China: ಅಗ್ನಿ ಅವಘಡ- 26 ಮಂದಿ ಸಾವು
Team Udayavani, Nov 16, 2023, 8:44 PM IST
ಬೀಜಿಂಗ್: ಚೀನಾದ ಶಾಕ್ಸಿ ಪ್ರಾಂತ್ಯದ ಕಲ್ಲಿದ್ದಲು ಕಂಪನಿಯ ಕಟ್ಟಡದಲ್ಲಿ ಗುರುವಾರ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ 26 ಮಂದಿ ಮೃತಪಟ್ಟಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಚೀನಾದ ಲಿಶಿ ಜಿಲ್ಲೆಯ ಲ್ಯುಲಿಯಾಂಗ್ ನಗರದಲ್ಲಿ ಖಾಸಗಿ ಕಲ್ಲಿದ್ದಲು ಕಂಪನಿಗೆ ಸೇರಿದ ಐದು ಹಂತಸ್ತಿನ ಕಟ್ಟಡದ ಎರಡನೇ ಮಹಡಿಯಲ್ಲಿ ಗುರುವಾರ ಸ್ಥಳೀಯ ಸಮಯ ಬೆಳಗ್ಗೆ 6.50ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಘಟನೆಯಲ್ಲಿ 26 ಮಂದಿ ಅಸುನೀಗಿದ್ದು, ಗಾಯಗೊಂಡ 60ಕ್ಕೂ ಹೆಚ್ಚು ಜನರನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ಬೆಂಕಿಯನ್ನು ತಹಬದಿಗೆ ತರಲಾಗಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಸಮರ್ಪಕವಾಗಿ ಸುರಕ್ಷತಾ ಮಾನದಂಡಗಳು ಜಾರಿಯಾಗದಿರುವ ಹಿನ್ನೆಲೆಯಲ್ಲಿ ಚೀನಾದಲ್ಲಿ ಕೈಗಾರಿಕಾ ಅಪಘಾತಗಳು ಸಾಮಾನ್ಯವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
Netanyahu ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯದಿಂದ ಬಂಧನ ವಾರಂಟ್
Russia ದಿಂದ ಉಕ್ರೇನ್ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ
Chrome Browser: ಗೂಗಲ್ ಸರ್ಚ್ ಎಂಜಿನ್ ಕ್ರೋಮ್ ಮಾರಾಟ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.