ಬದುಕಿಗಾಗಿ ಹೋರಾಟ; ಹೋರಾಟಕ್ಕಾಗಿ ಬದುಕು


Team Udayavani, May 1, 2021, 7:00 AM IST

ಬದುಕಿಗಾಗಿ ಹೋರಾಟ; ಹೋರಾಟಕ್ಕಾಗಿ ಬದುಕು

ಮೇ 1 – ವಿಶ್ವ ಕಾರ್ಮಿಕರ ದಿನಾಚರಣೆ ಎಂದೊಡನೆಯೇ 8 ತಾಸುಗಳ ಕೆಲಸದ ಅವಧಿಯ ಬೇಡಿಕೆಯನ್ನು ಮುಂದಿಟ್ಟು 1886 ರ ಮೇ ಒಂದರಂದು ಅಮೆರಿಕದ ಚಿಕಾಗೋದ ಇಲಿನಾಯ್ಸ್ ಪ್ರದೇಶದಲ್ಲಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಲಕ್ಷಾಂತರ ಸಂಖ್ಯೆಯ ಕಾರ್ಮಿಕರು ನಡೆಸಿದ ಅಭೂತಪೂರ್ವ ಹೋರಾಟವು ನೆನಪಿಗೆ ಬರುತ್ತದೆ. ಅಂದು ದಿನದ 24 ತಾಸುಗಳ ಕಾಲವೂ ಮಾಲಕರ ಕಾರ್ಖಾನೆಗಳಲ್ಲಿ ದುಡಿಯಬೇಕಾಗಿದ್ದ ಕೆಲಸಗಾರರು ವಿಶ್ರಾಂತಿ, ಕೌಟುಂಬಿಕ ಜೀವನ ಹಾಗೂ ಸಾಮಾಜಿಕ ಜೀವನದಿಂದ ವಂಚಿತರಾಗಿದ್ದರು. 19 ನೇ ಶತಮಾನವು ಅಮೆರಿಕ ಮತ್ತು ಐರೋಪ್ಯ ರಾಷ್ಟ್ರಗಳಲ್ಲಿ ಕೈಗಾರಿಕ ಕ್ರಾಂತಿಗೆ ಸಾಕ್ಷಿಯಾಗಿದ್ದ ಪರಿಣಾಮವಾಗಿ ಅಸಂಖ್ಯಾತ ಉದ್ಯೋಗ ಸೃಷ್ಟಿಗೆ ಕಾರಣೀಭೂತವಾಗಿದ್ದರೂ ಸಹ ಕಾರ್ಮಿಕರ ಬದುಕು ಮಾತ್ರ ಅತ್ಯಂತ ನಿಕೃಷ್ಟವಾದ ಸ್ಥಿತಿಯಲ್ಲಿತ್ತು. ಕಾರ್ಮಿಕರಿಗೆ ಕನಿಷ್ಠ ಸೌಲಭ್ಯವೂ ಸಿಗುತ್ತಿರಲಿಲ್ಲ. ಪ್ರಾಣಿಗಳ ರೀತಿ ಕಾರ್ಮಿಕರನ್ನು ನಡೆಸಿಕೊಳ್ಳಲಾಗುತ್ತಿತ್ತು. ಕಾರ್ಮಿಕರ ಶ್ರಮ, ಬೆವರು ಮಾಲಕರ ಖಜಾನೆ ತುಂಬಿಸುತ್ತಿತ್ತೇ ಹೊರತು ಲಾಭದ ಒಂದಂಶವೂ ಕಾರ್ಮಿಕರಿಗೆ ತಲುಪುತ್ತಿರಲಿಲ್ಲ. ಮೂಲ ಸೌಕರ್ಯ, ವೈದ್ಯಕೀಯ, ಶಿಕ್ಷಣ ಸೌಲಭ್ಯಗಳಂತೂ ಮರೀಚಿಕೆಯಾಗಿತ್ತು. ಕಾರ್ಮಿಕರ ಹಿತ ರಕ್ಷಣೆಯ ಯಾವುದೇ ಕಾನೂನುಗಳು, ಒಪ್ಪಂದಗಳು ಇರದಿದ್ದ ಕಾಲವದು. ಅಂತಹ ಪ್ರತಿಕೂಲದ ಕಾಲಘಟ್ಟದಲ್ಲಿ ಕಾರ್ಮಿಕರನ್ನು ಸಂಘಟಿಸಿ, ಒಗ್ಗೂಡಿಸಿ, ಹೋರಾಟಕ್ಕೆ ಅಣಿಗೊಳಿಸಿ 1886 ರ ಮೇ ಯಲ್ಲಿ ನಡೆಸಿದ ಹೋರಾಟ ಚಾರಿತ್ರಿಕವಾಗಿ ದಾಖಲಾಯಿತು. ಅದೊಂದು ಸಾಮಾನ್ಯ ಹೋರಾಟವಾಗಿರಲಿಲ್ಲ. ರಕ್ತ ಕ್ರಾಂತಿಯೇ ಆಯಿತು. ಹೋರಾಟವನ್ನು ದಮನಿಸಲು ಮಾಲಕ ವರ್ಗದಿಂದ ವಾಮಮಾರ್ಗದ ಮೂಲಕ ಅನೇಕ ಕ್ರೂರ ಪ್ರಯತ್ನಗಳು ನಡೆದವು. ಕಾರ್ಮಿಕರ ಮೇಲೆ ದಾಳಿ ಮಾಡಿಸಲಾಯಿತು. ಕಾರ್ಮಿಕ ಸಂಘಟನೆಗಳು ಎದೆಗುಂದಲಿಲ್ಲ. ಕಾರ್ಮಿಕರು ಹಿಂದಡಿಯಿಡಲಿಲ್ಲ.

ಕೊನೆಗೂ ಕಾರ್ಮಿಕರ ನಿರಂತರ ಹೋರಾಟ, ತ್ಯಾಗ, ಬಲಿದಾನದ ಫ‌ಲವಾಗಿ ಹೋರಾಟವು ವಿಜಯದಲ್ಲಿ ಅಂತ್ಯಗೊಂಡಿತು. ನ್ಯಾಯಯುತ ಬೇಡಿಕೆಯಾದ ಕಾರ್ಮಿಕರಿಗೆ ದಿನದ 8 ತಾಸುಗಳ ಕೆಲಸದ ಅವಧಿ ಜಾರಿಗೆ ಬಂತು. 8 ತಾಸು ಕೆಲಸ, 8 ತಾಸು ಸಾಮಾಜಿಕ ಜೀವನ ಮತ್ತು ಉಳಿದ 8 ಗಂಟೆ ವಿಶ್ರಾಂತಿ ಎಂಬ ಪರಿಕಲ್ಪನೆಯು ವಿಶ್ವಾದ್ಯಂತ ಜಾರಿಯಾಯಿತು. ಕಾರ್ಮಿಕರನ್ನು ಸಂಘಟಿಸಿ ಹೋರಾಟವನ್ನು ರೂಪಿಸಿ ವಿಜಯವನ್ನು ತಂದುಕೊಟ್ಟ ಕೀರ್ತಿ ಕಾರ್ಮಿಕ ಸಂಘಟನೆಗಳಿಗೆ ಸಲ್ಲುತ್ತದೆ ಎನ್ನುವುದು ಇಲ್ಲಿ ಗಮ ನಾರ್ಹ. ಹೋರಾಟ ನಡೆದ ಸ್ಥಳವಾದ ಚಿಕಾಗೋ ನಗರಿಯ ಇಲಿನಾಯ್ಸ್ ಪ್ರದೇಶದ ಹೇ ಮಾರ್ಕೆಟ್‌ ಚೌಕ ಇಂದಿಗೂ ಕಾರ್ಮಿಕರ ಬಲಿದಾನದ ದ್ಯೋತಕ ವಾಗಿ ಚಿರಸ್ಥಾಯಿಯಾಗಿ ಉಳಿದಿದೆ. ಈ ಚರಿತ್ರಾರ್ಹ ಹೋರಾಟದ ನೆನಪಿಗಾಗಿ ಪ್ರತೀ ವರ್ಷ ಮೇ ಒಂದರಂದು ವಿಶ್ವಾದ್ಯಂತ ಕಾರ್ಮಿಕ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಯಿತು. ಇದನ್ನು ಮೇ ಡೇ, ಲೇಬರ್‌ ಡೇ ಎನ್ನುವ ಹೆಸರುಗಳಿಂದಲೂ ಕರೆಯಲಾಗುತ್ತದೆ.

1886 ರಿಂದ ಆರಂಭಗೊಂಡು ಇಲ್ಲಿಯ ತನಕ ಅಸಂಖ್ಯಾತ ಕಾರ್ಮಿಕ ಚಳವಳಿಗಳು ಮತ್ತು ಹೋರಾಟಗಳು ನಡೆದಿವೆ. ಅದೇ ರೀತಿಯಲ್ಲಿ ಕಾರ್ಮಿಕ ಸಂಘಟನೆಗಳೂ ಅಸಂಖ್ಯಾತ ಸಂಖ್ಯೆ ಯಲ್ಲಿವೆ. ನಿರಂತರವಾದ ಸಂಘಟನಾತ್ಮಕ ಕೆಲಸ, ಅವಿರತ ಹೋರಾಟವೇ ಕಾರ್ಮಿಕ ಸಂಘಗಳ ಉಸಿರು. ಹೋರಾಟದ ಕಿಚ್ಚು ನಂದಿತು ಎಂದಾದರೆ ಕಾರ್ಮಿಕ ವರ್ಗದ ಸ್ಥಿತಿ 1886 ರ ಪೂರ್ವ ಪರಿಸ್ಥಿತಿಗೆ ಮರಳುವುದರಲ್ಲಿ ಸಂಶಯವಿಲ್ಲ. ಒಂದೆಡೆ ಇಲ್ಲಿ ತನಕ ಹೋರಾಟದ ಮೂಲಕ ಗಳಿಸಿರುವ ಸೌಲಭ್ಯಗಳನ್ನು ರಕ್ಷಿಸಿಕೊಳ್ಳುವ ಸವಾಲು, ಇನ್ನೊಂದೆಡೆ ಪಡೆಯಬೇಕಾಗಿರುವ ಸೌಲಭ್ಯಗಳಿಗಾಗಿ ಹೋರಾಟ. ಒಟ್ಟಿನಲ್ಲಿ “ಬದುಕಿಗಾಗಿ ಹೋರಾಟ -ಹೋರಾಟಕ್ಕಾಗಿ ಬದುಕು’. ಸರಕಾರಗಳು ಯಾವತ್ತಿಗೂ ಮಾಲಕರ ಪರವೇ ಇರುವುದರಿಂದ ಯಾವಾಗಲೂ ವಿಪಕ್ಷದ ನೆಲೆಯಲ್ಲಿಯೇ ನಿಂತು ಹೋರಾಡಬೇಕಾದ ಅನಿ ವಾರ್ಯ ಕಾರ್ಮಿಕ ಸಮಘಟನೆಗಳು ಮತ್ತು ಕಾರ್ಮಿಕರದ್ದಾಗಿದೆ.

ನಮ್ಮನ್ನಾಳುವ ಸರಕಾರಗಳನ್ನು ಸದಾ ಕಾಲ ವಿರೋಧಿಸಿಕೊಂಡೇ ಹೋರಾಡು ವುದು ಸಂಘಟನೆಗಳಿಗೆ ನಿಜಕ್ಕೂ ಸವಾಲಿನ ಕೆಲಸ. ಪ್ರತಿ ಯೊಂದು ನ್ಯಾಯಯುತ ಬೇಡಿಕೆಗಳ ಈಡೇರಿಕೆಗೂ ಹೋರಾಟದ ಮೊರೆ ಹೋಗಬೇಕಾದ ಪರಿಸ್ಥಿತಿ ಇದೆ. ದೇಶದ ಅಭಿವೃದ್ಧಿಗೆ ಕಾರ್ಮಿಕರೂ ಕಾರಣ ಎನ್ನುವುದನ್ನು ಅರಿತುಕೊಂಡು ಅವರಿಗೆ ನ್ಯಾಯವಾಗಿ ಸಲ್ಲಬೇಕಾದ ಸೌಲಭ್ಯಗಳನ್ನು ಒದಗಿಸುವ ಉದಾರತೆ ಸರಕಾರ ನಡೆಸುವವರಿಗೆ ಇರಬೇಕಾದ್ದು ಅತ್ಯಗತ್ಯವಾಗಿದೆ.

1991 ರ ಅಅನಂತರ ಕೇಂದ್ರ ಸರಕಾರ ಜಾರಿಗೆ ತಂದ ಖಾಸಗೀಕರಣ, ಜಾಗತೀಕರಣ, ಉದಾರೀಕರಣದ ಕರಿನೆರಳು ಕಾರ್ಮಿಕ ವರ್ಗವನ್ನು ಹೈರಾಣಾಗಿಸಿದೆ. ಮಾಲಕರ ಒತ್ತಡದಿಂದಾಗಿ ಆಗಿಂದಾಗ್ಗೆ ಕಾರ್ಮಿಕರ ಕಾಯ್ದೆಗೆ ತಿದ್ದುಪಡಿಯನ್ನು ತರುವುದರ ಮೂಲಕ ಸರಕಾರಗಳು ಕಾರ್ಮಿಕರ ಪರವಾದ ಕಾನೂನುಗಳನ್ನು ದುರ್ಬಲಗೊಳಿಸಿವೆ. ಇದು ಕಾರ್ಮಿಕ ಸಂಘಟನೆಗಳಿಗೆ ಇನ್ನಷ್ಟು ಮುಳುವಾಗುತ್ತಿದೆ. ಸಂಸತ್ತಿನಲ್ಲಿ ಕಾರ್ಮಿಕರ ಪರವಾಗಿ ಮಾತನಾಡುವ ಜನಪ್ರತಿನಿಧಿಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿರುವುದು ಕಾರ್ಮಿಕ ಕಾನೂನುಗಳಿಗೆ ತಿದ್ದುಪಡಿ ತರಲು ಸರಕಾರಕ್ಕೆ ಸಹಕಾರಿಯಾಗಿದೆ. ದೇಶದ ಅತ್ಯಂತ ದೊಡ್ಡ ಸಂಖ್ಯೆಯಲ್ಲಿರುವ ಕಾರ್ಮಿಕ ವರ್ಗ ರಾಜಕೀಯ ಶಕ್ತಿಯಾಗಿ ರೂಪಾಂತರಗೊಳ್ಳದಿರುವುದೇ ಇಂಥ ಸಂದಿಗ್ಧತೆ ಸೃಷ್ಟಿಗೆ ಕಾರಣವಾಗಿದೆ. ಕಾರ್ಮಿಕರಲ್ಲಿ ರಾಜಕೀಯ ಪ್ರಜ್ಞೆ ಮೂಡಿಸುವುದು ಕೂಡ ಕಾರ್ಮಿಕ ಸಂಘಗಳಿಗೆ ಸವಾಲಿನ ಕೆಲಸವಾಗಿದೆ. ಈ ಸವಾಲನ್ನು ಸಂಘಟನೆಗಳು ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮಾತ್ರ ಕಾರ್ಮಿಕ ವರ್ಗ ನೆಮ್ಮದಿಯ ಜೀವನ ಸಾಗಿಸುವ ವಾತಾವರಣ ಸೃಷ್ಟಿಯಾಗಬಹುದೇನೋ.

ಈ ಎಲ್ಲ ಸಮಸ್ಯೆ, ಸವಾಲುಗಳ ನಡುವೆಯೇ ಇನ್ನೊಂದು “ಮೇ ಡೇ’ ಬಂದಿದೆ. ಕಳೆದ ವರ್ಷದಂತೆ ಈ ವರ್ಷವೂ ಕೋವಿಡ್‌-19 ಸಾಂಕ್ರಾಮಿಕ ಕಾಯಿಲೆಯ ಪರಿಣಾಮವಾಗಿ ವಿಶ್ವಾದ್ಯಂತ ಕಾರ್ಮಿಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಾಧ್ಯವಾಗುತ್ತಿಲ್ಲ. ಕಾರ್ಮಿಕರು ಒಂದೆಡೆ ಸೇರುವ ಹಾಗಿಲ್ಲ. ಮೆರವಣಿಗೆಯನ್ನು ನಡೆಸುವ ಹಾಗಿಲ್ಲ. ಸಾಮಾಜಿಕವಾಗಿ ದೈಹಿಕ ಅಂತರವನ್ನು ಕಾಪಾಡಿಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಇದರಿಂದಾಗಿ ಶತಮಾನದ ಪರಂಪರೆಯಿರುವ ಮೇ ದಿನದ ಆಚರಣೆ ಸಪ್ಪಗಾಗಿದೆ. ಆದರೆ ಒಬ್ಬ ಪ್ರಜ್ಞಾವಂತ, ಜವಾಬ್ದಾರಿಯುತ ಮತ್ತು ನಿಷ್ಠಾವಂತ ಕಾರ್ಮಿಕ ತನ್ನ ಮನಸ್ಸಿನಲ್ಲಿಯೇ ಕಾರ್ಮಿಕ ವರ್ಗದ ಪ್ರಸ್ತುತ ಸನ್ನಿವೇಶ, ಮುಂದಿರುವ ಸಮಸ್ಯೆಗಳು ಸವಾಲುಗಳು, ಅದಕ್ಕೆ ತಕ್ಕನಾಗಿ ಭವಿಷ್ಯದಲ್ಲಿ ರೂಪಿಸಬೇಕಾದ ಹೋರಾಟ ಇವುಗಳ ಕುರಿತಾಗಿ ಚಿಂತನೆ ನಡೆಸಿ ತಣ್ತೀ-ಸಿದ್ಧಾಂತಗಳ ಮೂಲಕ ಪ್ರಬಲ ಕಾರ್ಮಿಕ ಮುಖಂಡನಾಗಿ ಹೊರಹೊಮ್ಮಿ ಕಾರ್ಮಿಕ ವರ್ಗವನ್ನು ಮುನ್ನೆಡೆಸುವ ಪ್ರತಿಜ್ಞೆಯನ್ನು ಮಾಡುವ ಮೂಲಕ ಕಾರ್ಮಿಕ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಿಕೊಳ್ಳಬಹುದಾಗಿದೆ.

ಕೊರೊನಾ ಇದೆ ಅಂದ ಮಾತ್ರಕ್ಕೆ ಕಾರ್ಮಿಕರು ತಮ್ಮ ಬದುಕನ್ನು ಕಟ್ಟಿಕೊಳ್ಳುವುದನ್ನು ನಿಲ್ಲಿಸಲಾಗದು. ಜತೆಗೆ ಸಂಘಟನೆ, ಹೋರಾಟ, ಚಳವಳಿಗಳು ಎಲ್ಲವೂ ಸಾಗಬೇಕು. ಹಾಗಾಗಿಯೇ ಬದುಕಿಗಾಗಿ ಹೋರಾಟ -ಹೋರಾಟಕ್ಕಾಗಿ ಬದುಕು. ವಿಶ್ವ ಕಾರ್ಮಿಕರ ಏಕತೆ ಚಿರಾಯುವಾಗಲಿ.

– ಕೆ.ರಾಘವೇಂದ್ರ ನಾಯರಿ, ದಾವಣಗೆರೆ

ಟಾಪ್ ನ್ಯೂಸ್

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

ravishankar-guruji

World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ

1-dhyan

Meditation; ಮಾನಸಿಕ ಆರೋಗ್ಯಕ್ಕೆ ದಿವ್ಯೌಷಧ: ಡಿ.21ರಂದೇ ಏಕೆ ಧ್ಯಾನ ದಿನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

1

Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.