ಶುದ್ಧಿಕರಿಸಿದ ನೀರು ತಾಲೂಕಿಗೆ ನೀಡಿ
Team Udayavani, Oct 8, 2021, 3:41 PM IST
ದೊಡ್ಡಬಳ್ಳಾಪುರ: ತಾಲೂಕಿಗೆ ಶುದ್ಧೀಕರಿಸಿದ ನೀರು ಸರಬರಾಜು ಮಾಡುವ ಯೋಜನೆ ಕುರಿತು ನೀರಾವರಿ ಸಚಿವರೊಂದಿಗೆ ಚರ್ಚಿಸಲಾಗುವುದು. ಜಿಲ್ಲಾಸ್ಪತ್ರೆ ಕುರಿತಂತೆ ಶಾಸಕರು ಮಾಡಿರುವ ಮನವಿಪರಿಶೀಲಿಸಲಾಗುವುದು ಎಂದು ಉಸ್ತುವಾರಿ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ನಗರದ ಸಾರ್ವಜನಿಕ ಆಸ್ಪತ್ರೆ ಸಮೀಪದಲ್ಲಿ ಪಿ.ಎಂ.ಕೇರ್ ಯೋಜನೆಯ ಅನು ದಾನದಲ್ಲಿ ನಿರ್ಮಿಸಲಾಗಿರುವ ಎರಡು ಸಾವಿರ ಲೀಟರ್ ಸಾಮರ್ಥ್ಯದ ಪಿಎಸ್‌ಎ(ಆಮ್ಲಜನಕ) ಘಟಕ ಉದ್ಘಾಟಿಸಿ ಮಾತನಾಡಿದರು. ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ಈಗಾಗಲೇ ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆಗೆ ಶುದ್ಧೀಕರಿಸಿದ ನೀರು ಸರಬರಾಜು ಮಾಡುವ ಯೋಜನೆ ಪ್ರಗತಿಯಲ್ಲಿದೆ.
ಆದರೆ ವೃಷಾಭವತಿ ಕಣಿವೆಯಿಂದ ಸಂಸ್ಕರಿಸಿದ ನೀರನ್ನು ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ಹಾಗೂ ನೆಲಮಂಗಲಕ್ಕೆ ನೀಡಲು ಯೋಜಿಸಿತ್ತು. ಆದರೆ ಈ ಸರ್ಕಾರ ಎರಡು ತಾಲೂಕುಗಳ ಜೊತೆಗೆ ಬೆಂಗಳೂರು ನಗರ, ತುಮಕೂರನ್ನು ಹೆಚ್ಚುವರಿಯಾಗಿ ಸೇರಿಸಿದೆ ಎಂದರು. ಶೀಘ್ರ ಈ ಯೋಜನೆ ಅನುಷ್ಠಾನಗೊಳ್ಳಬೇಕು.
ಇದನ್ನೂ ಓದಿ;- ಇದು ಬಿಜೆಪಿ ದುಬಾರಿ ದರ್ಬಾರ್: ಹೆಬ್ಟಾಳಕರ
ತಾಲೂಕಿನ ಅಭಿವೃದ್ಧಿ ಕಾರ್ಯಗಳ ಅನದಾನ ತಡೆ ಹಿಡಿದಿರುವುದು ಬಿಡುಗಡೆಯಾಗಬೇಕು. ಜಿಲ್ಲಾಸ್ಪತ್ರೆಗೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಜಿಲ್ಲಾಸ್ಪತ್ರೆಗೆ ಅನುದಾನ ಮಂಜೂರು ಮಾಡಿಸಬೇ ಕೆಂದು ಸಚಿವರಲ್ಲಿ ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಸಚಿವ ಎಂಟಿಬಿ ನಾಗರಾಜ್ ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕ್ಷೇತ್ರದಲ್ಲಿ ಕಡಿತ ಮಾಡಲಾಗಿದೆ.
ಈ ಕುರಿತು ಮುಖ್ಯ ಮಂತ್ರಿಗಳ ಗಮನಕ್ಕೆ ತರಲಾಗಿದ್ದು, ನಾಲ್ಕನೇ ಹಂತದಲ್ಲಿ ನಗರಸಭೆ, ಪುರಸಭೆ ಅಭಿವೃದ್ಧಿಗಾಗಿ ಸರ್ಕಾರದ ಅನುದಾನ ಬಿಡುಗಡೆ ಶೀಘ್ರವಾಗಿ ಆಗಲಿದೆ ಎಂದರು. ಜಿಲ್ಲಾಸ್ಪತ್ರೆಗೆ ಅನುದಾನ ಕುರಿತು ಪರಿಶೀಲಿಸಲಾಗುವುದು ಎಂದರು.
ಇದಕ್ಕೆ ಶಾಸಕರು ಪರಿಶೀಲನೆ ಎನ್ನಬೇಡಿ ಮಾಡಿಕೊಡುತ್ತೇನೆ ಎಂದು ಭರವಸೆ ನೀಡಿ ಎಂದರು. ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಪಂ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ತಹಶೀ ಲ್ದಾರ್ ಟಿ.ಎಸ್.ಶಿವರಾಜ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ, ತಾ. ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತಾಧಿಕಾರಿ ಡಾ.ರಮೇಶ್, ತಾಪಂ ಇಒ ಮುರುಡಯ್ಯ ಇದ್ದರು.
ರಾಜ್ಯದಲ್ಲಿ ಮೂರು ನಗರಪಾಲಿಕೆ, ಎರಡುನಗರಸಭೆಯ ಅಧ್ಯಕ್ಷ – ಉಪಾಧ್ಯಕ್ಷ ಸ್ಥಾನಕ್ಕೆ ಶೀಘ್ರವೇ ದಿನಾಂಕ ನಿಗದಿಪಡಿಸುವಂತೆ ಸೂಚಿಸಲಾಗಿದೆ. ಅಂತೆಯೇ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಕ್ರಮ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ಆದರೆ ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷ- ಉಪಾ ಧ್ಯಕ್ಷ ಸ್ಥಾನದ ಆಯ್ಕೆ ಕುರಿತು ಯಾವ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಪ್ರಶ್ನೆಗೆ ಯಾವ ಪಕ್ಷ ಬಹುಮತ ಹೊಂದಿರುತ್ತದೆಯೋ ಅವರು ಚುಕ್ಕಾಣಿ ಹಿಡಿಯುತ್ತಾರೆ ಎಂದು ಅಸ್ಪಷ್ಟ ಉತ್ತರ ನೀಡಿದರು.
ಸರ್ಕಾರದಲ್ಲಿ ಆರ್‌ಎಸ್‌ಎಸ್ ಹಸ್ತಕ್ಷೇಪವಿಲ್ಲ: ಎಲ್ಲಾ ರಾಜಕೀಯ ಪಕ್ಷಗಳ ಸಂಘಟನೆಗೆ ಸಂಘ
ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ರಾಜಕೀಯ ದಲ್ಲಿ ಆರೋಪ ಪ್ರತ್ಯಾರೋಪ ಸಹಜ. ನಾ ಹೇಳಿದಕ್ಕೆ ಶಾಸಕ ಟಿ.ವೆಂಕಟರ ಮಣಯ್ಯ ಅವರಾದರೂ ಏನಾದ್ರೂ ಹೇಳಲೇಬೇಕು. ಇಲ್ಲವಾದರೆ ನಾ ಹೇಳಿದ್ದೇ ಸರಿ ಎಂಬಂತಾಗುತ್ತದೆ. ದೇಶದಲ್ಲಿ ರಾಷ್ಟ್ರೀಯ, ಪ್ರಾದೇಶಿಕ ಪಕ್ಷಗಳ ಸಂಘಟನೆಗೆ ಸಂಘ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಹೊಸದಾಗಿ ಹುಟ್ಟಿದಲ್ಲ. ಸ್ವಾತಂತ್ರ್ಯ ಪೂರ್ವದಿಂದಲೂ ಸೇವಾ ಧರ್ಮದಿಂದ ಕಾರ್ಯನಿರ್ವಹಿಸುತ್ತಿದೆ. ಆದರೆ ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.