Attibele: ಪಟಾಕಿ ದುರಂತ ತನಿಖೆ ಸಿಐಡಿಗೆ: ಸಿಎಂ ಘೋಷಣೆ
Team Udayavani, Oct 9, 2023, 12:06 AM IST
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆ ಗೋದಾಮಿನಲ್ಲಿ ಸಂಭವಿಸಿದ ಪಟಾಕಿ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ. ಐದಾರು ಮಂದಿ ಗಂಭೀರವಾಗಿ ಗಾಯ ಗೊಂಡಿದ್ದಾರೆ. ಪ್ರಕರಣ ವನ್ನು ಸಿಐಡಿ ತನಿಖೆಗೆ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಭವಿಷ್ಯ ದಲ್ಲಿ ಪಟಾಕಿ ದುರಂತಗಳು ನಡೆಯದಂತೆ ನೀತಿ ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಕಟಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ರಾಮ ಲಿಂಗಾರೆಡ್ಡಿ, ಭೈರತಿ ಸುರೇಶ್ ರವಿವಾರ ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.
ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಲ್ಲದೆ, ಗಾಯಾಳುಗಳ ಸ್ಥಿತಿಗತಿಯನ್ನೂ ವಿಚಾರಿಸಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿರುವ ರಾಜ್ಯ ಸರಕಾರ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವ ಭರವಸೆ ನೀಡಿದೆ.
ದುರದೃಷ್ಟಕರ: ಸಿಎಂ
ಪಟಾಕಿ ದುರಂತದಲ್ಲಿ 14 ಮಂದಿ ಮೃತಪಟ್ಟಿರುವುದು ದುರದೃಷ್ಟಕರ ಎಂದು ಸಿಎಂ ಸಿದ್ದರಾಮಯ್ಯ ದುಃಖೀಸಿದ್ದಾರೆ. ಸ್ಫೋಟಕಗಳನ್ನು ಮಾರಾಟ ಮಾಡುವ ಗೋದಾಮಿನಲ್ಲಿ ಸುರಕ್ಷ ಕ್ರಮಗಳನ್ನು ತೆಗೆದುಕೊಂಡಿರಲಿಲ್ಲ ಎಂಬುದು ಅಧಿಕಾರಿಗಳ ಪರಿಶೀಲನೆ ವೇಳೆ ಕಂಡುಬಂದಿದೆ ಎಂದರು.
ನಿರ್ಲಕ್ಷ್ಯ ಪತ್ತೆ
ಗೋದಾಮಿನಲ್ಲಿ ಪಟಾಕಿ ಇರಿಸಿದ್ದರೂ ಅಗ್ನಿಶಮನ ಉಪಕರಣಗಳನ್ನು ಇರಿಸಲಾಗಿರಲಿಲ್ಲ ಎಂಬ ಗೊತ್ತಾಗಿದೆ. ಹೀಗಾಗಿ ಮಾಲಕರ ನಿರ್ಲಕ್ಷ್ಯ ಮೇಲ್ನೋಟಕ್ಕೆ ಗೊತ್ತಾಗಿದೆ ಎಂದು ಸಿಎಂ ಹೇಳಿದರು. ಘಟನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ, ಧರ್ಮಪುರಿ ಮೂಲದ 14 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಕೆಲವರು ವಿದ್ಯಾರ್ಥಿಗಳಾಗಿದ್ದು, ರಜಾ ದಿನಗಳಲ್ಲಿ ಓದಿಗಾಗಿ ಹಣ ಸಂಪಾದನೆಗೆಂದು ಬಂದಿದ್ದರು. ಗೋದಾಮಿನಲ್ಲಿ ಅಗತ್ಯ ಮುನ್ನೆಚ್ಚರಿಕೆ, ಸುರಕ್ಷ ಕ್ರಮಗಳನ್ನು ಕೈಗೊಂಡಿರಲಿಲ್ಲ. ಗೋದಾಮು ಅಧಿಕೃತವೋ ಅಲ್ಲವೋ ಎಂಬುದನ್ನು ಪರಿಶೀಲಿಸಬೇಕಿದೆ ಎಂದರು.
ಘಟನೆ ಕುರಿತು ತನಿಖೆ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. 14 ಜನ ಮೃತಪಟ್ಟಿರುವುದು ದೊಡ್ಡ ದುರಂತ.
ಸಿದ್ದರಾಮಯ್ಯ, ಮುಖ್ಯಮಂತ್ರಿ
ಐವರ ವಿರುದ್ಧ ಪ್ರಕರಣ, ಮೂವರ ಬಂಧನ
ಘಟನೆ ಸಂಬಂಧ ಅತ್ತಿಬೆಲೆ ಠಾಣೆಯಲ್ಲಿ ಗೋದಾಮು ಮಾಲಕ ರಾಮ ಸ್ವಾಮಿ ರೆಡ್ಡಿ, ಆತನ ಪುತ್ರ ನವೀನ್ ರೆಡ್ಡಿ, ಗೋದಾಮು ಮ್ಯಾನೇಜರ್ ಲೋಕೇಶ್, ಜಾಗದ ಮಾಲಕರಾದ ಜಯಮ್ಮ, ಅನಿಲ್ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದುವರೆಗೆ ರಾಮಸ್ವಾಮಿ ರೆಡ್ಡಿ, ನವೀನ್ ರೆಡ್ಡಿ , ಅನಿಲ್ ರೆಡ್ಡಿಯನ್ನು ಬಂಧಿಸಲಾಗಿದೆ. ಇಬ್ಬರಿಗಾಗಿ ಶೋಧ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Director Guruprasad: ಖ್ಯಾತ ಸ್ಯಾಂಡಲ್‌ವುಡ್ ನಿರ್ದೇಶಕ ಗುರುಪ್ರಸಾದ್ ಆ*ತ್ಮಹತ್ಯೆ
Vijayapura: ವಕ್ಫ್ ವಿವಾದ… ನಾಳೆಯಿಂದ ಅಹೋರಾತ್ರಿ ಧರಣಿ ಆರಂಭ: ಶಾಸಕ ಯತ್ನಾಳ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
MUST WATCH
ಹೊಸ ಸೇರ್ಪಡೆ
Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು
Tollywood: ಲೋಕೇಶ್, ಪ್ರಶಾಂತ್ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್ ಎಂಟ್ರಿ?
UV Fusion: ಕುಟ್ಟಿ ತೆಯ್ಯಂ ಮಕ್ಕಳ ರೂಪದಲ್ಲಿ ಧೈವ
Sunday Market: ಶ್ರೀನಗರದ ಮಾರುಕಟ್ಟೆ ಬಳಿ ಉಗ್ರರಿಂದ ಗ್ರೆನೇಡ್ ದಾಳಿ… 10 ಮಂದಿಗೆ ಗಾಯ
UV Fusion: ಇತಿಹಾಸದಲ್ಲಿ ಮರೆಯಾದ ಭೈರಾದೇವಿಯ ಸಾಮ್ರಾಜ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.