ಬೇಡಿಕೆಗೆ ಸ್ಪಂದಿಸದಿದ್ದರೆ ಉಗ್ರ ಹೋರಾಟ


Team Udayavani, Sep 16, 2019, 3:08 AM IST

bedikege

ಬಾಗಲಕೋಟೆ: ಪ್ರವಾಹ ಬಂದು 48 ದಿನ ಕಳೆದರೂ ನೆರೆ ಸಂತ್ರಸ್ತರಿಗೆ ಯೋಗ್ಯ ಪರಿಹಾರ ನೀಡುವ ಕುರಿತು ಸ್ಪಷ್ಟ ನಿರ್ಧಾರ ಕೈಗೊಳ್ಳದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಉತ್ತರ ಕರ್ನಾಟಕದ 8 ಜಿಲ್ಲೆಗಳ ನೆರೆ ಸಂತ್ರಸ್ತರು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. 11 ಅಂಶಗಳ ಪ್ರಮುಖ ಬೇಡಿಕೆಗೆ ಸ್ಪಂದಿಸದೆ ಇದ್ದರೆ ಇಡೀ ರಾಜ್ಯ ಹೊತ್ತಿ ಉರಿಯಲಿದೆ. 1980ರ ದಶಕದ ರೈತ ಚಳವಳಿ ಪುನಃ ಆರಂಭಗೊಳ್ಳಲಿದೆ ಎಂದು ಒಕ್ಕೊರಲಿನ ಎಚ್ಚರಿಕೆಯನ್ನು ಭಾನುವಾರ ರವಾನಿಸಿದ್ದಾರೆ.

ನವನಗರದ ಕಾಳಿದಾಸ ಕಾಲೇಜು ಮೈದಾನದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ-ಹಸಿರು ಸೇನೆ, ಭಾರತೀಯ ಕಿಸಾನ್‌ ಸಂಘ, ಕರವೇ, ಉತ್ತರ ಕರ್ನಾಟಕ ಅಭಿವೃದ್ಧಿ ವೇದಿಕೆ, ಜನ ಜಾಗೃತಿ ವೇದಿಕೆ ಸೇರಿದಂತೆ ಸುಮಾರು 10ಕ್ಕೂ ವಿವಿಧ ಪ್ರಗತಿಪರ ಸಂಘಟನೆಗಳ ನೇತೃತ್ವದಲ್ಲಿ ನಡೆದ ಉತ್ತರ ಕರ್ನಾಟಕದ 8 ಜಿಲ್ಲೆಗಳ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನದಲ್ಲಿ 11 ಪ್ರಮುಖ ನಿರ್ಣಯ ಕೈಗೊಳ್ಳಲಾಯಿತು.

ಬೆಳಗ್ಗೆ 11ಕ್ಕೆ ಆರಂಭಗೊಂಡ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನ ಸಂಜೆವರೆಗೂ ನಡೆಯಿತು. ಸರ್ಕಾರದ ಪರವಾಗಿ ಜಿಲ್ಲಾಧಿಕಾರಿ ಆರ್‌. ರಾಮಚಂದ್ರನ್‌ ಮನವಿ ಪಡೆದರು. ಇದಕ್ಕೂ ಮುಂಚೆ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನವನ್ನು ಐದು ಜನ ನೆರೆ ಸಂತ್ರಸ್ತ ಮಹಿಳೆಯರು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿದರು.

ಪ್ರಮುಖ ನಿರ್ಣಯಗಳು
* ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಬೇಕು. ಪ್ರವಾಹ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಜತೆಗೆ ಹರಿದು ಬರುವ ಪ್ರವಾಹದ ಹೆಚ್ಚುವರಿ ನೀರನ್ನು ತಿರುಗಿಸಿ, ಕೃಷಿ ಮತ್ತು ಇತರೆ ಜನ ಬಳಕೆಗೆ ಬಳಸಲು ದೀಘ್ರ ಕಾಲಿಕ ಯೋಜನೆ ಜಾರಿಗೊಳಿಸಬೇಕು.

* ಪ್ರವಾಹಕ್ಕೆ ಒಳಗಾದ ಗ್ರಾಮಗಳನ್ನು ಕೃಷ್ಣಾ ಮೇಲ್ದಂಡೆ ಯೋಜನೆ ಮಾದರಿ ಪರಿಹಾರ ನೀಡಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಬೇಕು. ಎಲ್ಲ ನಾಗರಿಕ ಸೌಲಭ್ಯ ತುರ್ತಾಗಿ ಒದಗಿಸಬೇಕು. ಆಲಮಟ್ಟಿ ಜಲಾಶಯವನ್ನು 524.256 ಮೀಟರ್‌ಗೆ ಎತ್ತರಿಸಿದಾಗ ಮುಳುಗಡೆಯಾಗುವ ಎಲ್ಲಾ ಪ್ರದೇಶವನ್ನು ಸ್ಥಳಾಂತರಿಸಬೇಕು. ರಾಷ್ಟ್ರೀಯ ಪುನರ್‌ವಸತಿ ನೀತಿ ಅನ್ವಯ ಪರಿಹಾರ, ಶಾಶ್ವತ ಪುನರ್‌ವಸತಿ ಕಲ್ಪಿಸಬೇಕು.

* ಪ್ರವಾಹದಿಂದ ರೈತರ ಬೆಳೆ ನಾಶವಾಗಿದ್ದು, ವೈಜ್ಞಾನಿಕವಾಗಿ ಪೂರ್ಣ ನಷ್ಟಕ್ಕೆ ಪರಿಹಾರ ಕೊಡಬೇಕು. ಒಂದು ಎಕರೆ ಕಬ್ಬಿಗೆ 1 ಲಕ್ಷ, ದಾಳಿಂಬೆ, ದ್ರಾಕ್ಷಿ, ಬಾಳೆ, ಪೇರಲ, ಅರಿಶಿಣ, ಉಳ್ಳಾಗಡ್ಡಿ, ಸೂರ್ಯಕಾಂತಿ, ಹತ್ತಿ, ಗೋವಿನ ಜೋಳ ಮುಂತಾದ ಬೆಳೆಗೆ ಹಾನಿಗೆ ಎಕರೆಗೆ 50 ಸಾವಿರ, ಕುರಿ-ಮೇಕೆ ಹಾನಿಗೆ 20 ಸಾವಿರ ಪರಿಹಾರ ನೀಡಬೇಕು. ಸರ್ಕಾರ ಸದ್ಯ ನಡೆಸಿರುವ ಸಮೀಕ್ಷೆಯಲ್ಲಿ ಲೋಪಗಳಿದ್ದು, ಪುನರ್‌ ಸಮೀಕ್ಷೆ ನಡೆಸಬೇಕು.

* ಪ್ರವಾಹ ಪೀಡಿತ ಪ್ರದೇಶದ ರೈತರು ಪಡೆದ ಕೃಷಿ, ಬೆಳೆ ಸಾಲ ಮತ್ತು ಮಹಿಳಾ ಸ್ವಸಹಾಯ ಸಂಘಗಳು, ಸಣ್ಣ-ಪುಟ್ಟ ವ್ಯಾಪಾರಸ್ಥರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಹೊಸದಾಗಿ ಶೂನ್ಯ ಬಡ್ಡಿ ದರದಲ್ಲಿ ದೀರ್ಘಾವಧಿ ಸಾಲ ನೀಡಬೇಕು.

* ಸಂತ್ರಸ್ತರಿಗೆ ಪರಿಹಾರ ನೀಡಲು ಇರುವ ಕೇಂದ್ರದ ಎನ್‌ಡಿಆರ್‌ಎಫ್‌ ಮತ್ತು ರಾಜ್ಯದ ಎಸ್‌ಡಿಆರ್‌ಎಫ್‌ ಮಾರ್ಗ ಸೂಚಿ ಅವೈಜ್ಞಾನಿಕವಾಗಿದ್ದು, ತಿದ್ದುಪಡಿ ಮಾಡಬೇಕು.

* ಪ್ರವಾಹದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮೂಲಭೂತ ಸೌಲಭ್ಯಗಳಿರುವ ಶೆಡ್‌ ನಿರ್ಮಿಸಬೇಕು. ಶಾಶ್ವತ ವ್ಯವಸ್ಥೆ ಆಗುವವರೆಗೂ ಮನೆ ಬಾಡಿಗೆ ಪಡೆದಿರುವ ಎಲ್ಲರಿಗೂ ಮಾಸಿಕ 10 ಸಾವಿರ ಬಾಡಿಗೆ ಕೊಡಬೇಕು.

* ಪ್ರವಾಹದಿಂದ ರೈತರ ಹೊಲಗಳ ಒಡ್ಡು ಒಡೆದು ಮಣ್ಣು ಕೊಚ್ಚಿಕೊಂಡು ಹೋಗಿದೆ. ಜಮೀನು ಮೂಲ ಸ್ವರೂಪವನ್ನೇ ಕಳೆದುಕೊಂಡಿವೆ. ಅವು ಪುನಃ ಸುಸ್ಥಿತಿಗೆ ತರಲು ತಗಲುವ ವೆಚ್ಚವನ್ನು ಸರ್ಕಾರ ಭರಿಸಬೇಕು.

* ಸಂತ್ರಸ್ತರಿಗೆ ಕನಿಷ್ಠ 1 ವರ್ಷದವರೆಗೆ ಉಚಿತವಾಗಿ ಪಡಿತರ ನೀಡಬೇಕು. ಜೀವನ ನಿರ್ವಹಣೆಗಾಗಿ ಪ್ರತಿ ಕುಟುಂಬಕ್ಕೆ ಮಾಸಿಕ 15 ಸಾವಿರ ಭತ್ಯೆ ನೀಡಬೇಕು. ವಿದ್ಯಾರ್ಥಿಗಳ ಶಾಲಾ-ಕಾಲೇಜು ಶುಲ್ಕ, ವಸತಿ ನಿಯಗಳ ಶುಲ್ಕ ಭರಿಸಬೇಕು. ಪ್ರವಾಹ ಪಿಡೀತ ಪ್ರದೇಶಗಳಲ್ಲಿ ಕಾಯಂ ಆಸ್ಪತ್ರೆ ಇಲ್ಲದ ಪ್ರದೇಶಗಳಲ್ಲಿ ಸಂಚಾರಿ ಆಸ್ಪತ್ರೆಗಳನ್ನು 24 ಗಂಟೆ ಕಲ್ಪಿಸಬೇಕು.

* ಸಂತ್ರಸ್ತರ ಮನೆಯಲ್ಲಿ ಮದುವೆ ಕಾರ್ಯ ನಿಶ್ಚಯಿಸಿದಲ್ಲಿ ಕನಿಷ್ಠ ಒಂದು ವರ್ಷದೊಳಗೆ ಸರಳ ಮದುವೆ ವೆಚ್ಚವನ್ನು ಸರ್ಕಾರ ನೀಡಬೇಕು. ವೃದ್ಧಾಪ್ಯ, ವಿಧವಾ ವೇತನ, ಬಾಣಂತಿಯರ ಗೌರವಧನ, ಪ್ರತಿ ತಿಂಗಳು ಕಡ್ಡಾಯವಾಗಿ ನೀಡಬೇಕು. ಪ್ರವಾಹ ಪ್ರದೇಶದ ರೈತರಿಗೆ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡಿರುವ ಕಬ್ಬಿನ ಬಾಕಿ ಕೊಡಿಸಬೇಕು.

* ನೆರೆ ಪೀಡಿತ ಗ್ರಾಮಗಳಲ್ಲಿ ಹಾನಿಯಾದ ಮನೆ ಹಾಗೂ ಬೆಳೆಗೆ ಯೋಗ್ಯ ಪರಿಹಾರ ನೀಡಬೇಕು.

* ನೆರೆ ಸಂತ್ರಸ್ತರ ಜ್ವಲಂತ ಸಂಕಷ್ಟಗಳ ಕುರಿತು ಚರ್ಚಿಸಲು ವಿಧಾನಮಂಡಲದ ಅಧಿವೇಶನ ಕರೆಯಬೇಕು.

ಡಿಸಿಎಂ ಗೋವಿಂದ ಕಾರಜೋಳ ಬಾರದ್ದಕ್ಕೆ ಆಕ್ರೋಶ: ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನಕ್ಕೆ ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ ನೀಡಲಾಗಿತ್ತು. ಅವರು ತಮ್ಮ ಪ್ರತಿನಿಧಿಯನ್ನಾಗಿ ಯಾರನ್ನಾದರೂ ಕಳುಹಿಸುವುದಾಗಿ ಹೇಳಿದ್ದರು. ಜಿಲ್ಲೆಗೆ ಆಗಮಿಸಿದ್ದ ಡಿಸಿಎಂ ಗೋವಿಂದ ಕಾರಜೋಳರನ್ನು ಭೇಟಿಯಾದ ಸಂಘಟಕರು, ನೆರೆ ಸಂತ್ರಸ್ತರ ಸಂಕಷ್ಟ ಅರಿಯಲು ಬಹಿರಂಗ ಅಧಿವೇಶನಕ್ಕೆ ಬರಬೇಕು. ನಿಮಗೆ ಹೆಚ್ಚು ಸಮಯ ಕಳೆಯಲು ಆಗದಿದ್ದರೂ ಐದು ನಿಮಿಷದಲ್ಲಿ ಬಂದು ಹೋಗಬೇಕು ಎಂದು ಮನವಿ ಮಾಡಿದ್ದರು. ಆದರೆ, ಕಾರಜೋಳರು ಬರಲಿಲ್ಲ. ಇದಕ್ಕೆ ಇಡೀ ನೆರೆ ಸಂತ್ರಸ್ತರ ಬಹಿರಂಗ ಅಧಿವೇಶನದಲ್ಲಿ ಆಕ್ರೋಶ ವ್ಯಕ್ತವಾಯಿತು.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.