ಗುಳೇದಗುಡ್ಡದಲ್ಲಿ ಹಾಡಹಗಲೇ ಫೈರಿಂಗ್

ಮಹಿಳೆಗೆ ಗುಂಡು ಹಾರಿಸಿ ಅಪರಿಚಿತ ಪರಾರಿ

Team Udayavani, May 9, 2022, 1:29 PM IST

9

ಗುಳೇದಗುಡ್ಡ: ನಿರ್ಮಾಣ ಹಂತದಲ್ಲಿರುವ ಮನೆಗೆ ಹಾಡಹಗಲೇ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಗೆ ಗುಂಡು ಹಾರಿಸಿ ಪರಾರಿಯಾದ ಘಟನೆ ಪಟ್ಟಣದ ಬಾದಾಮಿ ನಾಕಾ ಹತ್ತಿರದ ನಗ್ಲಿ ಪೇಟೆಯಲ್ಲಿ ನಡೆದಿದೆ.

ಪಟ್ಟಣದ ದ್ಯಾಮವ್ವ ಯಲ್ಲಪ್ಪ ಪೂಜಾರಿ ಊರ್ಫ್‌ ಕಕ್ಕೇರಿ(45) ಅಪರಿಚಿತ ವ್ಯಕ್ತಿಯ ಗುಂಡಿಗೆ ಬಲಿಯಾದ ಮಹಿಳೆ ಎಂದು ಗುರುತಿಸಲಾಗಿದೆ.

ಮಧ್ಯಾಹ್ನ 2 ಗಂಟೆ ಸುಮಾರಿಗೆ ಮನೆಯಲ್ಲಿ ಕಟ್ಟಡದ ಗೋಡೆಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಸಿನಿಮೀಯ ರೀತಿಯಲ್ಲಿ ಮಹಿ ಳೆಯ ಗುತ್ತಿಗೆಯ ಭಾಗಕ್ಕೆ ಎರಡು ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಗುಂಡಿನ ಸದ್ದಿಗೆ ಅಕ್ಕಪಕ್ಕದ ಜನರು ಬಂದು ನೋಡುತ್ತಿದ್ದಂತೆ ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದು ಮಹಿಳೆ ಒದ್ದಾಡುತ್ತಿದ್ದಳು. ಮಹಿಳೆಯನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.

ಘಟನೆ ವಿವರ: ಗುಂಡಿಗೆ ಬಲಿಯಾದ ಮಹಿಳೆ ದ್ಯಾಮವ್ವಳ ಗಂಡನ ಊರು ಪರ್ವತಿ ಗ್ರಾಮವಾಗಿದ್ದು, ಗಂಡ ತೀರಿಕೊಂಡ ಮೇಲೆ ತವರೂರಾದ ಗುಳೇದಗುಡ್ಡದಲ್ಲಿ ಬಂದು ವಾಸವಾಗಿದ್ದಳು. ಮಹಿಳೆಯ ಗಂಡ ತೀರಿಕೊಂಡು ಸುಮಾರು 10 ವರ್ಷ ಕಳೆದಿವೆ. ಮಹಿಳೆಗೆ ಎರಡು ಹೆಣ್ಣು ಮಕ್ಕಳಿದ್ದು ಅವರಿಬ್ಬರಿಗೂ ಮದುವೆ ಮಾಡಿಕೊಟ್ಟಿದ್ದಾಳೆ. ಮನೆ ಕಟ್ಟುತ್ತಿರುವ ಜಾಗೆಯ ವಿಷಯವಾಗಿ ಈ ಮಹಿಳೆಗೂ ಹಾಗೂ ಚಿಕ್ಕಪ್ಪನ ಮಗನ ನಡುವೆ ಆಸ್ತಿ ವಿವಾದ ಇತ್ತೆಂದು ಗುಂಡಿಗೆ ಬಲಿಯಾದ ಮಹಿಳೆಯ ಸಹೋದರ ಕನಕಪ್ಪ ಆರೋಪಿಸಿದ್ದಾನೆ.

ಅಧಿಕಾರಿಗಳ ಭೇಟಿ: ಘಟನಾ ಸ್ಥಳಕ್ಕೆ ಜಿಲ್ಲಾ ಪೊಲಿಸ್‌ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ, ಪ್ರಭಾರಿ ಡಿವೈಎಸ್‌ಪಿ ಪ್ರಭುಗೌಡ, ಪಿಎಸ್‌ಐ ಐ.ಎಂ.ದುಂಡಸಿ ಸೇರಿದಂತೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗುಳೇದಗುಡ್ಡದ ಬಾದಾಮಿ ನಾಕಾದ ಹತ್ತಿರ ಹೊರವಲಯದ ಕಟ್ಟಡ ನಡೆದಿರುವ ಮನೆಯಲ್ಲಿ ಫೈರಿಂಗ್‌ ನಡೆದ ಬಗ್ಗೆ ಅವಳ ಸಂಬಂಧಿಕರು ಮಾಹಿತಿ ನೀಡಿದ್ದಾರೆ. ಅಪರಿಚಿತ ವ್ಯಕ್ತಿಯ ಮಾಹಿತಿ ಸಿಕ್ಕಿಲ್ಲ. ಎಫ್‌ಐಆರ್‌ ದಾಖಲಿಸಿ, ಆರೋಪಿಗಳನ್ನು ಪತ್ತೆ ಹಚ್ಚುತ್ತೇವೆ. –ಲೋಕೇಶ ಜಗಲಾಸರ್‌, ಎಸ್ಪಿ, ಬಾಗಲಕೋಟೆ

ಟಾಪ್ ನ್ಯೂಸ್

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kulageri-cross

Kulageri Cross: ಹೂಳು ತುಂಬಿದ ಕಾಲುವೆ…ಪೋಲಾಗುತ್ತಿದೆ ಮಲಪ್ರಭಾ ಎಡದಂಡೆ ಕಾಲುವೆ ನೀರು…

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.