ಗ್ಯಾರಂಟಿಗಳಿಗೆ ಜನರ ಪ್ರತಿಕ್ರಿಯೆ ನೋಡಿ ಭಯದಿಂದ BJPಯವರ ಆರೋಪ: S.S. ಮಲ್ಲಿಕಾರ್ಜುನ್
Team Udayavani, Aug 11, 2023, 9:37 PM IST
ದಾವಣಗೆರೆ: ಕಾಂಗ್ರೆಸ್ ಸರ್ಕಾರ ಕೊಡುತ್ತಿರುವ ಐದು ಗ್ಯಾರಂಟಿ ಯೋಜನೆಗಳಿಗೆ ಜನರ ಪ್ರತಿಕ್ರಿಯೆ ನೋಡಿ ಭಯದಿಂದ ಬಿಜೆಪಿಯವರು ಏನೇನೋ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ದೂರಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಐದು ಗ್ಯಾರಂಟಿ ನೀಡುವ ಭರವಸೆ ಯಂತೆ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಜಾರಿ ಮಾಡಲಾಗಿದೆ. ಮನೆ ಯಜಮಾನಿಗೆ ೨ ಸಾವಿರ ರೂಪಾಯಿ ಕೊಡುವ ಗೃಹಲಕ್ಷ್ಮಿ ಯೋಜನೆಗೆ ಆ. ೨೭ ರಂದು ಚಾಲನೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಯುವ ನಿಽ ಪ್ರಾರಂಭಿಸಲಾಗುವುದು. ಇದರಿಂದ ಭಯಗೊಂಡಿರುವ ಬಿಜೆಪಿಯವರು ಏನೇನೋ ಆರೋಪ ಮಾಡುತ್ತಿ ದ್ದಾರೆ ಎಂದು ತಿಳಿಸಿದರು.
ಕೃಷಿ ಸಚಿವ ಚಲುವರಾಯಸ್ವಾಮಿ ಯಾವ ಕಮಿಷನ್ ತೆಗೆದುಕೊಂಡಿಲ್ಲ. ಆದರೂ ಅವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗುತ್ತಿದೆ. ಗುತ್ತಿಗೆದಾರರಿಂದ ನಮ್ಮ ಕಾಂಗ್ರೆಸ್‌ನವರು ಯಾರೂ ಕಮಿಷನ್ ತೆಗೆದು ಕೊಂಡಿಲ್ಲ. ನಮ್ಮಲ್ಲಿ ಕಮಿಷನ್ ಪಡೆಯುವಂತವಹರು ಯಾರೂ ಇಲ್ಲ. ಎಲ್ಲರೂ ಪ್ರಾಮಾಣಿಕವಾಗಿ ಅಭಿವೃದ್ಧಿ ಕೆಲಸ ಮಾಡುತ್ತಿದ್ದಾರೆ. ಬರೀ ಮೂರು ತಿಂಗಳಲ್ಲಿ ಒಳ್ಳೆಯ ಹೆಸರು ಬರುತ್ತಿದೆ ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.
ನಮ್ಮ ತಂದೆಯವರು(ಶಾಮನೂರು ಶಿವಶಂಕರಪ್ಪ) ಲೋಕಸಭಾ ಚುನಾವಣಾ ಟಿಕೆಟ್ ಕೇಳುತ್ತೇನೆ. ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿರುವುದು ಅವರ ವೈಯಕ್ತಿಕ. ನಾನೂ ಸಹ ಟಿಕೆಟ್ ಕೊಟ್ಟರೆ ಸ್ಪರ್ಧೆ ಮಾಡುತ್ತೇನೆ. ಈಚೆಗೆ ನಡೆದ ಸಭೆಯಲ್ಲಿ ನನಗೂ ಲೋಕಸಭಾ ಚುನಾವಣೆಯಲ್ಲಿ ಸ್ಪಽಸುವ ಬಗ್ಗೆ ಕೇಳಲಾಯಿತು. ಪಕ್ಷದ ಕಾರ್ಯಕರ್ತರು ಹೇಗೆ ಹೇಳುತ್ತಾರೋ ಹಾಗೆ ಕೇಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
Davangere: ಮಹಿಳೆಯ ಮೇಲೆ ಕರಡಿ ದಾಳಿ
Congress Govt.,: ಅಬಕಾರಿ ಡೀಲರ್‌ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
Davanagere: ವಿಶೇಷ ತೆರಿಗೆ ಕಾರ್ಯಾಚರಣೆ: ಒಂದೇ ದಿನ 1.65 ಕೋಟಿ ತೆರಿಗೆ ಸಂಗ್ರಹ
Davanagere: ಅಸೆಂಬ್ಲಿ ಅಧಿವೇಶನಕ್ಕೆ ಮೊದಲು ಸಿದ್ದರಾಮಯ್ಯ ರಾಜೀನಾಮೆ: ಆರ್.ಅಶೋಕ್
MUST WATCH
ಹೊಸ ಸೇರ್ಪಡೆ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.