Election: ಮೊದಲು ಲೋಕಸಭೆ, 2ನೇ ಹಂತಕ್ಕೆ ಅಸೆಂಬ್ಲಿ ಚುನಾವಣೆ ಸಾಧ್ಯತೆ
ಕೋವಿಂದ್ ಸಮಿತಿ ಚಿಂತನೆ- ಜನರಿಂದ ಸಲಹೆಗಳ ಆಹ್ವಾನ
Team Udayavani, Jan 7, 2024, 12:42 AM IST
ಹೊಸದಿಲ್ಲಿ: “ಒಂದು ದೇಶ ಒಂದು ಚುನಾವಣೆ’ ಸಂಬಂಧ ರಚನೆಗೊಂಡಿರುವ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಸಮಿತಿ ದೇಶದಲ್ಲಿ 2 ಹಂತಗಳಲ್ಲಿ ಚುನಾವಣೆ ನಡೆಸಲು ಶಿಫಾರಸು ಮಾಡುವ ಸಾಧ್ಯತೆಗಳು ಇವೆ.
ಮೊದಲ ಹಂತದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ಹಾಗೂ ಎರಡನೇ ಹಂತದಲ್ಲಿ ಸ್ಥಳೀಯ ಚುನಾವಣೆಗಳನ್ನು ಕೈಗೊಳ್ಳುವ ಸಾಧ್ಯತೆಗಳ ಕುರಿತು ಸಮಿತಿ ಚಿಂತನೆ ನಡೆಸಿದೆ. ಇದು “ಒಂದು ದೇಶ ಒಂದು ಚುನಾವಣೆ’ ಸಂಬಂಧ ಹಲವು ಪರಿಹಾರಗಳ ಪೈಕಿ ಒಂದು ಸೂತ್ರವಾಗಿದೆ. ದೇಶದ ವಿವಿಧ ಪ್ರದೇಶಗಳ ಹವಾಮಾನವನ್ನು ಗಮನದಲಿಟ್ಟುಕೊಂಡು, ಪ್ರಾಯೋಗಿಕವಾಗಿ ಸಾಧ್ಯವಾಗುವ ರೀತಿಯಲ್ಲಿ ಇದನ್ನು ಅನುಷ್ಠಾನಗೊಳಿಸಬೇಕಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕೋವಿಂದ್ ಸಮಿತಿ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿದೆ.
ಚುನಾವಣ ವೆಚ್ಚ ಹಾಗೂ ಮಾನವ ಸಂಪನ್ಮೂಲವನ್ನು ತಗ್ಗಿಸಲು ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆಗಳು ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಬೇಕೆಂದು 2018ರ ಆಗಸ್ಟ್‌ನಲ್ಲಿ ಕೇಂದ್ರ ಸರಕಾರದ ಪ್ರಸ್ತಾವವನ್ನು ಹಿಂದಿನ ಕಾನೂನು ಆಯೋಗವು ಅನುಮೋದಿಸಿತ್ತು. ನಿವೃತ್ತ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ ನೇತೃತ್ವದ ಪ್ರಸ್ತುತ ಕಾನೂನು ಸಮಿತಿಯು ಈ ಸಂಬಂಧ ತನ್ನ ವರದಿಯನ್ನು ಸಿದ್ಧಪಡಿಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ
Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ
Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.