Election: ಒಂದೇ ಹಂತದಲ್ಲಿ ಪಂಚ ರಾಜ್ಯ ಚುನಾವಣೆ?
- ನಾಳೆ ಅಥವಾ ಮಂಗಳವಾರ ವೇಳಾಪಟ್ಟಿ ಸಾಧ್ಯತೆ
Team Udayavani, Oct 6, 2023, 10:04 PM IST
ನವದೆಹಲಿ: ಬಹು ನಿರೀಕ್ಷಿತ ಪಂಚ ರಾಜ್ಯಗಳ ಚುನಾವಣೆ ಮುಂದಿನ ತಿಂಗಳ ಮಧ್ಯಭಾಗದಲ್ಲಿ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ನಡೆಯುವ ಸಾಧ್ಯತೆಗಳು ಇವೆ. ಅದರ ವೇಳಾಪಟ್ಟಿಯನ್ನು ಅ.8 ಅಥವಾ ಅ.10ರಂದು ಚುನಾವಣಾ ಆಯೋಗ ಪ್ರಕಟಿಸುವ ಸಾಧ್ಯತೆಗಳು ಇವೆ.
ಮುಂದಿನ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್ಗಢ, ತೆಲಂಗಾಣ, ಮಿಜೋರಾಮ್ ರಾಜ್ಯಗಳ ಚುನಾವಣೆ ಕೇಂದ್ರದಲ್ಲಿನ ಬಿಜೆಪಿ ನೇತೃತ್ವದ ಎನ್ಡಿಎ, ಕಾಂಗ್ರೆಸ್ ನೇತೃತ್ವದ ಐ.ಎನ್.ಡಿ.ಐ.ಎ. ಒಕ್ಕೂಟಕ್ಕೆ ಮಹತ್ವದ್ದಾಗಿದೆ. 2018ರಲ್ಲಿ ಈ ಐದೂ ರಾಜ್ಯಗಳ ವಿಧಾನಸಭೆ ಒಂದೇ ಹಂತದಲ್ಲಿ ನಡೆದಿತ್ತು. ಈ ಬಾರಿಯೂ ಅದೇ ಮಾದರಿ ಅನುಸರಿಸಿದರೂ, ದಿನಾಂಕಗಳು ಮಾತ್ರ ಬೇರೆ ಬೇರೆಯಾಗಿ ಇರುವ ಸಾಧ್ಯತೆಗಳು ಇವೆ ಎಂದು ಹೇಳಲಾಗಿದೆ.
ಉಚಿತ ಕೊಡುಗೆ: ಸುಪ್ರೀಂ ನೋಟಿಸ್
ಚುನಾವಣೆಗಳಿಗೆ ಮುನ್ನ ಮತದಾರರಿಗೆ ಉಚಿತ ಕೊಡುಗೆಗಳನ್ನು ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಪಿಐಎಲ್ ಅನ್ನು ವಿಚಾರಣೆಗೆ ಅಂಗೀಕರಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ನ್ಯಾ.ಜೆ.ಬಿ.ಪರ್ದಿವಾಲಾ, ನ್ಯಾ.ಮನೋಜ್ ಮಿಶ್ರಾ ಅವರನ್ನೊಳಗೊಂಡ ನ್ಯಾಯಪೀಠ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಕೇಂದ್ರ ಸರ್ಕಾರ, ಭಾರತದ ಚುನಾವಣಾ ಆಯೋಗ, ಆರ್ಬಿಐಗೆ ನೋಟಿಸ್ ಜಾರಿ ಮಾಡಿದೆ. ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳು ತೆರಿಗೆ ಪಾವತಿದಾರರ ಹಣ ಲೂಟಿ ಮಾಡುತ್ತಿವೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.