ಮುಚ್ಚಿದ ಸಕ್ಕರೆ ಕಾರ್ಖಾನೆ ಆರಂಭಿಸಿ :ಕಾರ್ಖಾನೆ ಬಂದ್‌ನಿಂದ ಸಾವಿರಾರು ಕಾರ್ಮಿಕರು ಬೀದಿಪಾಲು
Team Udayavani, Jan 17, 2021, 2:22 PM IST
ಬಾಗಲಕೋಟೆ: ರಾಜ್ಯದಲ್ಲಿ ಒಟ್ಟು 18 ಸಕ್ಕರೆ ಕಾರ್ಖಾನೆಗಳು ಆಡಳಿತದ ವೈಫಲ್ಯದಿಂದ ಬಾಗಿಲು ಮುಚ್ಚಿವೆ. ಇವುಗಳಲ್ಲಿ ದುಡಿಯುವ ಸುಮಾರು 1 ಲಕ್ಷ ಕಾರ್ಮಿಕರು ನಿರುದ್ಯೋಗಿಗಳಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಇವುಗಳನ್ನು ಮತ್ತೆ ಆರಂಭಿಸಲು ಸರ್ಕಾರ ಬೇಗನೆ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸಕ್ಕರೆ ಕಾರ್ಖಾನೆಗಳ ಮಹಾಮಂಡಳದ ಪದಾಧಿಕಾರಿಗಳು
ಸಕ್ಕರೆ ಸಚಿವ ಶಿವರಾಂ ಹೆಬ್ಟಾರ ಅವರನ್ನು ಬೆಳಗಾವಿ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮುಧೋಳ ರನ್ನ ನಗರದ ರೈತ ಸಹಕಾರಿ ಸಕ್ಕರೆ ಕಾರ್ಖಾನೆ, ಮಂಡ್ಯ ಸಕ್ಕರೆ ಕಾರ್ಖಾನೆ, ಬಾಗಲಕೋಟೆ ಜಿಲ್ಲೆಯ ರೈತ ಸಹಕಾರಿ ಸಕ್ಕರೆ ಕಾರ್ಖಾನೆ, ಭದ್ರಾವತಿಯ ಎಂ.ಪಿ.ಎಂ ಕಾರ್ಖಾನೆ, ಹಿರಿಯೂರು ಸಹಕಾರಿ ಸಕ್ಕರೆ ಕಾರ್ಖಾನೆ, ಸಾಲಾರ್ಜಂಗ್ ಸಕ್ಕರೆ ಕಾರ್ಖಾನೆ, ಶಿವಮೊಗ್ಗ ಸಕ್ಕರೆ ಕಾರ್ಖಾನೆ, ದಕ್ಷಿಣ ಕನ್ನಡ ಸಹಕಾರಿ ಸಕ್ಕರೆ ಕಾರ್ಖಾನೆ, ವಾಣಿ ವಿಳಾಸ ಸಕ್ಕರೆ ಕಾರ್ಖಾನೆ,
ಅಂಬಿಕಾ ಸಕ್ಕರೆ ಕಾರ್ಖಾನೆ, ಶಿವಸಾಗರ ಸಕ್ಕರೆ ಕಾರ್ಖಾನೆ ಬೇರೆ ಬೇರೆ ಕಾರಣಗಳಿಂದ ಸ್ಥಗಿತಗೊಂಡಿವೆ.
ಇದನ್ನೂ ಓದಿ:ಕೆವಾಡಿಯಾ ಏಕತಾ ಪ್ರತಿಮೆಗೆ ಸಂಪರ್ಕ ಕಲ್ಪಿಸುವ ಎಂಟು ರೈಲುಗಳಿಗೆ ಪ್ರಧಾನಿ ಚಾಲನೆ
ಇವುಗಳಲ್ಲಿ ದುಡಿಯುತ್ತಿದ್ದ ಸಾವಿರಾರು ಕಾರ್ಮಿಕರು ಬೀದಿಪಾಲಾಗಿದ್ದಾರೆ. ಅಲ್ಲಿಯ ಕಬ್ಬು ಬೆಳೆಗಾರರಿಗೂ ಬಹಳ ತೊಂದರೆಯಾಗಿದೆ. ಸರ್ಕಾರ ಮುಚ್ಚಿದ್ದ ಕಾರ್ಖಾನೆಗಳನ್ನು ಮತ್ತೆ ಆರಂಭಿಸಲು ಯೋಜನೆ ರೂಪಿಸಬೇಕೆಂದು ಒತ್ತಾಯಿಸಿದ್ದಾರೆ.
ರಾಜ್ಯ ಸಕ್ಕರೆ ಕಾರ್ಮಿಕರಿಗೆ 7ನೇ ವೇತನ ಶ್ರೇಣಿ ನಿಗದಿ ಪಡಿಸಬೇಕು. 6 ನೇ ವೇತನ ಶ್ರೇಣಿಯ ಅವಧಿ ಮುಗಿದು 2 ವರ್ಷಗಳು ಕಳೆದಿವೆ. ಕೆಲವು ಕಾರ್ಖಾನೆಗಳು 6 ನೇ ವೇತನ ಶ್ರೇಣಿ ಜಾರಿಮಾಡಿಲ್ಲ. ಈ ಬಗ್ಗೆ ಸಚಿವರು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.
ಮುಧೋಳ ತಾಲೂಕಿನ ರನ್ನ ಸಕ್ಕರೆ ಕಾರ್ಖಾನೆ ಪ್ರಸಕ್ತ ಹಂಗಾಮಿನಲ್ಲಿ ಸ್ಥಗಿತಗೊಂಡಿದೆ. ಕಾರ್ಮಿಕರಿಗೆ ಕಳೆದ 6 ತಿಂಗಳಿಂದ ಸಂಬಳ ದೊರೆತಿಲ್ಲ. ಈ ಕಾರ್ಖಾನೆಯ ಪುನಃ ಆರಂಭಕ್ಕೆ ಬೇಗನೆ ಕ್ರಮ ಕೈಗೊಳ್ಳಬೇಕೆಂದು ಮನವಿಯಲ್ಲಿ ಕೋರಿದ್ದಾರೆ. ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಯ ಮಹಾಮಂಡಲದ ಕಾರ್ಯಾಧ್ಯಕ್ಷ ಬಸವರಾಜ ಪೂಜಾರಿ, ಉಪಾಧ್ಯಕ್ಷ ರಾಜೇಸಾಬ
ನದಾಫ, ರೈತರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಐ.ಜಿ ಪಾಟೀಲ, ಪದಾಧಿಕಾರಿಗಳಾದ ಪ್ರಕಾಶ ಕಬ್ಬೂರ, ನಾಗಪ್ಪ ಕೆಳಗಡೆ, ಪಾಂಡು ಮುಳ್ಳೂರ, ಭೀಮಾಶಂಕರ ಗಲಗಲಿ, ಉಮೇಶ ಬಡಿಗೇರ, ಕಲ್ಲಪ್ಪ ಕಂಬಾರ, ಸಿ.ಎ ದೇಸಾಯಿ, ಗೋವಿಂದ ಅವರಾಧಿ, ಆರ್.ಕೆ ಹಲಗತ್ತಿ ಮತ್ತು ಎಚ್.ಎಸ್ ಪಾಟೀಲ ಹಾಗೂ ಎಸ್. ನಿಜಲಿಂಗಪ್ಪ ಸಕ್ಕರೆ ಸಂಸ್ಥೆಯ ಉಪಾಧ್ಯಕ್ಷ ಅಶೋಕ ಪಾಟೀಲ, ಆಡಳಿತ ಮಂಡಳಿಯ ಸದಸ್ಯ ಮಲ್ಲಿಕಾರ್ಜುನ ಹೆಗ್ಗಳಗಿ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್
Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.