ಮಂಗಳೂರಿನಲ್ಲಿ ಫಿನ್ ಟೆಕ್ ಎಕ್ಸೆಲೆನ್ಸ್ ಸೆಂಟರ್: ಡಾ| ಅಶ್ವತ್ಥ ನಾರಾಯಣ
Team Udayavani, Oct 30, 2021, 6:25 AM IST
ಮಂಗಳೂರು: ಮಂಗಳೂರನ್ನು ರಾಜ್ಯ ಮಾತ್ರವಲ್ಲದೆ ದೇಶದಲ್ಲೇ ಪ್ರಮುಖ ಐಟಿ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಸರಕಾರ ಪೂರಕ ಕ್ರಮಗಳನ್ನು ಕೈಗೊಂಡಿದ್ದು, ಇಲ್ಲಿ ಫಿನ್‌ಟೆಕ್ ಎಕ್ಸಲೆನ್ಸ್ ಸೆಂಟರ್ ಸ್ಥಾಪಿಸಲಾಗುವುದು ಎಂದು ರಾಜ್ಯ ಐಟಿಬಿಟಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ| ಸಿ.ಎನ್. ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರು ಬಿಯಾಂಡ್ ಉಪಕ್ರಮದಡಿಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ವತಿಯಿಂದ ಮಂಗಳೂರಿನಲ್ಲಿ ಶುಕ್ರವಾರ ಆಯೋಜಿಸಿದ್ದ ಮಂಗಳೂರು ಟೆಕ್ನಾ ವಾಂಜಾ ಕಾರ್ಯಕ್ರಮದಲ್ಲಿ ಕೆಡಿಇಎಂ ಮಂಗಳೂರು ಕ್ಲಸ್ಟರ್ ಅನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಂಗಳೂರಿನಲ್ಲಿ ಉದ್ದೇಶಿತ ಐಟಿ ಪಾರ್ಕ್ ಸ್ಥಾಪನೆಗೆ ಪೂರಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಲಾಗುವುದು. ಸಾರ್ಟ್ ಅಪ್‌ಗ್ಳಿಗೆ ನೆರವು ನೀಡಲಾಗುವುದು ಎಂದರು.
ಶೀಘ್ರ ನೂತನ ಟೆಲಿಕಾಂ ನೀತಿ
ಟೆಲಿಕಾಂ ಸೇವಾದಾರರಿಗೆ ಉತ್ತೇಜನ ನಿಟ್ಟಿನಲ್ಲಿ ಸರಕಾರ ಶೀಘ್ರ ನೂತನ ಟೆಲಿಕಾಂ ನೀತಿಯನ್ನು ಘೋಷಿಸಲಿದೆ. ಗ್ರಾಮೀಣ ಪ್ರದೇಶದಲ್ಲಿ ಸ್ಯಾಟಲೈಟ್ ಸೇವೆಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.
5 ವರ್ಷದಲ್ಲಿ ಜಾಗತಿಕ ಐಟಿ
ನಕಾಶೆಯಲ್ಲಿ ಮಂಗಳೂರು
ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಡಾ| ಇ.ವಿ. ರಮಣ ರೆಡ್ಡಿ ಮಾತನಾಡಿ, ಬೆಂಗಳೂರು ಬಿಯಾಂಡ್ ಉಪಕ್ರಮದಡಿ ಬೆಂಗಳೂರು ಹೊರತುಪಡಿಸಿ ಇತರ ಜಿಲ್ಲೆಗಳಲ್ಲಿ ಐಟಿ ಉದ್ಯಮಗಳ ಸ್ಥಾಪನೆ ನೆರವು ನೀಡಲಾಗುತ್ತಿದೆ. ಮುಂದಿನ 5 ವರ್ಷಗಳಲ್ಲಿ ಮಂಗಳೂರನ್ನು ಜಾಗತಿಕ ಐಟಿ ನಕಾಶೆಯಲ್ಲಿ ಪ್ರಮುಖ ತಾಣವಾಗಿ ಗುರುತಿಸುವಂತೆ ಮಾಡುವ ಗುರಿಯನ್ನು ಹೊಂದಲಾಗಿದೆ ಎಂದರು.
ಇದನ್ನೂ ಓದಿ:ಟಿ20 ವಿಶ್ವಕಪ್: ಪಾಕಿಸ್ಥಾನ ಗೆಲುವಿನ ಹ್ಯಾಟ್ರಿಕ್
ಬಯೋ ತಂತ್ರಜ್ಞಾನಕ್ಕೆ ಅವಕಾಶ
ಅರಿನ್ ಕ್ಯಾಪಿಟಲ್ ಸಹ-ಸಂಸ್ಥಾಪಕ ಹಾಗೂ ಅಧ್ಯಕ್ಷ ಮೋಹನ್‌ದಾಸ್ ಪೈ ಮಾತನಾಡಿ, ಮಂಗಳೂರು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಸೇವೆಗಳ ಪ್ರಮುಖ ಕೇಂದ್ರವಾಗಿ ಗುರುತಿಸಿಕೊಂಡಿದ್ದು, ಇಲ್ಲಿ ಬಯೋ ತಂತ್ರಜ್ಞಾನಕ್ಕೆ ಹೆಚ್ಚಿನ ಅವಕಾಶವಿದೆ ಎಂದರು.
ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯಕ್ಕಾಗಿನ ಸರಕಾರದ ಮುಖ್ಯ ಕಾರ್ಯದರ್ಶಿ ಡಾ| ಎಸ್. ಸೆಲ್ವಕುಮಾರ್, ವಿಷನ್ ಗ್ರೂಪ್ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣ, ಕರ್ನಾಟಕ ಸ್ಟಾರ್ಟಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್, ಕೆಡಿಇಎಂ ಅಧ್ಯಕ್ಷ ಬಿ.ವಿ. ನಾಯ್ಡು ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ, ಜಿಲ್ಲಾ ಪಂಚಾಯತ್ ಸಿಇಒ ಡಾ| ಕುಮಾರ್, ಹಿರಿಯ ಅಧಿಕಾರಿ ಮೀನಾ ನಾಗರಾಜ್, ಲಹರಿ ಎಂಡಿ ಹಾಗೂ ಸಿಇಒ ಸಂಜೀವ್ ಗುಪ್ತಾ, ಟೆಕ್ನಿಕಲ್ ಇಂಡಿಯಾದ ಮುಖ್ಯಸ್ಥ ಬೀರೇನ್ ಘೋಷ್, ಮಂಗಳೂರು ಇನ್ಫೋಟೆಕ್ ಸೊಲ್ಯೂಷನ್ಸ್ ನಿರ್ದೇಶಕ ಪ್ರಶಾಂತ್ ಶೆಣೈ, ರಝೋರ್ ಪೇ ಸಿಇಒ ಹರ್ಷಿಲ್ ಮಾಥಾರ್, ರೋಬೋಸಾಫ್ಟ್ ಸಿಇಒ ಹಾಗೂ ಸಂಸ್ಥಾಪಕ ರೋಹಿತ್ ಭಟ್, ನ್ಯಾಸ್ಕಾಂ ಉಪಾಧ್ಯಕ್ಷ ಕೆ.ಎಸ್. ವಿಶ್ವನಾಥನ್ ಉಪಸ್ಥಿತರಿದ್ದರು.ನೋವಿಗೊ ಸೊಲೋಷನ್ಸ್ ಪ್ರೈ.ಲಿ.ನ ವ್ಯವಸ್ಥಾಪಕ ನಿರ್ದೇಶಕ ಪ್ರವೀಣ್ ಕುಮಾರ್ ಕಲ್ಬಾವಿ ಸ್ವಾಗತಿಸಿದರು.
ಡಿಜಿಟಲ್ ಆರ್ಥಿಕತೆಗೆ ಕೆಡಿಇಎಂ
ರಾಜ್ಯದಲ್ಲಿ ಡಿಜಿಟಲ್ ಆರ್ಥಿಕತೆಯ ಪಾಲನ್ನು ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರಕಾರ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸ್ಥಾಪಿಸಿದ್ದು, ಉದ್ಯಮ ಹಾಗೂ ಸರಕಾರದ ನಡುವೆ ಜ್ಞಾನಸೇತುವೆಯಾಗಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದಲ್ಲಿ ಮಂಗಳೂರು, ಮೈಸೂರು, ಹುಬ್ಬಳ್ಳಿ ಕ್ಲಸ್ಟರ್‌ಗಳಿವೆ. ಮಂಗಳೂರು ಕ್ಲಸ್ಟರ್ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಕೊಡಗು ಜಿಲ್ಲೆಗಳನ್ನು ಒಳಗೊಂಡಿದೆ. ಬಿಯಾಂಡ್ ಬೆಂಗಳೂರು ಉಪಕ್ರಮವು 2026ರ ವೇಳೆಗೆ ಮೂರು ಕ್ಲಸ್ಟರ್‌ಗಳಲ್ಲಿ 5,000 ಐಟಿ ಕಂಪೆನಿಗಳು ಹಾಗೂ ಸ್ಟಾರ್ಟ್‌ಅಪ್‌ಗ್ಳನ್ನು ಆಕರ್ಷಿಸುವ ಮತ್ತು ನೆಲೆ ಒದಗಿಸುವ ಗುರಿಯನ್ನು ಹೊಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಉಮ್ರಾ ಯಾತ್ರೆಗೆ ತೆರಳಿ ವಂಚನೆ : ಸಂತ್ರಸ್ತರನ್ನು ಊರಿಗೆ ಕರೆಸಿಕೊಂಡ ಮೊಯ್ದಿನ್ ಬಾವ
ಜ.6- 9: ಜೋಕಟ್ಟೆ ಲೆವೆಲ್‌ಕ್ರಾಸ್ ಬಂದ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.