ನು ಚರ್ಚೆಗೆ ಆಹ್ವಾನಿಸಿರುವ ಸರಕಾರವು ದ್ವಿಮುಖ ನೀತಿ ಅನುಸರಿಸುತ್ತಿದೆ ಎಂದು ರೈತ ಸಂಘಟನೆಗಳು ಟೀಕಿಸಿವೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.