ನಿಗದಿತ ಸಮಯದಲ್ಲೇ ಅಂತಿಮ ವರ್ಷದ ವೈದ್ಯ ಪರೀಕ್ಷೆ
Team Udayavani, Feb 3, 2022, 7:50 AM IST
ಬೆಂಗಳೂರು: ಮಾರ್ಚ್ ತಿಂಗಳೊಳಗೆ ಪರೀಕ್ಷೆಗಳನ್ನು ಮುಗಿಸಬೇಕಿರುವ ಹಿನ್ನೆಲೆಯಲ್ಲಿ ಬಹುತೇಕ ನಿಗದಿತ ಸಮಯದಲ್ಲಿಯೇ ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳ ಪರೀಕ್ಷೆಗಳು ನಡೆಯುವ ಸಾಧ್ಯತೆಗಳಿವೆ.
ಈಗಾಗಲೇ ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್) ವೇಳಾಪಟ್ಟಿ ಪ್ರಕಟಿಸಿದ್ದು, ಫೆ. 22ರಿಂದ ಅಂತಿಮ ವರ್ಷದ ಎಂಬಿಬಿಎಸ್ ಪರೀಕ್ಷೆಗಳು ಆರಂಭವಾಗುತ್ತಿವೆ.
ಕ್ಲಿನಿಕಲ್ ಪೋಸ್ಟಿಂಗ್ ಆಗಿಲ್ಲ
ಆದರೆ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಕೊರೊನಾ ಕಾರಣದಿಂದ ತಡವಾಗಿ ಮೇ- ಜೂನ್ ತಿಂಗಳಿನಲ್ಲಿ ತರಗತಿಗಳು ಆರಂಭವಾಗಿವೆ. ಬಳಿಕವೂ ಆನ್‌ಲೈನ್‌ನಲ್ಲಿ ತರಗತಿಗಳು ನಡೆದಿದ್ದು, ಅಗತ್ಯವಿದ್ದಷ್ಟು ಕ್ಲಿನಿಕಲ್ ಪೋಸ್ಟಿಂಗ್ ಸಹ ಆಗಿರುವುದಿಲ್ಲ. ಅಂತಿಮ ವರ್ಷದ ವಿದ್ಯಾರ್ಥಿಗಳು ಕೊರೊನಾ ಸಂದರ್ಭದಲ್ಲಿ ಕೆಲವು ತಿಂಗಳುಗಳ ಕಾಲ ಕೊರೊನಾ ಕರ್ತವ್ಯ ನಿರ್ವಹಿಸಿದ್ದಾರೆ. ಮತ್ತೆ ಕೊರೊನಾ ಮೂರನೇ ಅಲೆಯಲ್ಲಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ಶೈಕ್ಷಣಿಕ ವೇಳಾಪಟ್ಟಿ ಪ್ರಕಾರ ಪರೀಕ್ಷೆ ತಯಾರಿಗೆ ಸಮಯ ಕಡಿಮೆ ಇರುವುದರಿಂದ ಪರೀಕ್ಷೆ ವೇಳಾಪಟ್ಟಿಯನ್ನು ಮುಂದೂಡುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್ ಅವರು ಆರೋಗ್ಯ ವಿವಿ ಕುಲಪತಿಗಳಿಗೆ ಸೋಮವಾರ ಪತ್ರ ಬರೆದಿದ್ದರು.
ಇದನ್ನೂ ಓದಿ:ಸುಗಮ ಕಲಾಪಕ್ಕೆ ಸಂಸದರು ನೆರವು ನೀಡಲಿ: ರಾಜ್ಯಸಭೆ ಸಭಾಪತಿ
ವಿಳಂಬ ಮಾಡಿದರೆ ಸಮಸ್ಯೆ
ಈ ಕುರಿತು ಪ್ರತಿಕ್ರಿಯಿಸಿದ ಆರೋಗ್ಯ ವಿವಿ ಮೂಲಗಳು, ಪ್ರಸಕ್ತ ಶೈಕ್ಷಣಿಕ ವರ್ಷದ ಪರೀಕ್ಷೆಯನ್ನು ತಡವಾಗಿ ನಡೆಸಿ ಫಲಿತಾಂಶ ನೀಡಲು ವಿಳಂಬ ಮಾಡಿದರೆ, ವೈದ್ಯಕೀಯ ಪದವಿ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಸಮಸ್ಯೆಯಾಗುತ್ತದೆ.
ವಂಚಿತರಾಗುವ ಸಾಧ್ಯತೆ
ಎಪ್ರಿಲ್‌ನೊಳಗೆ ಫಲಿತಾಂಶ ನೀಡಿದರೆ, ಮುಂದಿನ ಡಿಸೆಂಬರ್- ಜನವರಿಯಲ್ಲಿ ನಡೆಯಲಿರುವ ಪಿಜಿ-ನೀಟ್ ಪ್ರವೇಶಕ್ಕೆ ಅನುಕೂಲವಾಗಲಿದೆ. ಇಲ್ಲವಾದಲ್ಲಿ ಪ್ರಸಕ್ತ ಸಾಲಿನ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪ್ರವೇಶದಿಂದ ವಂಚಿತರಾಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ನಿಗದಿತ ಸಮಯದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.