ರೈತರು ತಮ್ಮ ಆದಾಯ ದ್ವಿಗುಣದತ್ತ ಆಲೋಚನೆ ಮಾಡಬೇಕು: ಕೃಷಿ ಸಚಿವ ಬಿ.ಸಿ.ಪಾಟೀಲ್
Team Udayavani, May 14, 2022, 6:35 PM IST
ಬೆಂಗಳೂರು: ರೈತರು ಕೇವಲ ಕೃಷಿಯಲ್ಲಿ ತೊಡಗಿಕೊಂಡರೆ ಸಾಲದು ಬದಲಾಗಿ ತಮ್ಮ ಆದಾಯ ದ್ವಿಗುಣದತ್ತ ಆಲೋಚನೆ ಮಾಡಬೇಕಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಕೃಷಿ ಮಾರಾಟ ಸಹಕಾರ ಮತ್ತು ಮತ್ತು ವ್ಯವಹಾರ ನಿರ್ವಾಹಣೆ ವಿಭಾಗದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕೃಷಿ ಉದ್ಯಮ ನಾವೀನ್ಯತೆ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೈತರು ಕೇವಲ ಕೃಷಿಯಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವತ್ತ ಗಮನಹರಿಸಿದರೆ ಸಾಲದು.ಇದರ ಜತೆಗೆ ಕೃಷಿ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಆದಾಯ ಗಳಿಸುವತ್ತ ಗಮನವಹಿಸಬೇಕು ಎಂದು ಮನವಿ ಮಾಡಿದರು. ಮುಖ್ಯಮಂತ್ರಿಗಳ ಕನಸಿನ ಕೂಸಾದ ಮಾಧ್ಯಮಿಕ ಕೃಷಿಯತ್ತ ಯೋಚಿಸಿ ಆಲೋಚಿಸಿ ಮುಂದುವರೆಯುವುದು ಅತ್ಯಂತ ಅವಶ್ಯಕ. ಇದರಿಂದಾಗಿ ಮಧ್ಯವರ್ತಿಗಳ ಆವಳಿ ತಪ್ಪಿಸಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಲಗ್ಗೆಯಿಡಲು ಸಾದ್ಯವಾಗುತ್ತದೆ ಎಂದು ಹೇಳಿದರು.
ಬೆಂಗಳೂರು ಕೃಷಿ ವಿವಿಯ ಕುಲಪತಿ ಡಾ.ಎಸ್.ರಾಜೇಂದ್ರ ಪ್ರಸಾದ್, ಕೃಷಿ ಪದವಿಧರರು ಸರ್ಕಾರಿ ಉದ್ಯೋಗಕ್ಕಾಗಿ ಕಾಯದೆ ಸ್ವಯಂ ಉದ್ಯೋಗಿಗಳಾಗಲು ದೃಢ ಹೆಜ್ಜೆಯಿಸಬೇಕು ಎಂದು ಸಲಹೆ ನೀಡಿದರು.
ಇತ್ತೀಚಿನ ದಿನಗಳಲ್ಲಿ ಸ್ವಯಂ ಉದ್ಯೋಗಿಗಳಾಗಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ರೂಪಿಸಿವೆ. ಸಾಲದ ಸೌಕರ್ಯ ಮತ್ತು ಸಹಾಯ ಧನ ಸೌಲಭ್ಯವನ್ನು ನೀಡಲಾಗುತ್ತಿದೆ. ಆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಅಗ್ರಿಕ್ಲಿನಿಕ್ ಮತ್ತು ಅಗ್ರಿಬಿಸಿನೆಸ್ ಕೋರ್ಸ್‌ಗೆ ನೊಂದಣಿ ಮಾಡಿಕೊಂಡು ಕೃಷಿಯಲ್ಲಿ ನೂತನ ಆವಿಷ್ಕಾರ ಮಾಡುವಂತೆ ಮನವಿ ಮಾಡಿದರು.
ಇದೇ ವೇಳೆ ಅಂತಿಮ ವರ್ಷದ ವಿದ್ಯಾರ್ಥಿಗಳ ಜ್ಞಾನ, ಕೌಶಲ್ಯ ಮತ್ತು ವ್ಯವಹಾರ ಪ್ರೌಡಿಮೆಯನ್ನು ಪ್ರದರ್ಶಿಸಲು ವೇದಿಕೆ ಕಲ್ಪಿಸಲಾಗಿತ್ತು. ಕೃಷಿ ಮಾರುಕಟ್ಟೆ, ಅಗ್ರಿಟೆಕ್, ಡಿಜಿಟಲ್ ಮಾರ್ಕೆಟಿಂಗ್‌ನಲ್ಲಿ ನೂತನ ಎಂಟು ಅವಿಷ್ಕಾರಗಳನ್ನು ಪ್ರದರ್ಶಿಸಲಾಯಿತು. ಕುಲಸಚಿವ ಡಾ.ಬಸವೇಗೌಡ,ಡೀನ್ (ಕೃಷಿ)ಡಾ.ಎನ್.ಬಿ. ಪ್ರಕಾಶ್, ಪ್ರಾಧ್ಯಾಪಕ , ಡಾ. ಎಂ.ಎಸ್.ಗಣಪತಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.