ಬಿಜೆಪಿ ಕಚೇರಿ ಭೇಟಿಗೆ ಕೆಲ ಸಚಿವರ ಹಿಂದೇಟು?

Team Udayavani, Feb 24, 2020, 3:09 AM IST

bjp-logo-2

ಬೆಂಗಳೂರು: ವಿವಿಧ ಇಲಾಖೆಯ ಸಚಿವರು ಸುಲಭವಾಗಿ ಕಾರ್ಯಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಲಭ್ಯವಾಗಬೇಕೆಂಬ ಸದುದ್ದೇಶದಿಂದ ಬಿಜೆಪಿ ಕೇಂದ್ರ ಕಚೇರಿಗೆ ವಾರಕ್ಕೆ ಓರ್ವ ಸಚಿವ ಭೇಟಿ ನೀಡಬೇಕು ಎಂಬ ಸೂಚನೆಯನ್ನು ರಾಜ್ಯಾಧ್ಯಕ್ಷರೇ ನೀಡಿದ್ದರೂ, ಪಾಲನೆ ಮಾತ್ರ ಸಮರ್ಪಕವಾಗಿ ಆಗುತ್ತಿಲ್ಲ.

ಹೀಗಾಗಿ ಕಾರ್ಯಕ್ರಮದ ರೂಪುರೇಷೆಯಲ್ಲೆ ಕೆಲವೊಂದು ಬದಲಾವಣೆ ಮಾಡಿ, ಸಚಿವರನ್ನು ಕಚೇರಿಗೆ ಕರತಲು ವಿಭಿನ್ನ ಪ್ರಯತ್ನಕ್ಕೆ ರಾಜ್ಯ ಬಿಜೆಪಿ ಮುಂದಾಗಿದೆ. ವಾರದಲ್ಲಿ ಯಾವುದಾದರೂ ಒಂದು ದಿನ ಓರ್ವ ಸಚಿವ ಬಿಡುವು ಮಾಡಿಕೊಂಡು ಕಚೇರಿಗೆ ಬರಬೇಕು. ಅದಕ್ಕಾಗಿ ಸಚಿವರ ತಿಂಗಳ ಪ್ರವಾಸದಲ್ಲೇ ಇದನ್ನು ಸೇರಿಸಿ, ಪೂರ್ವನಿಗದಿಯ ಕಾರ್ಯಕ್ರಮದಂತೆ ಕಾರ್ಯರೂಪಕ್ಕೆ ತರಲು ಗಂಭೀರ ಚಿಂತನೆ ನಡೆಯುತ್ತಿದೆ ಮತ್ತು ಮುಂದಿನ ವಾರದಿಂದಲೇ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯೂ ಇದೆ ಎಂದು ಬಿಜೆಪಿಯ ಉನ್ನತ ಮೂಲ ಖಚಿತಪಡಿಸಿದೆ.

ಬಿಜೆಪಿ ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದಿದೆ. ಆದರೂ, ಬಹುತೇಕ ಸಚಿವರು ಕಚೇರಿಗೆ ಬಂದು ಹೋಗಿರುವುದು ಬಿಟ್ಟರೆ ಕಾರ್ಯಾಲಯದಲ್ಲಿ ಕುಳಿತು ಕಾರ್ಯಕರ್ತರ ಅಹವಾಲನ್ನು ಆಲಿಸಿಲ್ಲ. ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಅವರು ಈಗಾಗಲೇ ನಾಲ್ಕು ಬಾರಿ, ಚಿಕ್ಕಮಗಳೂರು ನಗರದ ಶಾಸಕರಾಗಿರುವ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಮೂರು ಬಾರಿ, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ, ಗಣಿ ಸಚಿವ ಸಿ.ಸಿ.ಪಾಟೀಲ್‌, ಪಶುಸಂಗೋಪನಾ ಸಚಿವ ಪ್ರಭು ಚೌವ್ಹಾಣ್‌ ಹಾಗೂ

-ಮುಜರಾಯಿ ಮತ್ತು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಈಗಾಗಲೇ ತಲಾ 2 ಬಾರಿ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಕುಂದುಕೊರತೆ ನೀಗಿಸುವ ನಿಟ್ಟಿನಲ್ಲಿ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ಅಲ್ಲದೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಸಹಿತವಾಗಿ ಕೆಲವು ಸಚಿವರು ಒಂದೊಂದು ಬಾರಿ ಭೇಟಿ ನೀಡಿದ್ದಾರೆ. ಕಾನೂನು ಸಚಿವ ಮಾಧುಸ್ವಾಮಿ ಸಹಿತವಾಗಿ ಕೆಲವು ಬೆಂಗಳೂರಿನ ಮತ್ತು ಉತ್ತರ ಕರ್ನಾಟಕ ಭಾಗದ ಸಚಿವರು ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಸ್ವೀಕರಿಸಿಲ್ಲ ಎಂದು ಬಿಜೆಪಿ ಮೂಲಗಳು ಖಚಿತಪಡಿಸಿವೆ.

ನೂತನ ಸಚಿವರು ಬಂದು ಹೋಗಿದ್ದು ಮಾತ್ರ!: ಎರಡು ವಾರಗಳ ಹಿಂದೆ ಸಂಪುಟ ಸೇರಿಕೊಂಡಿರುವ ನೂತನ ಸಚಿವರಾದ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವರಾಜ, ನಾರಾಯಣ ಗೌಡ. ಆನಂದ ಸಿಂಗ್‌, ಶ್ರೀಮಂತ ಪಾಟೀಲ್‌, ಗೋಪಾಲಯ್ಯ, ಶಿವರಾಮ್‌ ಹೆಬ್ಟಾರ್‌, ಬಿ.ಸಿ.ಪಾಟೀಲ್‌, ಡಾ.ಸುಧಾಕರ್‌ ಅವರು ಈಗಾಗಲೇ ಪಕ್ಷದ ಕಚೇರಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೆ, ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಅವರನ್ನು ಭೇಟಿ ಮಾಡಲು ಪಕ್ಷದ ಕಚೇರಿಗೆ ಕೆಲವರು ಹೋಗಿದ್ದರು. ಆದರೆ, ಸಣ್ಣ ನೀರಾವರಿ ಸಚಿವರಾದ ರಮೇಶ್‌ ಜಾರಕಿಹೊಳಿಯವರು ಪಕ್ಷದ ಕಚೇರಿಗೆ ಇನ್ನೂ ಭೇಟಿ ನೀಡಿಲ್ಲ ಎಂದು ಬಿಜೆಪಿಯ ಹಿರಿಯ ಕಾರ್ಯಕರ್ತರೊಬ್ಬರು ಮಾಹಿತಿ ನೀಡಿದರು.

ಅಧ್ಯಕ್ಷರ ಸೂಚನೆ ಏನಾಗಿತ್ತು?: ಪಕ್ಷದ ಕಚೇರಿಗೆ ವಾರಕ್ಕೆ ಒರ್ವ ಸಚಿವರು ಭೇಟಿ ನೀಡಿ, ಕಾರ್ಯಕರ್ತರ ಕುಂದುಕೊರತೆ ಆಲಿಸಬೇಕು. ಕಾರ್ಯಕರ್ತರು ಯಾವೆಲ್ಲ ರೀತಿಯ ಸಮಸ್ಯೆ ಎದುರಿಸುತ್ತಿದ್ದಾರೆ ಎಂಬುದನ್ನು ಹತ್ತಿರದಿಂದ ಅರಿಯಬೇಕು. ಸಾಮಾನ್ಯ ಜನರು, ಬಿಜೆಪಿ ಬೆಂಬಲಿಗರು ಮತ್ತು ಹಿತೈಶಿಗಳು ಆಗಾಗ್ಗೆ ಪಕ್ಷದ ಕಚೇರಿಗೆ ಬರುತ್ತಿರುವುದರಿಂದ ಸಚಿವರನ್ನು ಭೇಟಿ ಮಾಡಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ವಾರಕ್ಕೆ ಒಮ್ಮೆ ಓರ್ವ ಸಚಿವ ಪಕ್ಷದ ಕಚೇರಿಗೆ ಬಂದು ಕಾರ್ಯಕರ್ತರ ಅಹವಾಲು ಸ್ವೀಕರಿಸಬೇಕು ಎಂದು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಈ ಹಿಂದೆ ನಿರ್ದೇಶನ ನೀಡಿದ್ದರು. ಆದರೆ, ಈ ಸೂಚನೆ ಮೂಲ ಬಿಜೆಪಿಗರಲ್ಲಿ ಸಚಿವರಾದ ಕೆಲವರು ಮಾತ್ರ ಪಾಲನೆ ಮಾಡುತ್ತಿದ್ದು, ಇನ್ನು ಕೆಲವರು ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಬಿಜೆಪಿ ಕಾರ್ಯಕರ್ತರೇ ಆರೋಪಿಸುತ್ತಿದ್ದಾರೆ.

* ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

FIR 6 to 6 Kannada movie

FIR 6to6 movie: ಆ್ಯಕ್ಷನ್‌ ಚಿತ್ರದಲ್ಲಿ ವಿಜಯ ರಾಘವೇಂದ್ರ

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹತ್ಯೆ…

Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…

Belagavi; It hurts a lot, I won’t be afraid even if a hundred CT Ravi comes: Lakshmi Hebbalkar

Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.